ವಿಶ್ವದರ್ಜೆಯ ರೈಲು ನಿಲ್ದಾಣ: ಪೂರಕ ಪ್ರಕ್ರಿಯೆಗಳು ಆರಂಭ
Team Udayavani, Jul 7, 2017, 3:45 AM IST
ಮಹಾನಗರ: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು 70 ಕೋಟಿ ರೂ. ವೆಚ್ಚದಲ್ಲಿ ವಿಶ್ವದರ್ಜೆಯ ರೈಲು ನಿಲ್ದಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪೂರಕ ಪ್ರಕ್ರಿಯೆಗಳು ಆರಂಭಗೊಂಡಿವೆೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.
ಪುರಭವನದ ಬಳಿಯಿಂದ ಸೆಂಟ್ರಲ್ ರೈಲು ನಿಲ್ದಾಣ ಸಂಪರ್ಕಿಸುವ ರಸ್ತೆಯನ್ನು ರೈಲ್ವೇ ಇಲಾಖೆ ವತಿಯಿಂದ ಕಾಂಕ್ರೀಟ್ ಹಾಕಿ ಅಭಿವೃದ್ಧಿಪಡಿಸಿದ್ದು, ಗುರುವಾರ ಸಂಸದರು ಉದ್ಘಾಟಿಸಿ, ವಿಶ್ವದರ್ಜೆ ರೈಲು ನಿಲ್ದಾಣವಾಗಿ ಅಭಿವೃದ್ಧಿ ಪಡಿಸುವ ಟೆಂಡರ್ ಪ್ರಕ್ರಿಯೆ ನಡೆಯುತ್ತಿವೆ ಎಂದು ತಿಳಿಸಿದರು.
ದುಃಸ್ಥಿತಿಯಲ್ಲಿದ್ದ ಈ ರಸ್ತೆಯನ್ನು ರೈಲು ಪ್ರಯಾಣಿಕರು ಮತ್ತು ಸ್ಥಳೀಯರ ಬೇಡಿಕೆಯಂತೆ ರೈಲ್ವೇ ಇಲಾಖೆ 40 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಿದೆ ಎಂದರು.
ನಗರದ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚುತ್ತಿದೆ. ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ಪ್ಲಾÂಟ್ಫಾರಂ, ಲಿಫ್ಟ್ ಒದಗಿಸುವ ಕೆಲಸ ಆಗಿದೆ. ಇನ್ನಷ್ಟು ಬೇಡಿಕೆಗಳಿದ್ದು, ಮುಂದಕ್ಕೆ ಅಭಿವೃದ್ಧಿಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅವರು ಪರಿಶೀಲಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ಕಾರ್ಪೊರೇಟರ್ಗಳಾದ ಪ್ರೇಮಾನಂದ ಶೆಟ್ಟಿ, ದಿವಾಕರ್, ಸುರೇಂದ್ರ, ದಕ್ಷಿಣ ರೈಲ್ವೇ ಪಾಲಾ^ಟ್ ವಿಭಾಗದ ಬಳಕೆದಾರರ ಸಲಹಾ ಸಮಿತಿ ಸದಸ್ಯ ಹನುಮಂತ ಕಾಮತ್, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ವೇದವ್ಯಾಸ ಕಾಮತ್, ರೈಲ್ವೇ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.