ಗೆದ್ದವರು ಬಿಜೆಪಿ ಅಭ್ಯರ್ಥಿ; ಸಂಭ್ರಮಿಸಿದ್ದು ಕಾಂಗ್ರೆಸಿಗರು!
Team Udayavani, Mar 30, 2018, 12:58 PM IST
ಸುಬ್ರಹ್ಮಣ್ಯ: ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆಂದು ಅವರ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ನಡೆಸಿ ಸಂಭ್ರಮಿಸಿದರು. ಆದರೆ ಫಲಿತಾಂಶ ಪ್ರಕಟಗೊಂಡು ಬಿಜೆಪಿ ಅಭ್ಯರ್ಥಿ ಗೆದ್ದಿದ್ದು ಕಂಡು ಪೇಚಿಗೆ ಸಿಲುಕಿಕೊಂಡು ಮುಜುಗರ ಅನುಭವಿಸಿದರು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯ ತಾಲೂಕಿನಲ್ಲಿ ನಡೆದ ಮತ ಎಣಿಕೆ ವೇಳೆಗೆ ನಡೆದ ಸ್ವಾರಸ್ಯಕರ ಘಟನೆ ಇದು.
ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಈ ಹಿಂದೆ 2013ರಲ್ಲಿ ಚುನಾವಣೆ ನಡೆದು ಮತ ಎಣಿಕೆ ನಡೆಯುವ ವೇಳೆ ಅಚ್ಚರಿಯ ಘಟನೆ ನಡೆದಿತ್ತು. ಇಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಈ ಎರಡು ಪಕ್ಷಗಳ ನಡುವೆ ತೀವ್ರ ತರಹದ ಪೈಪೋಟಿ ನಡೆದಿತ್ತು. ಕಾಂಗ್ರೆಸ್ನ ಡಾ| ರಘು ಅಭ್ಯರ್ಥಿಯಾಗಿ ಕಣದಲ್ಲಿದ್ದರು. ಎಸ್. ಅಂಗಾರ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಮತ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭ ಆರಂಭದಿಂದಲೂ ಡಾ| ರಘು ಮುನ್ನಡೆ ಸಾಧಿಸಿದ್ದರು. ಮತ ಎಣಿಕೆ ಮುಕ್ಕಾಲು ಭಾಗ ಪೂರ್ತಿಗೊಳ್ಳುತ್ತಿದ್ದಂತೆ ಕೆಲವು ಚಾನೆಲ್ಗಳಲ್ಲಿ ಕಾಂಗ್ರೆಸ್ನ ಡಾ| ರಘು ಅವರು ವಿಜಯಿ ಎಂದು ಸುದ್ದಿ ಬಿತ್ತರವಾಯಿತು. ಹೀಗಾಗಿ ಸುಳ್ಯ ನಗರದಲ್ಲಿ ಗುಂಪು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಆದರೆ ಎಣಿಕೆ ಅಂತಿಮಗೊಂಡು ಫಲಿತಾಂಶ ಘೋಷಣೆಯಾದಾಗ ವಿಜಯಲಕ್ಷ್ಮಿಯು ಎಸ್. ಅಂಗಾರ ಅವರಿಗೆ ಒಲಿದಿದ್ದಳು. ಕಾಂಗ್ರೆಸ್ ಕಾರ್ಯಕರ್ತರು ನಿರಾಶೆಯಿಂದ ಅಲ್ಲಿಂದ ಜಾಗ ಖಾಲಿ ಮಾಡಿದ್ದರು.
ಬಿಜೆಪಿಯ ಅಭ್ಯರ್ಥಿ ಎಸ್. ಅಂಗಾರ ಅವರು 1,373 ಮತಗಳ ಅಂತರದಿಂದ ವಿಜಯಿಯಾಗಿದ್ದರು. ಬಿಜೆಪಿಯವರು 15,000ಕ್ಕೂ ಅಧಿಕ ಅಂತರದ ಗೆಲುವಿನ ನಿರೀಕ್ಷೆ ಹೊಂದಿದ್ದರು. ಆದರೆ ಮತಗಳ ಅಂತರದಲ್ಲಿ ತೀರಾ ಕುಸಿತವಾಗಿತ್ತು.
ಬಾಲಕೃಷ್ಣ ಭೀಮಗುಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.