ಮಹಿಳೆಯ ಸ್ಕೂಟರ್ ಪತ್ತೆ; ಶಂಕಿತರ ವಿಚಾರಣೆ
ಮಹಿಳೆಯನ್ನು ಕೊಂದು ಕತ್ತರಿಸಿದ ಪ್ರಕರಣ
Team Udayavani, May 14, 2019, 6:00 AM IST
ನಾಗುರಿಯಲ್ಲಿ ಪತ್ತೆಯಾದ ಮಹಿಳೆಯ ಸ್ಕೂಟರ್.
ಮಂಗಳೂರು: ನಗರದಲ್ಲಿ ನಡೆದ ಶ್ರೀಮತಿ ಶೆಟ್ಟಿ (35) ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಈ ಬಗ್ಗೆ ಕೆಲವು ಸಾಕ್ಷ್ಯಗಳು ಲಭಿಸಿದ್ದು, ನಾಲ್ವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೊಲೆಯಾದ ಶ್ರೀಮತಿ ಶೆಟ್ಟಿ ಅವರ ಸ್ಕೂಟರ್ ಸೋಮವಾರ ರಾತ್ರಿ ನಾಗುರಿ ಬಳಿ ರಸ್ತೆ ಬದಿ ಅನಾಥವಾಗಿ ಪತ್ತೆಯಾಗಿದೆ. ಸ್ಕೂಟರ್‌ನಲ್ಲಿದ್ದ ಕೆಲವು ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶ್ರೀಮತಿ ಶೆಟ್ಟಿ ಅವರನ್ನು ಭೀಭತ್ಸ ರೀತಿಯಲ್ಲಿ ಕೊಲೆ ಮಾಡಿ ದೇಹವನ್ನು ಕತ್ತರಿಸಿ ತಲೆಭಾಗವನ್ನು ಕದ್ರಿ ಪಾರ್ಕ್ ಬಳಿ ಹಾಗೂ ದೇಹದ ಭಾಗವನ್ನು ನಂದಿಗುಡ್ಡೆಯಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದರು. ಕಾಲಿನ ಪಾದದ ಭಾಗ ಇನ್ನೂ ಪತ್ತೆಯಾಗಿಲ್ಲ.
ರವಿವಾರ ಬೆಳಗ್ಗೆ ಮೃತದೇಹದ ಒಂದು ಭಾಗ ಕದ್ರಿ ಪಾರ್ಕ್ ಬಳಿಯ ಅಂಗಡಿಯೊಂದರ ಆವರಣದಲ್ಲಿ ಗೋಣಿಚೀಲದಲ್ಲಿ ಪತ್ತೆಯಾಗಿದ್ದು, ಸಂಜೆ ಶವ ಮಹಜರು ನಡೆಸಿ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.
ಸಿಸಿಟಿವಿಯಲ್ಲಿ ಸೆರೆ
ಮಹಿಳೆ ಶ್ರೀಮತಿ ಶೆಟ್ಟಿ ಅತ್ತಾವರ ಸಮೀಪ ಎಲೆಕ್ಟ್ರಿಕಲ್ ಉತ್ಪನ್ನಗಳ ದುರಸ್ತಿ ಅಂಗಡಿಯನ್ನು ನಡೆಸುತ್ತಿದ್ದರು. ಪ್ರತಿನಿತ್ಯ 9 ಗಂಟೆಗೆ ಅಂಗಡಿಗೆ ಹೋಗುತ್ತಿದ್ದರು. ಯಾವಾಗಲೂ ಕಾರಿನಲ್ಲಿ ತೆರಳುತ್ತಿದ್ದ ಶ್ರೀಮತಿ ಶೆಟ್ಟಿ ಶನಿವಾರ ಮಾತ್ರ ಸ್ಕೂಟರ್‌ನಲ್ಲಿ ತೆರಳಿದ್ದರು. ಆದರೆ ಅಂದು ಅಂಗಡಿಗೆ ತೆರಳಿರಲಿಲ್ಲ. ಬದಲಾಗಿ ಆಕೆ ತನ್ನ ಸ್ಕೂಟರ್‌ನಲ್ಲಿ ಅತ್ತಾವರದಿಂದ ಗೋರಿಗುಡ್ಡೆ ಕಡೆಗೆ ತೆರಳಿರುವುದು ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ.
ಅತ್ತಾವರದ ಕೆಎಂಸಿಯಿಂದ ಬಳಿಯಿಂದ ಬಿಳಿ ಬಣ್ಣದ ಸ್ಕೂಟರ್‌ನ್ನು ಚಲಾಯಿಸಿಕೊಂಡು ಮಹಿಳೆ ಹೊರಟಿದ್ದು, ಅಲ್ಲಿಂದ ಮಂಗಳಾ ಬಾರ್ ಮಾರ್ಗವಾಗಿ ರೋಶನಿ ನಿಲಯದ ಎದುರು ಭಾಗದಲ್ಲಿ ಮುಂದಕ್ಕೆ ಹೋಗಿದ್ದಾರೆ. ಮುಂದೆ ವೆಲೆನ್ಸಿಯಾ ಸರ್ಕಲ್‌ಗೆ ತೆರಳಿ ಅಲ್ಲಿಂದ ಬಲಕ್ಕೆ ತಿರುಗಿ ಗೋರಿಗುಡ್ಡ ಕಡೆಗೆ ಸುಮಾರು 9- 9:30ರ ನಡುವೆ ಹೋಗಿದ್ದಾರೆ.
ಆಕೆ ಕಪ್ಪು ಬಣ್ಣದ ಟಾಪ್, ಬಿಳಿ ಬಣ್ಣದ ಪ್ಯಾಂಟ್ ಧರಿಸಿ ತೆರಳುತ್ತಿರುವುದು ಸಿಸಿಟಿವಿ ಫೂಟೇಜ್‌ನಲ್ಲಿ ಕಂಡುಬಂದಿದೆ. ಇಲ್ಲಿನ ಸಿಸಿಟಿವಿ ಫೂಟೇಜ್‌ಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
ಜೈಲಿನಲ್ಲಿದ್ದ ಪತಿಯ ವಿಚಾರಣೆ
ಕೊಲೆಯಾದ ಶ್ರೀಮತಿ ಶೆಟ್ಟಿ ಅವರ 2ನೇ ಪತಿ ಸುದೀಪ್ ಮಂಗಳೂರಿನ ಜೈಲಿನಲ್ಲಿ ಇರುವುದರಿಂದ ತನಿಖಾ ತಂಡ ಸೋಮವಾರ ಜೈಲಿಗೆ ತೆರಳಿ ವಿಚಾರಣೆ ನಡೆಸಿದೆ. ಸುದೀಪ್ ಮೇಲೆ ನಗರದ ಕೆಲವು ಠಾಣೆಗಳಲ್ಲಿ ಕಳವು ಆರೋಪದ ಪ್ರಕರಣಗಳಿದ್ದ ಕಾರಣ ಆತ ಜೈಲು ಪಾಲಾಗಿದ್ದ. ಶ್ರೀಮತಿ ಶೆಟ್ಟಿ ಹಾಗೂ ಸುದೀಪ್ ಸಂಬಂಧದಲ್ಲಿಯೂ ಬಿರುಕು ಉಂಟಾಗಿದ್ದು ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲಾ ಗಿ ತ್ತು.ಈ ಹಿನ್ನೆಲೆಯಲ್ಲಿ ಸುದೀಪ್ ಪತ್ನಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಮೂರು ತಂಡಗಳಿಂದ ತನಿಖೆ
ಮಹಿಳೆ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಮಿಷನರ್ ಸಂದೀಪ್ ಪಾಟೀಲ್ ಅವರು ತನಿಖೆಗೆ ಮೂರು ತಂಡಗಳನ್ನು (ಕದ್ರಿ ಪೊಲೀಸ್ ಇನ್‌ಸ್ಪೆಕ್ಟರ್ ನೇತೃತ್ವದ ತಂಡ, ಸಿಸಿಬಿ ಪೊಲೀಸರ ತಂಡ ಮತ್ತು ಮಂಗಳೂರು ನಗರ ಕೇಂದ್ರೀಯ ಎಸಿಪಿ ನೇತೃತ್ವದ ತಂಡ) ರಚಿಸಿದ್ದು, ಮೂರೂ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.