ಅಡಿಕೆಗೆ ಹಳದಿ ರೋಗ: ಪರಿಹಾರಕ್ಕೆ ಮನವಿ
Team Udayavani, Nov 11, 2017, 5:15 PM IST
ಬೆಳ್ಳಾರೆ: ಅಡಿಕೆ ಹಳದಿ ರೋಗ ಪೀಡಿತ ಪ್ರದೇಶದ ಕೃಷಿಕರ ಸಂಪೂರ್ಣ ಸಾಲ ಮನ್ನಾ ಮತ್ತು ಕೃಷಿಕರಿಗೆ ಜೀವೋನೋಪಾಯಕ್ಕಾಗಿ ಬದಲಿ ಜೀವನ ನಿರ್ವಹಣೆ ವಿಶೇಷ ಪ್ಯಾಕೇಜ್ ನೀಡಲು ಒತ್ತಾಯಿಸಿ ಅರಂತೋಡಿನಿಂದ – ಸುಳ್ಯದ ತನಕ ಸ್ಥಳೀಯರು ಪಾದಯಾತ್ರೆ ನಡೆಸಿ ಸುಳ್ಯದಲ್ಲಿ ನಡೆದ ಪರಿವರ್ತನಾ ಯಾತ್ರೆಗೆ ಆಗಮಿಸಿದ್ದ ಮಾಜಿ ಮುಖ್ಯ ಮುಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ
ಸಲ್ಲಿಸಿದ್ದಾರೆ.
ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ ತಾ.ಪಂ. ಸದಸ್ಯೆ ಪುಷ್ಪಾ ಮೇದಪ್ಪ, ನೀಲಾವತಿ ಕೊಡಂಕೇರಿ, ಶಿವಾನಂದ ಕುಕ್ಕುಂಬಳ, ಗಂಗಾಧರ ಬನ, ಚಿತ್ರಾ ದೇರಾಜೆ, ಅರಂತೋಡು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ವಿಹಿಂಪ ವಲಯ ಅಧ್ಯಕ್ಷ ಸೋಮಶೇಖರ್ ಪೈಕ, ಅರಂತೋಡು ದುರ್ಗಾ ಮಾತಾ ಭಜನ ಮಂಡಳಿ ಅಧ್ಯಕ್ಷ ಎಂ.ಎಂ. ನಾರಾಯಣ, ಎಪಿಎಂಸಿ ಸದಸ್ಯ ದೀಪಕ್ ಕುತ್ತಮೊಟ್ಟೆ, ಉಬಡ್ಕ ಗ್ರಾ.ಪಂ. ಅಧ್ಯಕ್ಷ ಹರೀಶ್ ಉಬರಡ್ಕಲ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕಿಶೋರ್‌ಕುಮಾರ್ ಉಳುವಾರು, ನಾಗೇಶ್ ಕುಂದಲ್ಪಾಡಿ, ಬಾಲಚಂದ್ರ ಕಳಗಿ, ಎ.ಸಿ. ಹೊನ್ನಪ್ಪ, ಮಂಜಪ್ಪ ಪೆರಾಜೆ , ಎನ್.ಎ. ರಾಮಚಂದ್ರ ಗಣಪತಿ ಭಟ್ ಮಜಿಗುಂಡಿ ಮೊದಲಾದವರು ಉಪಸ್ಥಿತರಿದ್ದರು.
ಅರಂಬೂರು ಬಳಿ ಸ್ಥಳೀಯರು, ಬಿಳಿಯಾರಿನಲ್ಲಿ ಹರೀಶ್ಚಂದ್ರ ಪಾನೀಯ ವ್ಯವಸ್ಥೆ ಮಾಡಿದ್ದರು. ಪಾದಯಾತ್ರೆಯಲ್ಲಿ ಸುಮಾರು ಮೂರು ಸಾವಿರ ಜನರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.