ಕರಾವಳಿಯ ಯಾರಿಗೆ ಸಚಿವಗಿರಿ?
ಕುತೂಹಲಕ್ಕೆ ಇಂದು ತೆರೆ ; ಹಲವು ಶಾಸಕರು ಬೆಂಗಳೂರಿಗೆ
Team Udayavani, Aug 20, 2019, 5:16 AM IST
ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕರಾವಳಿಯಲ್ಲಿ ಯಾರಿಗೆ ಸ್ಥಾನ ಲಭಿಸಬಹುದು ಎಂಬುದಾಗಿ ಒಂದು ತಿಂಗಳಿನಿಂದ ನೆಲೆಸಿದ್ದ ಕುತೂಹಲಕ್ಕೆ ಮಂಗಳವಾರ ತೆರೆ ಬೀಳುವ ಸಾಧ್ಯತೆಗಳಿವೆ. ಯಡಿಯೂರಪ್ಪ ಸಚಿವ ಸಂಪುಟ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯಿಂದ ಯಾರಿಗೆ ಸ್ಥಾನ ಸಿಗಲಿದೆ ಎಂಬುದು ನಿರ್ಧಾರವಾಗಲಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿರುವ ಸಂಭಾವ್ಯ ಸಚಿವರ ಪಟ್ಟಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಬಳಿ ಇದ್ದು, ತನ್ನದೇ ಮೂಲಗಳಿಂದ ಅಭಿಪ್ರಾಯಗಳನ್ನು ಕಲೆ ಹಾಕುತ್ತಿದ್ದಾರೆ. ಪ್ರಸ್ತುತ ಲಭ್ಯ ಮಾಹಿತಿ ಪ್ರಕಾರ, ಪ್ರಥಮ ಹಂತದಲ್ಲಿ 14 ಮಂದಿ ಮಾತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬಹುದು.
ದಕ್ಷಿಣ ಕನ್ನಡ ಮತ್ತು ಉಡುಪಿಗೆ ಒಂದೊಂದು ಸಚಿವ ಸ್ಥಾನ ದೊರೆಯಬಹುದು ಎಂದು ನಿರೀಕ್ಷಿಸಲಾಗಿದೆ.
ಹಿರಿಯ ಶಾಸಕರಿಗೆ ಪ್ರಾತಿನಿಧ್ಯ ನೀಡುವುದಾದರೆ ಸುಳ್ಯ ಕ್ಷೇತ್ರದಲ್ಲಿ 6 ಬಾರಿ ಗೆದ್ದಿರುವ ಅಂಗಾರ ಮತ್ತು ಕುಂದಾಪುರ ಕ್ಷೇತ್ರ ದಿಂದ 5 ಬಾರಿ ಗೆದ್ದಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸ್ಥಾನ ದೊರಕುವ ಸಾಧ್ಯತೆಗಳಿವೆ. ಪ್ರಸ್ತುತ ಮುಂಚೂಣಿಯಲ್ಲಿರುವುದು ಇವರಿಬ್ಬರ ಹೆಸರೇ. ಜತೆಗೆ ಉಭಯ ಜಿಲ್ಲೆಗಳಲ್ಲಿ ಪಕ್ಷದಲ್ಲಿ ಪ್ರಭಾವಿ ವಲಯದಲ್ಲಿರುವ
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಹೆಸರುಗಳೂ ಕೇಳಿಬರುತ್ತಿವೆ.
ಬುಡಮೇಲಾದೀತೇ ನಿರೀಕ್ಷೆ?
ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಮುಂದಿನ ತಂತ್ರಗಾರಿಕೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಅಮಿತ್ ಶಾ ಅವರು ಸಚಿವ ಸ್ಥಾನಗಳ ಹಂಚಿಕೆಯ ಲೆಕ್ಕಾಚಾರ ನಡೆಸುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಎರಡು ದಿನಗಳ ಹಿಂದೆ ನೀಡಿರುವ ಸಚಿವರ ಪಟ್ಟಿಗೆ ತತ್‌ಕ್ಷಣ ಅನುಮೋದನೆ ನೀಡಿಲ್ಲ ಎನ್ನಲಾಗಿದೆ. ಅಮಿತ್ ಶಾ ಅವರ ಲೆಕ್ಕಾಚಾರ ಪ್ರಸ್ತುತ ಚರ್ಚೆಯಲ್ಲಿರುವ ಸಚಿವರಾಗಬಲ್ಲವರ ಯಾದಿಯನ್ನು ಬುಡಮೇಲು ಮಾಡುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.
ಹೊಸಬರು – ಹಿರಿಯರ ಸಮ್ಮಿಶ್ರಣ
ಉಭಯ ಜಿಲ್ಲೆಗಳ ಒಟ್ಟು 13 ಶಾಸಕ ಸ್ಥಾನಗಳ ಪೈಕಿ ಹನ್ನೆರಡನ್ನು ಬಿಜೆಪಿ ಹೊಂದಿದೆ. ಇವರಲ್ಲಿ ಹೊಸಬರು ಮತ್ತು ಹಿರಿಯರ ಸಮ್ಮಿಶ್ರಣವಿದೆ. ಅನುಕ್ರಮವಾಗಿ ಆರು ಮತ್ತು ಐದು ಬಾರಿ ಆಯ್ಕೆಯಾಗಿರುವ ಅಂಗಾರ ಮತ್ತು ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಹಿರಿಯರು.
ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಡಾ| ಭರತ್ ಶೆಟ್ಟಿ ಯುವ ಶಾಸಕರು. ಉಮಾನಾಥ ಕೋಟ್ಯಾನ್, ರಾಜೇಶ್ ನಾೖಕ್, ಸಂಜೀವ ಮಠಂದೂರು, ಸುಕುಮಾರ ಶೆಟ್ಟಿ ಹೊಸ ಶಾಸಕರು. ಲಾಲಾಜಿ ಮೆಂಡನ್, ರಘುಪತಿ ಭಟ್ ತಲಾ 3 ಬಾರಿ ಶಾಸಕರಾದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.