ತೆಂಕಿನ ಪರಂಪರೆಯ ಭಾಗವತ ಪ್ರಸಾದ್ ಬಲಿಪ ವಿಧಿವಶ
Team Udayavani, Apr 11, 2022, 7:58 PM IST
ಮಂಗಳೂರು: ಯಕ್ಷಗಾನ ರಂಗದ ತೆಂಕುತಿಟ್ಟಿನ ಅಗ್ರಗಣ್ಯ ಬಲಿಪ ಪರಂಪರೆಯ ಕೊಂಡಿಯೊಂದು ಕಳಚಿ ಹೋಗಿದ್ದು, ಪ್ರಸಿದ್ಧ ಭಾಗವತ ಪ್ರಸಾದ ಬಲಿಪ ಅವರು ಸೋಮವಾರ ಇಹಲೋಕ ತ್ಯಜಿಸಿದ್ದಾರೆ.
ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ತನ್ನ ಪರಂಪರೆಯ ವಿಶಿಷ್ಟ ಕಂಚಿನ ಕಂಠದ ಮೂಲಕ ಅಪಾರ ಜನಪ್ರಿಯತೆ ಪಡೆದಿದ್ದರು. ಪ್ರಸಾದ್ ಅವರು ತಂದೆ ಖ್ಯಾತ ಭಾಗವತ ನಾರಾಯಣ ಬಲಿಪ , ಪತ್ನಿ, ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಪ್ರಸಾದ ಬಲಿಪರು ದೇವಿ ಮಹಾತ್ಮೆ, ಕಟೀಲು ಕ್ಷೇತ್ರ ಮಹಾತ್ಮೆ ಸೇರಿದಂತೆ ಏರು ಪದ್ಯಗಳ ಮೂಲಕ ಬಲಿಪ ಪರಂಪರೆಯ ಶೈಲಿಯ ಪ್ರತಿನಿಧಿಯಾಗಿ ಭಾಗವತನ ಸ್ಥಾನ ತುಂಬಿದ್ದರು.
ಗಣ್ಯರ ಸಂತಾಪ
ಸಚಿವ ಸುನಿಲ್ ಕುಮಾರ್, ಹಿರಿಯ ಯಕ್ಷಗಾನ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ, ಮೂಡುಬಿದಿರೆಯ ಯಕ್ಷ ಸಂಗಮದ ಸಂಚಾಲಕ ಎಂ. ಶಾಂತಾರಾಮ ಕುಡ್ವ, ಯಕ್ಷದೇವ ಮಿತ್ರಕಲಾ ಮಂಡಳಿಯ ದೇವಾನಂದ ಭಟ್, ಯಕ್ಷ ದೇಗುಲದ ಸಂಚಾಲಕ ಮಹಾವೀರ ಪಾಂಡಿ, ಯಕ್ಷ ಮೇನಕಾ ಸಂಚಾಲಕ ಸದಾಶಿವ ನೆಲ್ಲಿಮಾರು, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.