ಸ್ವಚ್ಛತೆಗೆ ಹಿಂದೇಟು ಬೇಡ: ರಾಜೇಶ್‌ ನಾೖಕ್‌


Team Udayavani, Nov 20, 2018, 2:20 AM IST

rajesh-naik-19-11.jpg

ಬಂಟ್ವಾಳ: ಸ್ವಚ್ಛತೆ ನಮ್ಮ ಪ್ರತಿಯೊಬ್ಬರ ಆದ್ಯ ಕರ್ತವ್ಯ. ಸಾರ್ವಜನಿಕರನ್ನು ಸಂಘ- ಸಂಸ್ಥೆಗಳನ್ನು ಸೇರಿಕೊಂಡು ಸ್ವತ್ಛತೆಯ ನಿಟ್ಟಿನಲ್ಲಿ ಜನಸಾಮಾನ್ಯರಿಗೆ ಅರಿವು ಮೂಡಿಸುವ ಕ್ರಮ ನಿಜವಾದ ಸಾಮಾಜಿಕ ಕಳಕಳಿಯದ್ದು. ನಗರ ಪ್ರದೇಶಗಳಲ್ಲಿ ಶೌಚಾಲಯದ ಅಗತ್ಯ ಹೆಚ್ಚು ಇದೆ. ತಾಲೂಕಿನಲ್ಲಿ ಸ್ವಚ್ಛತೆಯ ಬಗ್ಗೆ ಅಧಿಕಾರಿಗಳು ಹಿಂದೇಟು ಹಾಕಬಾರದು ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು. ಅವರು ನ. 19ರಂದು ಬಿ.ಸಿ.ರೋಡ್‌ ಸ್ಪರ್ಶ ಕಲಾಮಂದಿರದಲ್ಲಿ ತಾಲೂಕು ಪಂಚಾಯತ್‌ ಬಂಟ್ವಾಳ ಮತ್ತು ಗ್ರಾಮ ಪಂಚಾ ಯತ್‌ಗಳ ಆಶ್ರಯದಲ್ಲಿ ನಡೆದ ವಿಶ್ವ ಶೌಚಾಲಯ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

ಜವಾಬ್ದಾರಿ ನೋಡಿಕೊಳ್ಳಿ
ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಪ್ರತಿನಿಧಿಗಳು ಜವಾಬ್ದಾರಿಯನ್ನು ಅರಿತುಕೊಂಡು ವಿಶೇಷ ಕಾಳಜಿಯಿಂದ  ಸರಕಾರದ  ಕಾರ್ಯವನ್ನು ಯಶಸ್ಸು ಮಾಡಲು ಪಣತೊಡಬೇಕು. ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಪ್ರಮಾಣದ ಒತ್ತುಕೊಡಬೇಕು. ಕಟ್ಟಡ ಪರವಾನಿಗೆ ನೀಡುವ ಸಂದರ್ಭದಲ್ಲಿಯೂ ಸ್ವಚ್ಛತೆಗೆ ಆದ್ಯತೆ ನೀಡಿ. ಕರ್ತವ್ಯದ ಜತೆ ಜವಾಬ್ದಾರಿಯನ್ನು ನೋಡಿಕೊಳ್ಳಿ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಜಿ.ಪಂ. ಸದಸ್ಯ ರಾದ ರವೀಂದ್ರ ಕಂಬಳಿ, ಚಂದ್ರಪ್ರಕಾಶ್‌ ಶೆಟ್ಟಿ,  ಬಿ.ಪದ್ಮಶೇಖರ್‌ ಜೈನ್‌, ಎಂ.ಎಸ್‌. ಮಹಮ್ಮದ್‌, ಮಂಜುಳಾ ಮಾವೆ, ಕಮಲಾಕ್ಷಿ ಕೆ.ಪೂಜಾರಿ, ಮಮತಾ ಗಟ್ಟಿ,  ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಆಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ  ಧನಲಕ್ಷ್ಮೀ ಸಿ. ಬಂಗೇರ, ತಹಶೀಲ್ದಾರ ಪುರಂದರ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌, ಗ್ರಾಮ ಪಂಚಾಯತ್‌ ಅಧ್ಯಕ್ಷರು ಹಾಗೂ ಸದಸ್ಯರು, ತಾಲೂಕಿನ  ಜನಪ್ರತಿನಿಧಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ತಾ.ಪಂ. ಸಿಬಂದಿ ಶಾಂಭವಿ ರಾವ್‌, ಪ್ರಶಾಂತ್‌, ಕುಶಾಲಪ್ಪ, ಚಂದ್ರಾವತಿ, ಅಶೋಕ್‌, ಲಕ್ಷಣ್‌, ಸುಂದರ್‌ ಸಹಕರಿಸಿದರು. ಬಂಟ್ವಾಳ ತಾ.ಪಂ. ಇ.ಒ. ರಾಜಣ್ಣ ಪ್ರಸ್ತಾವನೆ ನೀಡಿ ಸ್ವಾಗತಿಸಿದರು. ಪಿಡಿಒ ವಿಜಯಶಂಕರ ಆಳ್ವ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.

ಶೀಘ್ರ ಕಾರ್ಯ
ತಾಲೂಕಿನ ಪ್ರಮುಖ ನಗರದಲ್ಲಿಯೇ ಸಾರ್ವಜನಿಕ ಶೌಚಾಲಯ ಇಲ್ಲದಿರುವುದರ ಬಗ್ಗೆ ಪ್ರಸ್ತಾಪಿಸಿದ ಶಾಸಕರು, ಪುರಸಭೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಗೈರಾಗಿದ್ದಾರೆ. ಯಾರೂ ಕೂಡ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡಬಾರದು ಎಂದು ಎಚ್ಚರಿಸಿದರು. ತಾಲೂಕಿನಲ್ಲಿ ಯಾವ ಕಡೆಗಳಲ್ಲಿ ಶೌಚಾಲಯ ಬೇಕಾಗಿದೆ ಎಂದು ಪರಿಶೀಲನೆ ನಡೆಸಿ ಕೂಡಲೇ ಶೌಚಾಲಯ ನಿರ್ಮಾಣ ಕಾರ್ಯ ಶೀಘ್ರವಾಗಿ ಮಾಡಿ ಎಂದು ಇ.ಒ.ಅವರಿಗೆ ತಿಳಿಸಿದರು.

ಟಾಪ್ ನ್ಯೂಸ್

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.