ಸಂಸ್ಕಾರ, ಸಂಸ್ಕೃತಿ ಉಳಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ ಹಿರಿದು: ಸುಬ್ರಹ್ಮಣ್ಯ ಶ್ರೀ

ಮೂಡುತೋನ್ಸೆ ಬ್ರಹ್ಮಮಂಡಲೋತ್ಸವ ಸಂಪನ್ನ

Team Udayavani, May 2, 2019, 6:15 AM IST

16300105UDSG4

ಉಡುಪಿ: ಯಾವ ಮನೆಯಲ್ಲಿ ನಿತ್ಯವೂ ಹೊಸ್ತಿಲು ಪೂಜಿಸಿ, ರಂಗೋಲಿ ಬರೆದು, ತುಳಸಿಗೆ ದೀಪ ಹಚ್ಚಿ ಆರಾಧನೆ ಮಾಡಿ, ನಿತ್ಯ ಭಜನೆ ನೆರವೇರುತ್ತದೋ ಅಲ್ಲಿ ಸಾಕ್ಷಾತ್‌ ಭಗವಂತನ ಸನ್ನಿಧಾನ ತನ್ನಿಂತಾನೇ ಬಂದು ನೆಲೆಯಾಗುತ್ತದೆ. ಆಧುನಿಕತೆಯ ಸೋಗಿನಲ್ಲಿ ಹಿರಿಯರಿಂದ ಪರಂಪರಾಗತವಾಗಿ ಆಚರಿಸಿ ಕೊಂಡು ಬಂದಿರುವ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ವಿಸ್ತರಿಸುವಲ್ಲಿ ಮಹಿಳೆಯರ ಪಾತ್ರ ಹಿರಿದಾದುದು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಸತøಜೆಗಳನ್ನಾಗಿ ಬೆಳೆಸಿದಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ನುಡಿದರು.

ಮೂಡುತೋನ್ಸೆಯಲ್ಲಿ ರವಿವಾರ ನಡೆದ ಬ್ರಹ್ಮಮಂಡಲೋತ್ಸವ ಧಾರ್ಮಿಕ ಸಭೆಯನ್ನು ಉದ್ಘಾಟಿಸಿದ ಶ್ರೀಪಾದರು, ಇಂತಹ ಪರಂಪರಾಗತ ಆಚರಣೆಗಳಿಂದ ಕುಟುಂಬವೊಂದು ಒಂದೇ ಸೂರಿನಡಿ ಸೇರಲು ಉತ್ತಮ ಅವಕಾಶ ಕಲ್ಪಿಸಿಕೊಟ್ಟಂತಾಗುತ್ತದೆ ಎಂದು ಆಶೀರ್ವಚನ ನೀಡಿದರು.

ತೋನ್ಸೆ ಸಾಲ್ಯಾನ್‌ ಕುಟುಂಬಸ್ಥರ ನಾಗಬ್ರಹ್ಮ ಮೂಲಸ್ಥಾನ ಸಮಿತಿ ಅಧ್ಯಕ್ಷ ಕೆ. ಕೃಷ್ಣ ಸಾಲ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಮಂಡಲೋತ್ಸವ ರೂವಾರಿ ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಬ್ರಹ್ಮಮಂಡಲೋತ್ಸವ ಯಶಸ್ಸಿಗೆ ಸಹಕಾರ ನೀಡಿದ ಸರ್ವರನ್ನು ಸ್ಮರಿಸಿದರು.

ಕೆ.ಎಲ್‌. ಕುಂಡಂತಾಯ ಧಾರ್ಮಿಕ ಪ್ರವಚನ ನೀಡಿ, ಧಾರ್ಮಿಕ ಆಚರಣೆಗಳು ವೈಭವೀಕರಣದತ್ತ ಸಾಗದೆ ಸಹಜತೆಯಿಂದ ಕೂಡಿರಬೇಕೆಂದರು.

ನಾಗಪಾತ್ರಿ ಕಲ್ಲಂಗಳ ರಾಮಚಂದ್ರ ಕುಂಜತ್ತಾಯ, ವೇ| ಮೂ| ಕೃಷ್ಣಮೂರ್ತಿ ತಂತ್ರಿ, ತೋನ್ಸೆ ಸಾಲ್ಯಾನ್‌ ಕುಟುಂಬಸ್ಥರ ನಾಗಬ್ರಹ್ಮ ಮೂಲಸ್ಥಾನ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ಬ್ರಹ್ಮಮಂಡಲೋತ್ಸವದ ಯಶಸ್ಸಿಗೆ ಸಹಕರಿಸಿದ ತೋನ್ಸೆ ಸಾಲ್ಯಾನ್‌ ಮೂಲಸ್ಥಾನ ಸಮಿತಿ ಕಾರ್ಯದರ್ಶಿ ನವೀಶ್‌ ನವೀನ್‌ ಚಂದ್ರ ಸಾಲ್ಯಾನ್‌, ಶಂಭು ಶಂಕರ ಸಾಲ್ಯಾನ್‌, ಕೃಷ್ಣ ಸಾಲ್ಯಾನ್‌, ಆನಂದ್‌ ಬಾಯರಿ, ದೊಡ್ಡಣಗುಡ್ಡೆ ಕ್ಷೇತ್ರ ಉಸ್ತುವಾರಿ ಕುಸುಮಾ ನಾಗರಾಜ್‌, ಸ್ಥಳದಾನಿಗಳಾದ ಶೇಖರ್‌ ಶೆಟ್ಟಿ, ದಿನೇಶ್‌ ಕರ್ಕೇರ ಹಾಗೂ ಸ್ಥಳೀಯರನ್ನು ಸುಬ್ರಹ್ಮಣ್ಯ ಶ್ರೀಪಾದರು ಸಮ್ಮಾನಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದ ಪ್ರಶಂಸಾ ತಂಡದ ಕಲಾವಿದರನ್ನು ಪ್ರಜ್ಞಾ ಇಂಟರ್‌ನ್ಯಾಶನಲ್‌ ಶಾಲಾ ಪ್ರಾಂಶುಪಾಲೆ ಉಷಾ ರಮಾನಂದ ಸಮ್ಮಾನಿಸಿದರು. ಸತೀಶ್‌ ಶೆಟ್ಟಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.