ಎತ್ತಿನಹೊಳೆ ಕಾಮಗಾರಿ ಅಭಿವೃದ್ಧಿ ಪರಿಶೀಲನೆ
Team Udayavani, Mar 8, 2017, 11:09 AM IST
ಬೆಳ್ತಂಗಡಿ: ಹಸಿರುಪೀಠದಲ್ಲಿ ವಾದ ವಿವಾದ ಮುಂದುವರಿದಿರುವಂತೆಯೇ ಎತ್ತಿನಹೊಳೆಯಲ್ಲಿ ಕಾಮಗಾರಿ ಮಾತ್ರ ಭರದಿಂದ ಸಾಗಿದೆ. ಅಧಿಕಾರಿಗಳ ತಂಡ ಮಂಗಳವಾರ ಕಾಮಗಾರಿ ಸ್ಥಳದಲ್ಲಿ ಈವರೆಗೆ ಆದ ಕಾಮಗಾರಿಯ ಅಭಿವೃದ್ಧಿಯನ್ನು ಪರಿಶೀಲನೆ ನಡೆಸಿತು.
ಸಚಿವ ಎಂ.ಬಿ. ಪಾಟೀಲ್ ಸೂಚನೆ ಮೇರೆಗೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿತು. ಈ ಬಗ್ಗೆ ಎಂ.ಬಿ. ಪಾಟೀಲ್ ಅವರು ಕೂಡ ಫೇಸ್‌ಬುಕ್‌ನಲ್ಲಿ ಸ್ಟೇಟಸ್ ಹಂಚಿಕೊಂಡಿದ್ದು ಎತ್ತಿನಹೊಳೆಯ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿವೆ. ರಾಜ್ಯದ ದಕ್ಷಿಣ ಭಾಗದಲ್ಲಿ ಕುಡಿಯುವ ನೀರಿನ ಅಭಾವವಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಿಕ್ಕಮಗಳೂರು, ತುಮಕೂರು, ಹಾಸನ ಜಿಲ್ಲೆಗಳ ಸುಮಾರು 68.35 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲು ಈ ಯೋಜನೆ ಸಹಕಾರಿ. ಎತ್ತಿನಹೊಳೆ ಯೋಜನೆಯ ಪ್ಯಾಕೇಜ್1ರ ವಿಯರ್ ನಿರ್ಮಾಣ, ರೈಸಿಂಗ್ ಮೈನ್ ಅಳವಡಿಸುವ ಕಾರ್ಯ ನಡೆಯುತ್ತಿದ್ದು ಪ್ಯಾಕೇಜ್2ರ ಪಂಪ್‌ಹೌಸ್ ನಿರ್ಮಾಣ ಕಾಮಗಾರಿಗಳು ಭರದಿಂದ ಸಾಗುತ್ತಿವೆ ಎಂದು ಹಾಕಿದ್ದಾರೆ. 4 ದಿನಗಳ ಹಿಂದೆ ಕೂಡ ಈ ಬಗ್ಗೆ ಅವರು ಬರೆದುಕೊಂಡಿದ್ದರು. ಇದರಲ್ಲಿ ಎಂಟು ನೀರು ಕೊಯ್ಲು ನಿರ್ಮಾಣಗಳ ಪೈಕಿ 6 ಪೂರ್ಣಗೊಂಡಿವೆ. ಬರುವ ಮುಂಗಾರಿನಲ್ಲಿ ನೀರನ್ನು ಶೇಖರಿಸಿ ಮುಖ್ಯ ಕಾಲುವೆಯ ಇಕ್ಕೆಲಗಳಲ್ಲಿ ಬರುವ ಒಣಗಿದ ಕೆರೆಗಳಿಗೆ ಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಈ ಮಧ್ಯೆ ಕಾಮಗಾರಿಯ ವಿವರಗಳು ಸ್ಥಳೀಯರಿಗೆ ಲಭ್ಯವಾಗುತ್ತಿಲ್ಲ. ಅಧಿಕಾರಿಗಳು ಕೂಡ ಸ್ಥಳೀಯರಿಗೆ ಮಾಹಿತಿ ನೀಡುತ್ತಿಲ್ಲ. ಹಸಿರುಪೀಠದಲ್ಲಿ ಇನ್ನೂ ಅಂತಿಮವಾದ ನಡೆದಿಲ್ಲ. ಹಾಗಾಗಿ ತೀರ್ಪು ಕೂಡ ವಿಳಂಬವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.