ವಿಶ್ವಕಪ್‌ ಕ್ರಿಕೆಟ್‌: ಬೆಟ್ಟಿಂಗ್‌ ದಂಧೆ ಮೇಲೆ ಪೊಲೀಸರ ಹದ್ದಿನ ಕಣ್ಣು !


Team Udayavani, May 31, 2019, 6:01 AM IST

patil

ವಿಶೇಷ ವರದಿ – ಮಹಾನಗರ: ವಿಶ್ವ ಕಪ್‌ ಏಕದಿನ ಕ್ರಿಕೆಟ್‌ ಪಂದ್ಯ ಆರಂಭವಾಗಿದ್ದು, ಮುಂದಿನ ಒಂದೂವರೆ ತಿಂಗಳು ಕ್ರಿಕೆಟ್‌ ಅಭಿಮಾನಿಗಳಿಗೆ ಹಬ್ಬದ ಸೀಸನ್‌. ಪಂದ್ಯ ಆಡಲಿರುವ 10 ತಂಡಗಳಲ್ಲಿ ಯಾರು ಗೆಲ್ಲುತ್ತಾರೆ ಮತ್ತು ಸೋಲುತ್ತಾರೆ ಎಂಬ ಕುತೂಹಲ ಕ್ರಿಕೆಟ್‌ ಪ್ರೇಮಿಗಳಿಗೆಲ್ಲ ಇರುವುದು ಸಹಜ.

ಕ್ರಿಕೆಟ್‌ನಲ್ಲಿ ಸೋಲು – ಗೆಲುವಿನ ಬಗ್ಗೆ ಬಾಜಿ ಕಟ್ಟುವುದು ಅಥವಾ ಬೆಟ್ಟಿಂಗ್‌ ನಡೆಸುವುದು ಹೊಸತೇ ನಲ್ಲ; ಇದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಪ್ರಸ್ತುತ ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ನಡೆಯುತ್ತಿರುವ ಈ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಕ್ಕೆ ಸಂಬಂಧಿಸಿಯೂ ಬೆಟ್ಟಿಂಗ್‌ ದಂಧೆ ನಡೆಯುವ ಎಲ್ಲ ಸಾಧ್ಯತೆಗಳಿವೆ.

ಮಂಗಳೂರಿನ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಅವರು ಬೆಟ್ಟಿಂಗ್‌ ದಂಧೆಯಲ್ಲಿ ತೊಡಗುವ ವರನ್ನು ಹೆಡೆಮುರಿ ಕಟ್ಟಿ ಜೈಲಿಗಟ್ಟಲು ಸನ್ನದ್ಧರಾಗಿದ್ದಾರೆ. ಈ ಕುರಿತು ವಿಶ್ವಕಪ್‌ ಕ್ರಿಕೆಟ್‌ ಪಂದ್ಯದ ಪ್ರಾರಂಭದ ದಿನವಾದ ಗುರುವಾರ ತಮ್ಮ ಟ್ವಿಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು ವಿಶ್ವಕಪ್‌ ಕ್ರಿಕೆಟ್‌ಗೆ ಸಂಬಂಧಿಸಿ ಬೆಟ್ಟಿಂಗ್‌ ವ್ಯವಹಾರದಲ್ಲಿ ತೊಡಗುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಎರಡು ತಿಂಗಳ ಹಿಂದೆ ನಡೆದ ಐಪಿಎಲ್‌ ಕ್ರಿಕೆಟ್‌ ಪಂದ್ಯಾ ಟದ ಸಂದರ್ಭ ಬೆಟ್ಟಿಂಗ್‌ ದಂಧೆಯ ವಿರುದ್ಧ ಧ್ವನಿ ಎತ್ತಿದ್ದ ಸಂದೀಪ್‌ ಪಾಟೀಲ್‌ ಅವರು ಬೆಟ್ಟಿಂಗ್‌ನಲ್ಲಿ ತೊಡಗುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳ ಲಾ ಗುವುದು ಎಂಬ ಸೂಚನೆ ನೀಡಿದ್ದರು. ಆದರೆ ಅವರ ಮುನ್ನೆಚ್ಚರಿಕೆಯನ್ನು ಕಡೆಗಣಿಸಿ ಕೆಲವರು ಬೆಟ್ಟಿಂಗ್‌ನಲ್ಲಿ ತೊಡಗಿದ್ದರು. ಆಗ ಆಯುಕ್ತರ ಸೂಚನೆಯಂತೆ ವಿವಿಧ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 18 ಪ್ರಕರಣಗಳನ್ನು ದಾಖಲಿಸಿದ್ದರು.
ಲೋಕಸಭಾ ಚುನಾವಣೆಯ ಮತಗಳ ಎಣಿಕೆಯ ದಿನ ಸಮೀಪಿಸುತ್ತಿದ್ದಂತೆ ಫಲಿತಾಂಶದ ಬಗ್ಗೆ ಬೆಟ್ಟಿಂಗ್‌ ನಡೆಯುವ ಸಾಧ್ಯತೆ ಇರುವುದನ್ನು ಗಮನಿಸಿ ಈ ಬಗ್ಗೆ ಎಚ್ಚರಿಕೆಯ ಸಂದೇಶವನ್ನು ಪೊಲೀಸ್‌ ಆಯುಕ್ತರು ನೀಡಿದ್ದರು. ಇದೀಗ ವಿಶ್ವಕಪ್‌ ಕ್ರಿಕೆಟ್‌ ಪಂದ್ಯ ಆರಂಭವಾಗುತ್ತಿದ್ದಂತೆ ಮತ್ತೆ ಎಚ್ಚರಿಕೆ ನೀಡಿದ್ದಾರೆ.

ಬೆಟ್ಟಿಂಗ್‌ ದಂಧೆಯಲ್ಲಿ ದೊಡ್ಡ ಮೊತ್ತದ ಹಣದ ವ್ಯವ ಹಾರ ನಡೆಯುತ್ತದೆ. ಕೆಲವರು ಹಣ ಗಳಿಸುವ, ಕೆಲವರು ಹಣ ಕಳೆದುಕೊಳ್ಳುವ ಈ ವ್ಯವಹಾರ ಸಾಮಾ ಜಿಕ ಸ್ವಾಸ್ತÂದ ದೃಷ್ಟಿಯಿಂದ ಒಳ್ಳೆಯದಲ್ಲ. ಹಲವು ಅನಪೇಕ್ಷಿತ ಘಟನೆಗಳಿಗೂ ಇದು ಕಾರಣವಾಗುವ ಸಾಧ್ಯ ತೆ ಯಿದೆ. ಆದ್ದರಿಂದ ಬೆಟ್ಟಿಂಗ್‌ ದಂಧೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ಲಭಿಸಿದಲ್ಲಿ ಸಂಬಂಧ ಪಟ್ಟ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ ಸಹಕರಿ ಸಬೇಕು ಎಂದು ಆಯಕ್ತ ಸಂದೀಪ್‌ ಪಾಟೀಲ್‌ ಮನವಿ ಮಾಡಿದ್ದಾರೆ.

ಆಯುಕ್ತರ ಟ್ವೀಟ್‌…
“ವಿಶ್ವ ಕಪ್‌ ಕ್ರಿಕೆಟ್‌ ಇಂದು ಆರಂಭವಾಗಿದೆ… ಅತ್ತ ಬ್ಯಾಟ್ಸ್‌ಮನ್‌ಗಳು ತಮ್ಮ ಅದ್ಭುತ ಬ್ಯಾಂಟಿಂಗ್‌ ಪ್ರದರ್ಶನ ನೀಡುವಾಗ ಇತ್ತ ಮಂಗಳೂರು ಪೊಲೀಸರು ಕ್ರಿಕೆಟ್‌ ಬೆಟ್ಟಿಂಗ್‌ ವಿರುದ್ಧ ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಲಿದ್ದಾರೆ…ಈ ಬಾರಿ ಕೂಡ ನಾವು ಬುಕ್ಕಿಗಳ ವಿರುದ್ಧ ಕಠಿನ ಕ್ರಮ ಕೈಗೊಂಡು ಅವರನ್ನು ಹೊಡೆದೋಡಿಸುತ್ತೇವೆ…’ ಎಂಬುದಾಗಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಟ್ವೀಟ್‌ ಮಾಡಿದ್ದಾರೆ.

 ಕಟ್ಟು ನಿಟ್ಟಿನ ಕ್ರಮ
ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಯ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಬೆಟ್ಟಿಂಗ್‌ ದಂಧೆಯ ವಿರುದ್ಧ ಮುಖ್ಯವಾಗಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ; ಜತೆಗೆ ಆಯಾ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿರುವ ಪೊಲೀಸರು ಕೂಡ ಈ ದಂಧೆಯ ಬಗ್ಗೆ ಕಣ್ಗಾವಲು ಇರಿಸುವರು. ಅಲ್ಲದೆ ಬುಕ್ಕಿಗಳ ಮೇಲೆ ವಿಶೇಷ ನಿಗಾ ವಹಿಸಲಾಗುವುದು.
 - ಸಂದೀಪ್‌ ಪಾಟೀಲ್‌,
ಪೊಲೀಸ್‌ ಆಯುಕ್ತರು

ಟಾಪ್ ನ್ಯೂಸ್

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.