“ಯಕ್ಷಮಂಗಳ ಪ್ರಶಸ್ತಿ’ ಪ್ರದಾನ
Team Udayavani, Apr 18, 2017, 12:11 PM IST
ಉಳ್ಳಾಲ: ತೆಂಕುತಿಟ್ಟಿನ ಪ್ರಸಿದ್ಧ ಭಾಗವತ ಬಲಿಪ ನಾರಾಯಣ ಭಾಗವತ, ತಾಳಮದ್ದಳೆ ಅರ್ಥಧಾರಿ, ಸಂಶೋಧಕ ಡಾ| ಪ್ರಭಾಕರ ಜೋಶಿ, ಬಡಗುತಿಟ್ಟಿನ ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ ಮತ್ತು ಹಿಮ್ಮೇಳ ತಜ್ಞ ಗೋಪಾಲಕೃಷ್ಣ ಕುರುಪ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2016ನೇ ಸಾಲಿನ “ಯಕ್ಷಮಂಗಳ ಪ್ರಶಸ್ತಿ’ ಮತ್ತು ಡಾ| ಕಬ್ಬಿನಾಲೆ ವಸಂತ ಭಾರದ್ವಾಜ ಅವರ “ಯಕ್ಷಗಾನ ಕವಿ ಕಾವ್ಯ ವಿಹಾರ ಕೃತಿ’ಗೆ ಯಕ್ಷ
ಮಂಗಳ ಕೃತಿ ಪ್ರಶಸ್ತಿಯನ್ನು ಸೋಮವಾರ ಮಂಗಳಗಂಗೋತ್ರಿ ಮಂಗಳಾ ಸಭಾಂಗಣದಲ್ಲಿ ನಡೆದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರದಾನಿಸಲಾಯಿತು.
ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಮೋಹನ್ ಆಳ್ವ ಪ್ರಶಸ್ತಿ ಪ್ರದಾನ ಮಾಡಿದರು. ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕ ಪ್ರೊ| ಕೆ. ಚಿನ್ನಪ್ಪ ಗೌಡ ಅಭಿನಂದನ ಭಾಷಣ ಮಾಡಿದರು. ಪ್ರೊ| ಕೆ.ಎಂ. ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಡಾ| ಧನಂಜಯ ಕುಂಬ್ಳೆ ಸ್ವಾಗತಿಸಿದರು. ಡಾ| ರಾಜಶ್ರೀ ಕಾರ್ಯ ಕ್ರಮ ನಿರ್ವಹಿಸಿದರು. ಸತೀಶ್ ಕೊಣಾಜೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.