ಅಣ್ಣಾಮಲೈ ದ.ಕ.ಎಸ್‌ಪಿ ಆಗುವರೇ ?
Team Udayavani, Jun 20, 2017, 3:18 PM IST
ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲೆ ಎಸ್‌ಪಿ ಆಗುವಂತೆ ನನಗೆ ಇದುವರೆಗೆ ಯಾರಿಂದಲೂ ಸೂಚನೆ ಬಂದಿಲ್ಲ’ ಎಂದು ಖಡಕ್ ಐಪಿಎಸ್ ಅಧಿಕಾರಿ ಎಂದೇ ಕರೆಸಿಕೊಂಡಿರುವ ಚಿಕ್ಕಮಗಳೂರು ಜಿಲ್ಲಾ ಎಸ್‌ಪಿ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ.
ಏಕೆಂದರೆ, ದಕ್ಷಿಣ ಕನ್ನಡ ಜಿಲ್ಲೆಯ ಸದ್ಯದ ಕಾನೂನು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರವು ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ ಅವರನ್ನು ಶೀಘ್ರದಲ್ಲೇ ಜಿಲ್ಲೆಗೆ ವರ್ಗಾಯಿಸುತ್ತಾರೆ ಎನ್ನುವ ಸುದ್ದಿಯೊಂದು ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ಹರಿದಾಡುತ್ತಿದೆ. ಅಷ್ಟೇಅಲ್ಲ; ಅಣ್ಣಾಮಲೈ ಅವರು ದಕ್ಷಿಣ ಕನ್ನಡ ಜಿಲ್ಲೆ ಎಸ್‌ಪಿ ಆಗಿ ನೇಮಕಗೊಳಿಸುವುದಕ್ಕೆ ಬೆಂಬಲ ವ್ಯಕ್ತಪಡಿಸಿ ಈಗ ಸಾಮಾಜಿಕ ಜಾಲತಾಣಗಳಲ್ಲಿಯೂ ಸಾಕಷ್ಟು ಸಂದೇಶ, ಬರಹಗಳು ಹರಿದಾಡುತ್ತಿವೆ.
ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ
ಅವರೊಂದಿಗೆ ನಡೆಸಿದ ವಿವಾದಾತ್ಮಕ ಮಾತುಕತೆ ವೀಡಿಯೋ ಬಹಿರಂಗಗೊಂಡ ಬಳಿಕ ಅಣ್ಣಾಮಲೈ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ಬಂದಿವೆೆ. ಅಣ್ಣಾಮಲೈ ಅವರಂಥ ದಕ್ಷ ಹಾಗೂ ದಿಟ್ಟತನದ ಪೊಲೀಸ್ ಅಧಿಕಾರಿಯೇ ಸೂಕ್ತ ವ್ಯಕ್ತಿ ಎಂಬ ಅಭಿಪ್ರಾಯದ ಮಾತುಗಳು ಕೂಡ ಈಗ ಜಿಲ್ಲೆಯಲ್ಲಿ ವ್ಯಕ್ತವಾಗುತ್ತಿವೆ.
ಈ ನಡುವೆ, ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಮತ್ತು ಇತರ ಭಾಗಗಳಲ್ಲಿ ನಡೆಯುತ್ತಿರುವ ಕೆಲವೊಂದು ಅಹಿತಕರ
ಘಟನೆಗಳ ಹಿನ್ನೆಲೆಯಲ್ಲಿ ಅವುಗಳನ್ನು ನಿಯಂತ್ರಿಸಲು ಹಾಗೂ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ
ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಅಣ್ಣಾಮಲೈ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡುವ ಬಗ್ಗೆಯೂ ಸರಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿದೆ.
ಈ ಕುರಿತಂತೆ “ಉದಯವಾಣಿ’ ಸೋಮವಾರ ದೂರವಾಣಿ ಮೂಲಕ ಅಣ್ಣಾಮಲೈ ಅವರನ್ನು ಸಂಪರ್ಕಿಸಿದಾಗ, “ದ.ಕ. ಜಿಲ್ಲೆ ಎಸ್‌ಪಿ ಆಗುವ ಕುರಿತಂತೆ ಇಲ್ಲಿವರೆಗೆ ಯಾರು ಕೂಡ ಮಾತನಾಡಿಲ್ಲ. ನನಗೇನೂ ತಿಳಿದಿಲ್ಲ’ ಎಂದು ಹೇಳಿದ್ದಾರೆ.
ಅಣ್ಣಾಮಲೈ ಅವರು ಈ ಹಿಂದೆ ಉಡುಪಿಯಲ್ಲಿ ಎಸ್‌ಪಿ ಆಗಿ ಸೇವೆ ಸಲ್ಲಿಸಿದ್ದು, ಬಳಿಕ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.