ಅಶಕ್ತರಿಗೆ ಮನೆ ನಿರ್ಮಾಣದ ಕೆಲಸವು ದೇವ ಕಾರ್ಯ: ಸತೀಶ್ ಅಡಪ್ಪ
Team Udayavani, Apr 30, 2019, 6:00 AM IST
ಮಹಾನಗರ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಸೋಮೇಶ್ವರ ಬಂಟರ ಸಂಘ, ಲಯನ್ಸ್ ಕ್ಲಬ್ ಕಾವೇರಿ, ಮಂಗಳೂರು ಸಹಯೋಗ ದೊಂದಿಗೆ ಸೋಮೇಶ್ವರ ಗ್ರಾಮದ ಪಿಲಾರ್ ದಾರಂದ ಬಾಗಿಲಿನಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಬಹುರೂಪಿತ ಕನಸಿನ “ಆಶ್ರಯ’ ಯೋಜನೆಯ ಮುಖಾಂತರ ವಿನೋದ ಶೆಟ್ಟಿ ಅವರಿಗೆ ಅವರ 2.5 ಸೆಂಟ್ಸ್ ಜಾಗದ ನಿವೇಶನದಲ್ಲಿ ನೂತನವಾಗಿ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಗೌರವ ಜತೆ ಕಾರ್ಯದರ್ಶಿ ಸತೀಶ್ ಅಡಪ್ಪ ಸಂಕಬೈಲ್ ಮಾತನಾಡಿ, ಅಶಕ್ತ ಫಲಾನುಭವಿಗಳಿಗೆ ಮನೆಯನ್ನು ನಿರ್ಮಿಸಿಕೊಡುವ ಕೆಲಸವು ಒಂದು ದೇವ ಕಾರ್ಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಭಾಗವಹಿಸಿ ಇಂತಹ ಯೋಜನೆಗಳು ಫಲಿಸುವುದು ಸ್ತುತ್ಯಾರ್ಹವಾದ ಒಂದು ಮಾದರಿ ನಡೆ ಎಂದು ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿಕಟಪೂರ್ವ ಗೌರವ ಕಾರ್ಯದರ್ಶಿ ವಿಜಯ ಪ್ರಸಾದ್ ಆಳ್ವ, ಲಯನ್ಸ್ ಜಿಲ್ಲಾ ಗವರ್ನರ್ ದೇವದಾಸ್ ಭಂಡಾರಿ, ಮಾಜಿ ಜಿಲ್ಲಾ ಲಯನ್ ಗವರ್ನರ್ ಕವಿತಾ ಶಾಸ್ತ್ರಿ ಶುಭ ಹಾರೈಸಿದರು.
ಸೋಮೇಶ್ವರ ಬಂಟರ ಸಂಘದ ಗೌರವ ಅಧ್ಯಕ್ಷ ಯು. ಸುಧಾಕರ್ ಭಂಡಾರಿ, ಅಧ್ಯಕ್ಷ ಪದ್ಮನಾಭ ಶೆಟ್ಟಿ ವರ್ಕಾಡಿ, ಪ್ರಧಾನ ಸಂಚಾಲಕ ಗಂಗಾಧರ ಶೆಟ್ಟಿ ಉಳ್ಳಾಲ, ಲಯನ್ಸ್ ಕ್ಲಬ್ ಕಾವೇರಿ ಅಧ್ಯಕ್ಷೆ ಶಾಲಿನಿ ರೈ, ಸೋಮೇಶ್ವರ ಬಂಟರ ಸಂಘದ ಯುವ ವಿಭಾಗದ ಅಧ್ಯಕ್ಷ ಯಶು ಪಕ್ಕಳ ತಲಪಾಡಿ, ಸದಸ್ಯರುಗಳಾದ ಮೋಹನ್ ಶೆಟ್ಟಿ ಕುಂಪಲ, ಗಣೇಶ್ ಶೆಟ್ಟಿ ಬೋಡಂಗಿಲ, ಆನಂದ್ ಶೆಟ್ಟಿ, ಪ್ರದೀಪ್ ಕಿಲ್ಲೆ, ರಾಜಾರಾಮ ಅಡ್ಯಂತಾಯ, ರವೀಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಒಕ್ಕೂಟದ ಸದಸ್ಯ ಪ್ರತಿನಿಧಿ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.