ಮಂ. ವಿಮಾನ ನಿಲ್ದಾಣದಲ್ಲಿ 2 ಕೋ.ರೂ. ಮೌಲ್ಯದ 5 ಕೆ.ಜಿ. ಚಿನ್ನ ವಶ

ದಶಕದ ಅವಧಿಯ ಅತಿದೊಡ್ಡ ಅಕ್ರಮ ಬಂಗಾರ ಸಾಗಾಟ ಪ್ರಕರಣ

Team Udayavani, Jan 15, 2020, 2:20 AM IST

mk-44

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಏರ್‌ ಕಾರ್ಗೊ ಕಾಂಪ್ಲೆಕ್ಸ್‌ನಲ್ಲಿ ಯಂತ್ರೋಪಕರಣ ಹೆಸರಿನಲ್ಲಿ ಅಕ್ರಮವಾಗಿ ಕಳ್ಳ ಸಾಗಣಿಕೆ ಮಾಡುತ್ತಿದ್ದ 2 ಕೋಟಿ ರೂ. ಮೊತ್ತದ 5 ಕೆಜಿ ಬಂಗಾರವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಚಿನ್ನವನ್ನು ಅಕ್ರಮವಾಗಿ ಆಮದು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಉಡುಪಿಯ ಮೆಸರ್ಸ್‌ ಸ್ವರೂಪ್‌ ಮಿನರಲ್‌ ಪ್ರೈ.ಲಿ. ಎಂಬ ಕಂಪೆನಿಯ ಮನೋಹರ್‌ ಕುಮಾರ್‌ ಪೂಜಾರಿ ಮತ್ತು ಮಂಗಳೂರಿನ ಅಶೋಕನಗರ ನಿವಾಸಿ ಲೋಹಿತ್‌ ಶ್ರೀಯಾನ್‌ ಬಂಧಿತ ಆರೋಪಿಗಳು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಒಂದು ದಶಕದ ಅವಧಿಯಲ್ಲಿ ವಶಪಡಿಸಿಕೊಳ್ಳಲಾದ ಅತೀಹೆಚ್ಚು ಮೌಲ್ಯದ ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣ ಇದಾಗಿದೆ. ಸರಕು ಸಾಗಾಟ ಹೆಸರಿನಲ್ಲಿ ಈ ಚಿನ್ನವನ್ನು ವಿನೂತನ ಮಾದರಿಯಲ್ಲಿ ಯಂತ್ರದ ಸರಪಣಿಯಲ್ಲಿ ಅಡಗಿಸಿಟ್ಟು ಸಾಗಿಸ ಲಾಗುತ್ತಿತ್ತು.

ಮೆಸರ್ಸ್‌ ಸ್ವರೂಪ್‌ ಮಿನರಲ್‌ ಪ್ರೈ.ಲಿ. ಎಂಬ ಸಂಸ್ಥೆಯ ಮೈನಿಂಗ್‌ ಕನ್ವೇಯರ್‌ ಡ್ರೈವ್‌ ಚೈನ್‌ ಆಮದು ಮಾಡಿಕೊಳ್ಳುತ್ತಿತ್ತು. ಅದರೊಳಗೆ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಸುಳಿವು ದೊರಕಿದ್ದು ಈ ಬಗ್ಗೆ ನಿಗಾ ಇಡಲಾಗಿತ್ತು.

ಈ ಬಗ್ಗೆ ಬೆಂಗಳೂರು ಮತ್ತು ಮಂಗಳೂರು ಡಿಆರ್‌ಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಮನೋಹರ್‌ ಕುಮಾರ್‌ನನ್ನು ಬೆಂಗಳೂರಿನಲ್ಲಿ ಮತ್ತು ಲೋಹಿತ್‌ನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಡಿಆರ್‌ಐ ಉಪ ನಿರ್ದೇಶಕ ಶ್ರೇಯಸ್‌ ಕೆ.ಎಂ. ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.

ಸರಕು ಹೆಸರಿನಲ್ಲಿ ಸಾಗಾಟ
ಗಣಿ ಉದ್ಯಮದಲ್ಲಿ ಬಳಸುವ ಲೋಹದ ಕನ್ವೇಯರ್‌ ಡ್ರೈವ್‌ ಚೈನ್‌ನ ಒಳಭಾಗದಲ್ಲಿರಿಸಿ ಚಿನ್ನ ಕಳ್ಳಸಾಗಣೆ ಮಾಡಲಾಗಿತ್ತು. ಮೈನಿಂಗ್‌ ಕನ್ವೇಯರ್‌ ಡ್ರೈವ್‌ ಚೈನ್‌ಎಂಬ ಹೆಸರಿನ ಸರಕಿನಲ್ಲಿ ಈ ರೀತಿ ಚಿನ್ನವನ್ನು ಸರಪಣಿಯ ಉಬ್ಬಿನೊಳಗೆ ತುಂಬಿಸಿಡಲಾಗಿತ್ತು. ಆಮದು ಆಗಿರುವ ವಸ್ತುಗಳನ್ನು ಸ್ಕ್ಯಾನಿಂಗ್‌ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಂಶಯ ಬಂದು ತೀವ್ರವಾಗಿ ಪರಿಶೀಲನೆ ನಡೆಸಿದಾಗ ರಹಸ್ಯ ಬಯಲಾಯಿತು. ಬಜಪೆಯ ಸ್ಥಳೀಯ ಯಂತ್ರಗಳು ಹಾಗೂ ಲೇಥ್‌ ಮೆಷಿನ್‌ಗಳನ್ನು ಬಳಸಿ ಮೈನಿಂಗ್‌ ಕನ್ವೇಯರ್‌ ಬೆಲ್ಟ್ನ ಒಳಭಾಗದಲ್ಲಿ ಐದು ವೃತ್ತಾಕಾರದ ಚಿನ್ನದ ತಟ್ಟೆಗಳನ್ನು ಅಡಗಿಸಿಡಲಾಗಿದ್ದª 24 ಕ್ಯಾರೆಟ್‌ ಗುಣಮಟ್ಟದ ಒಟ್ಟು 4.995 ಕೆ.ಜಿ. ಚಿನ್ನವನ್ನು ಹೊರ ತೆಗೆಯಲಾಯಿತು. ಅಧಿಕೃತ ಚಿನ್ನಾಭರಣ ವ್ಯಾಪಾರಿಗಳಿಂದ ಇದನ್ನು ಪರಿಶೀಲಿಸಿ ಚಿನ್ನವೆಂದು ಖಾತ್ರಿ ಪಡಿಸಲಾಯಿತು.

ಟಾಪ್ ನ್ಯೂಸ್

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.