ಆನ್ ಲೈನ್ ಶಿಕ್ಷಣದ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ: ಸುರೇಶ್ ಕುಮಾರ್
Team Udayavani, Jul 10, 2020, 4:02 PM IST
ಬಂಟ್ವಾಳ: ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣದ ಸಾಕಷ್ಟು ಆರೋಪಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ರಾಜ್ಯದಲ್ಲಿ ಹಿಂದೆ ಶಿಕ್ಷಣ ಸಚಿವರಾಗಿ ಕರ್ತವ್ಯ ನಿರ್ವಹಿಸಿದವರ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಅವರು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಳಿಕ ಪತ್ರಕರ್ತರ ಜತೆ ಮಾತನಾಡಿದರು.
ಖಾಸಗಿ ಶಾಲೆಗಳ ಶಿಕ್ಷಕರು ಸಂಬಳವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದು, ಅವರ ಸಹಕಾರ ನೀಡುವ ಕುರಿತು ಈಗಾಗಲೇ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘಗಳ ಅಧ್ಯಕ್ಷರಲ್ಲಿ ಮಾತುಕತೆ ನಡೆಸಿದ್ದು, ಪೂರಕ ಸ್ಪಂದನೆ ವ್ಯಕ್ತವಾಗಿದೆ. ಪರಿಸ್ಥಿತಿ ತಿಳಿಯಾದ ಬಳಿಕ ಶಾಲೆ ಪುನರಾರಂಭದ ಕುರಿತು ಪೋಷಕರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಡಾ.ಎಂ.ಮೋಹನ್ ಆಳ್ವ, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.