Tulu Movies”ಯಾನ್ ಸೂಪರ್ ಸ್ಟಾರ್’ ;ತುಳು ಸಿನೆಮಾ ನಾಳೆಯಿಂದ ತೆರೆಗೆ
Team Udayavani, Sep 21, 2023, 6:15 AM IST
ಮಂಗಳೂರು: ಆನಂದ ಫಿಲಂಸ್ ಮತ್ತು ದ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್’ ತುಳು ಚಲನ ಚಿತ್ರವು ಸೆ. 22ರಂದು ಕರಾವಳಿಯಾದ್ಯಂತ ತೆರೆ ಕಾಣಲಿದೆ.
ಚಿತ್ರ ನಿರ್ಮಾಪಕ ಹಾಗೂ ನಟ ದಯಾನಂದ ಶೆಟ್ಟಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಾನ್ ಸೂಪರ್ ಸ್ಟಾರ್ ಸಿನೆಮಾ ಮಂಗಳೂರಿನ ರೂಪವಾಣಿ, ಭಾರತ್ ಸಿನೆಮಾಸ್, ಪಿವಿಆರ್, ಸಿನನೆಪೊಲಿಸ್, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನೆಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನೆಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್‌ನಲ್ಲಿ ನಟರಾಜ್, ಸಿನೆಗ್ಯಾಲಕ್ಸಿ, ಪುತ್ತೂರಿನಲ್ಲಿ ಭಾರತ್ ಸಿನೆಮಾಸ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರದಲ್ಲಿ ತೆರೆ ಕಾಣಲಿದೆ.
ಸೆನ್ಸಾರ್‌ನಲ್ಲಿ ಯು ಎ ಸರ್ಟಿಫಿಕೆಟ್ ಪಡೆದುಕೊಂಡಿರುವ ಸಿನೆಮಾ ಮಂಡಳಿಯಿಂದ ಮೆಚ್ಚುಗೆ ಪಡೆದಿದೆ. ತುಳು ಸಿನೆಮಾರಂಗಕ್ಕೆ ಯಾನ್ ಸೂಪರ್ ಸ್ಟಾರ್ ಮೂಲಕ ಒಂದು ಸದಭಿರುಚಿಯ ಚಿತ್ರ ಲಭಿಸಲಿದೆ. ಕುಟುಂಬ ಸಮೇತ ಸಿನೆಮಾ ವೀಕ್ಷಿಸಬಹುದಾಗಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದರು.
ಮುಂಬಯಿ, ಪೂನಾ ಮತ್ತಿತರ ಕಡೆಗಳಲ್ಲಿ ಈಗಾಗಲೇ ಸಿನೆಮಾ ಪ್ರೀಮಿಯರ್ ಶೋ ನಡೆದಿದ್ದು, ಪ್ರೇಕ್ಷಕರಿಂದ ವ್ಯಾಪಕ ಮೆಚ್ಚುಗೆ ಪಡೆದುಕೊಂಡಿದೆ. ಬೆಂಗಳೂರು ಮತ್ತು ಗಲ್ಫ್ ದೇಶಗಳಲ್ಲೂ ಸಿನೆಮಾ ಬಿಡುಗಡೆಗೆ ತಯಾರಿ ನಡೆಯುತ್ತಿದೆ ಎಂದರು.
ಉಡುಪಿ ಸುತ್ತಮುತ್ತ ಒಂದೇ ಹಂತದಲ್ಲಿ 25 ದಿನಗಳ ಕಾಲ ಯಾನ್ ಸೂಪರ್ ಸ್ಟಾರ್ ಚಿತ್ರೀಕರಣ ನಡೆದಿತ್ತು. ಸಂತೋಷ್ ಶೆಟ್ಟಿ ಅವರ ಕಥೆಗೆ ಸಚಿನ್ ಶೆಟ್ಟಿ ಕುಂಬಳೆ ಸಂಭಾಷಣೆ ಬರೆದಿದ್ದಾರೆ. ವಿ. ಮನೋಹರ್ ಸಂಗೀತ ಒದಗಿಸಿದ್ದಾರೆ ಎಂದು ಹೇಳಿದ ಅವರು, ತುಳುವಿನಲ್ಲಿ ಇದೊಂದು ವಿಭಿನ್ನ ಸಿನೆಮಾ. ಕಾಮಿಡಿ ಹಾಗೂ ಸಂದೇಶ ಭರಿತ ಸಿನೆಮಾ ಇದಾಗಿದೆ ಎಂದವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಮ್ ಶೆಟ್ಟಿ, ಸಂಗೀತ ನಿರ್ದೇಶಕ ವಿ. ಮನೋಹರ್, ನಿರ್ದೇಶಕ ಸಂತೋಷ್ ಶೆಟ್ಟಿ, ನಟರಾದ ನವೀನ್ ಡಿ. ಪಡೀಲ್, ಹರೀಶ್ ವಾಸು ಶೆಟ್ಟಿ, ಛಾಯಾಗ್ರಾಹಕ ಕೃಷ್ಣ ರಾಜ್ ಕೋಟ್ಯಾನ್, ತಮ್ಮ ಲಕ್ಷ್ಮಣ ಉಪಸ್ಥಿತರಿದ್ದರು.
ಹಿಂದಿಯ “ಸಿಐಡಿ’ ಧಾರವಾಹಿಯ ತಂಡ!
ಜನಮನ್ನಣೆ ಪಡೆದಿರುವ ಸಿಐಡಿ ಧಾರಾವಾಹಿಯ ಮುಂಬಯಿ ಕಲಾವಿದರು ಈ ಸಿನೆಮಾದಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಲ್‌ರೊಂದಿಗೆ ತುಳುನಾಡಿನ ಖ್ಯಾತ ಕಲಾವಿದರಾದ ನವೀನ್ ಡಿ ಪಡೀಲ್, ಭೋಜರಾಜ ವಾಮಂಜೂರು, ಮಾನಸಿ ಸುಧೀರ್, ಅನ್ ಷಾ, ಅಶೋಕ್ ಪಕ್ಕಳ, ಅತಿಶ್ ಶೆಟ್ಟಿ, ಅರುಷ್ ಯು ಪೂಜಾರಿ, ಶ್ರೀಯಾ ಹೆಗ್ಡೆ ಮೊದಲಾದವರು ತಾರಾಗಣದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.