Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ
20 ರಾಜ್ಯಗಳ ಮುಖ್ಯನಗರಗಳಲ್ಲಿ75 ದಿನಗಳ ಕಾಲ ಯಕ್ಷಯಾನ
Team Udayavani, Jul 1, 2024, 5:39 PM IST
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ 9 ಮಂದಿ ಕಲಾವಿದರ ತಂಡ ಜು.9 ರಿಂದ ಅಮೆರಿಕದಲ್ಲಿ 75 ದಿನಗಳ ಕಾಲ ಯಕ್ಷಗಾನ ಅಭಿಯಾನ ನಡೆಸಲಿದೆ.
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಂಡದ ಹಿಮ್ಮೇಳ ಕಲಾವಿದ ಪಟ್ಲ ಸತೀಶ್ ಶೆಟ್ಟಿ ಅವರು, ಟ್ರಸ್ಟ್ ಅಮೆರಿಕ ಸರಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಟ್ರಸ್ಟ್‌ನ ಯುಎಸ್‌ಎ ಘಟಕದ ಅಧ್ಯಕ್ಷ ಡಾ| ಅರವಿಂದ ಉಪಾಧ್ಯಾಯ, ಡಾ| ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದ್ದು ಪೌರಾಣಿಕ ಕಥಾನಕಗಳನ್ನು ಆಯ್ದುಕೊಂಡು ಪ್ರದರ್ಶನ ನೀಡಲಾಗುವುದು. ಕೆಲವು ಕಡೆ ಕಿರು ತರಬೇತಿ ಶಿಬಿರ, ಪ್ರಾತ್ಯಕ್ಷಿಕೆಗಳು ಕೂಡ ನಡೆಯಲಿವೆ.
ಹಿಮ್ಮೇಳ ಕಲಾವಿದರಾಗಿ ಪದ್ಮನಾಭ ಉಪಾಧ್ಯ, ಚೈತನ್ಯ ಕೃಷ್ಣ ಪದ್ಯಾಣ, ಮುಮ್ಮೇಳದಲ್ಲಿ ಪ್ರೊ| ಎಂ.ಎಲ್.ಸಾಮಗ, ಹರಿನಾರಾಯಣ ಭಟ್ ಎಡನೀರು, ಚಂದ್ರಶೇಖರ ಧರ್ಮಸ್ಥಳ, ಮಹೇಶ ಮಣಿಯಾಣಿ, ಪ್ರಶಾಂತ್ ನೆಲ್ಯಾಡಿ, ಮೋಹನ ಬೆಳ್ಳಿಪಾಡಿ ಅವರು ತಂಡದಲ್ಲಿರುತ್ತಾರೆ. ಪುತ್ತಿಗೆ ಮಠಗಳು, ಕನ್ನಡ ಕೂಟದವರು, ಯಕ್ಷಗಾನ ಸಂಘದವರು, ದೇವಸ್ಥಾನಗಳು, ವಿವಿಧ ಸಂಘಗಳು ಸಹಕಾರ ನೀಡಲಿವೆ. ಇದೇ ವೇಳೆ ಎರಡು ವರ್ಷಗಳಿಗೊಮ್ಮೆ ಅಮೆರಿಕದಲ್ಲಿ ನಡೆಯುವ ‘ಅಕ್ಕ’ ಸಮ್ಮೇಳನದಲ್ಲಿಯೂ ತಂಡ ಕಾರ್ಯಕ್ರಮ ನೀಡಲಿದೆ ಎಂದವರು ತಿಳಿಸಿದರು.
20 ರಾಜ್ಯಗಳ ನಗರಗಳಲ್ಲಿ ಪ್ರದರ್ಶನ ಅಮೆರಿಕದ ಸ್ಯಾನೋಸೆ, ಸಿಯಾಟಲ್, ಫೀನಿಕ್ಸ್, ಲಾಸ್ ಎಂಜಲೀಸ್, ಆಸ್ಟಿನ್, ಹ್ಯೂಸ್ಟನ್, ಡೆಟ್ರೈಟ್, ಇಜಾಮ್ಸ್ ವಿಲ್ಲೆ, ಮೇರಿಲ್ಯಾಂಡ್, ಟಂಪಾ, ಮಿಲ್ವಾಕಿ, ಶಾರ್ಲೋಟ್, ರಾಲೆ, ಎಡಿಸನ್, ಕೊಲಂಬಸ್, ಬಾಸ್ಟನ್, ಒರ್ಲಾಂಡೊ, ಅಟ್ಲಾಂಟಾ, ಚಿಕಾಗೋ, ಡಲ್ಲಾಸ್, ನ್ಯೂಜೆರ್ಸಿ, ರಿಚ್ಮಂಡ್, ಎಡಿಸನ್ ಸೇರಿದಂತೆ ಅಮೆರಿಕದ 20 ರಾಜ್ಯಗಳ ಮುಖ್ಯನಗರಗಳಲ್ಲಿ ಅಭಿಯಾನ ನಡೆಯಲಿದೆ. ದೇಶದ ಕಲೆ, ಸಂಸ್ಕೃತಿಯನ್ನು ವಿದೇಶಗಳಲ್ಲಿ ಪಸರಿಸುವ ಪ್ರಯತ್ನ ಇದಾಗಿದೆ. ಕಳೆದ ವರ್ಷ ಯಕ್ಷಧ್ರುವ ಯಕ್ಷ ಶಿಕ್ಷಣದ ತಂಡ ಯುರೋಪ್ ಖಂಡದಲ್ಲಿ ಪ್ರದರ್ಶನ, ತರಬೇತಿ, ಪ್ರಾತ್ಯಕ್ಷಿಕೆ ನೀಡಿತ್ತು ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ತಂಡದ ಕಲಾವಿದರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.