ಎತ್ತಿನಹೊಳೆ: ಅರ್ಧ ಕಾಮಗಾರಿ ಮುಗಿದ ಬಳಿಕ ನೀರು ಇದೆಯಾ ಟೆಸ್ಟಿಂಗ್‌!


Team Udayavani, May 26, 2018, 5:04 AM IST

yetthinahole-project-new-600.jpg

ಮಂಗಳೂರು: ಎತ್ತಿನಹೊಳೆ ಯೋಜನೆಯ ಮೂಲಕ ಬಯಲು ಸೀಮೆ ಜಿಲ್ಲೆಗಳಿಗೆ ನಿರೀಕ್ಷಿತ ನೀರು ಲಭ್ಯವಾಗುವುದಿಲ್ಲ ಎಂದು ವಿಜ್ಞಾನಿಗಳು, ನೀರಾವರಿ ತಜ್ಞರು ಹಾಗೂ ಪರಿಣತರು ಹೇಳುತ್ತಿದ್ದರೂ ಯಾವುದನ್ನೂ ಲೆಕ್ಕಿಸದೆ ಯೋಜನೆಗೆ ಮುಂದಾದ ಸರಕಾರಕ್ಕೆ ಇದೀಗ ದೊಡ್ಡ ಕಂಟಕವೊಂದು ಎದುರಾಗಿದೆ. ಯೋಜನೆಯ ಬಗ್ಗೆ ವಿಚಾರಣೆ ಕೈಗೊಂಡಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶದಂತೆ ಕಾಮಗಾರಿ ಕೈಗೊಳ್ಳುವ 8 ಅಣೆಕಟ್ಟುಗಳ ತಳಭಾಗದಲ್ಲಿ ನೀರಿನ ಪ್ರಮಾಣವನ್ನು ಅಳತೆ ಮಾಡುವ ‘ಟೆಲಿಮಿಟ್ರಿ ಸ್ಟೀಮ್‌ ಫ್ಲೋ ಮೀಟರ್’ ಅಳವಡಿಸುವಂತೆ ಸೂಚಿಸಿದೆ.

ನೇತ್ರಾವತಿ ಉಪನದಿಗಳಾದ ಎತ್ತಿನಹಳ್ಳ, ಕಾಡುಮನೆ ಹೊಳೆ, ಹೊಂಗದಹಳ್ಳ, ಕೇರಿಹೊಳೆಗೆ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ತಲಾ 2ರಂತೆ ಒಟ್ಟು 8 ಅಣೆಕಟ್ಟು ಕಟ್ಟುವ ಕಾಮಗಾರಿ ಈಗಾಗಲೇ ನಡೆಯುತ್ತಿದ್ದು, ಅದೇ ಜಾಗದಲ್ಲಿ ನೀರಿನ ಪ್ರಮಾಣ ಅಳವಡಿಕೆಗೆ ಮೀಟರ್‌ ಅಳವಡಿಸುವ ಪ್ರಕ್ರಿಯೆಯೂ ಇದೀಗ ನಡೆಯುತ್ತಿದೆ. ಜರ್ಮನಿ ಮೂಲದ ಕ್ಯಾನರಿ ಆಟೋಮೆಷನ್‌ ಪ್ರೈ.ಲಿ. ಕಂಪೆನಿಗೆ ಸಂಬಂಧಿಸಿದ ಮೀಟರ್‌ ಗಳನ್ನು ಅಳವಡಿಸಲಾಗುತ್ತಿದೆ.

8 ಅಣೆಕಟ್ಟುಗಳ ತಳಮಟ್ಟದಲ್ಲಿ ಇಡಲಾಗುವ ಮೀಟರ್‌ ನ ಸಹಾಯದಿಂದ ಆ ವ್ಯಾಪ್ತಿಯಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ? ಅದರಲ್ಲಿ ಎಷ್ಟು ನೀರನ್ನು ಬಯಲು ಸೀಮೆ ಭಾಗಕ್ಕೆ ಕಳುಹಿಸಲಾಗುವುದು ಹಾಗೂ ಕೆಳಾಭಿಮುಖವಾಗಿ (ದಕ್ಷಿಣ ಕನ್ನಡ ಕಡೆಗೆ) ಹರಿಯುವ ನೀರಿನ ಪ್ರಮಾಣ ಎಷ್ಟು ಎಂಬ ನಿಖರ ಮಾಹಿತಿಯನ್ನು ಸಂಗ್ರಹಿಸಬಹುದು. ಇದೇ ಅಂಶದ ಮಾನದಂಡವನ್ನು ನ್ಯಾಯಾಲಯದಲ್ಲಿ ವಿಚಾರಣೆ ಸಂದರ್ಭ ಪರಿಗಣಿಸುವ ಸಾಧ್ಯತೆಯೂ ಇದೆ.

ಎತ್ತಿನಹೊಳೆ ಯೋಜನೆಯ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ, ಅದರಲ್ಲಿಯೂ ಡ್ಯಾಂ ನಿರ್ಮಿಸುವ ಸ್ಥಳದಲ್ಲಿ ನೀರಿನ ಲಭ್ಯತೆ ಅಧಿಕವಾಗಿ ಕಾಮಗಾರಿ ನಡೆಸಲು ಕಷ್ಟವಾದ ಉದಾಹರಣೆ ಇಲ್ಲ. ಜತೆಗೆ ಡ್ಯಾಂ ನಿರ್ಮಿಸುವ ಸ್ಥಳದಲ್ಲಿ ನೀರು ಸಂಗ್ರಹಗೊಂಡು ಕಾಮಗಾರಿಗೆ ಸಮಸ್ಯೆ ಆಗಿರುವ ಬಗ್ಗೆಯೂ ವರದಿ ಇಲ್ಲ. ಹೀಗಿರುವಾಗ 24 ಟಿಎಂಸಿಯಷ್ಟು ನೀರು ಸಿಗಲಾರದು ಎಂದು ಗೊತ್ತಿದ್ದರೂ ಇದನ್ನು ಪರಿಗಣಿಸದೆ ಯೋಜನೆಯನ್ನು ಮುಂದುವರಿಸಿಕೊಂಡು ಬರಲಾಗುತ್ತಿರುವ ಸರಕಾರ ಈಗ ಉತ್ತರ ನೀಡಬೇಕಿದೆ ಎಂದು ಹೋರಾಟಗಾರರು ತಿಳಿಸುತ್ತಾರೆ.

ಈ ಬಗ್ಗೆ ‘ಉದಯವಾಣಿ’ ಜತೆಗೆ ಪ್ರತಿಕ್ರಿಯೆ ನೀಡಿದ ರಾಜ್ಯ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ ಅವರು, ‘ಎತ್ತಿನಹೊಳೆ ಯೋಜನಾ ಪ್ರದೇಶದ ಡ್ಯಾಂ ಭಾಗದಲ್ಲಿ ನೀರಿನ ಲಭ್ಯತೆಯ ಪ್ರಮಾಣವನ್ನು ಲೆಕ್ಕ ಹಾಕುವ ನೆಲೆಯಲ್ಲಿ ಮೀಟರ್‌ ಅಳವಡಿಸಲಾಗುತ್ತಿದೆ. ಈಗಾಗಲೇ ಇದರ ಕಾಮಗಾರಿ ಆರಂಭಗೊಂಡಿದೆ’ ಎಂದರು. 

3.3 ಕೋ.ರೂ.ಗಳ ಮೀಟರ್‌!
ಎತ್ತಿನಹೊಳೆ ಯೋಜನೆಗೆ ಸಾವಿರಾರು ಕೋ.ರೂ.ಗಳ ಅಂದಾಜು ವೆಚ್ಚದ ನಿರೀಕ್ಷೆ ಇದೆ. ಕಾಮಗಾರಿಯಿಂದಾಗಿ ಈಗಾಗಲೇ ಪಶ್ಚಿಮಘಟ್ಟ ಸೇರಿದಂತೆ ಪರಿಸರ ಸಂಪೂರ್ಣ ನಾಶವಾಗುವ ಆತಂಕದಲ್ಲಿದೆ. ಇಷ್ಟಿರುವಾಗಲೇ ಇದೀಗ ಎತ್ತಿನಹೊಳೆ ಪ್ರದೇಶದಲ್ಲಿ ನೀರು ಅಳತೆ ಮಾಡಲು ಅಳವಡಿಸುತ್ತಿರುವ ಜರ್ಮನ್‌ ತಂತ್ರಜ್ಞಾನದ ಮೀಟರ್‌ಗೆ 3.3 ಕೋ.ರೂ. ವೆಚ್ಚ ಮಾಡಲಾಗುತ್ತಿದೆ. 

‘ಸರಕಾರ ನೀರಿನ ಲೆಕ್ಕ ಈಗ ನೀಡಲಿ’
‘ದ.ಕ. ಜಿಲ್ಲೆಯ ವ್ಯಾಪಕ ವಿರೋಧದ ನಡುವೆಯೇ ತರಾತುರಿಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಕೈಗೆತ್ತಿಕೊಂಡು ಕಾಮಗಾರಿ ನಡೆಸಲಾಗುತ್ತಿದೆ. ಅಲ್ಲಿ ನೀರು ಇಲ್ಲ ಎಂದು ಹೇಳಿದರೂ ಕೂಡ ಕೇಳದ ಸರಕಾರ ನೀರು ಇದೆ ಎಂದು ಹಠ ತೋರಿಸಿತ್ತು. ಇದೀಗ ಅಲ್ಲಿನ ನೀರಿನ ಪ್ರಮಾಣದ ಬಗ್ಗೆ ಲೆಕ್ಕ ನೀಡುವಂತೆ ರಾಷ್ಟ್ರೀಯ ಹಸಿರು ಪೀಠವು ಸೂಚಿಸಿದ ಮೇರೆಗೆ ಮೀಟರ್‌ ಅಳವಡಿಕೆಗೆ ಸರಕಾರ ಮುಂದಾಗಿದೆ’.
– ಕೆ.ಎನ್‌. ಸೋಮಶೇಖರ್‌, ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ ಸಮಿತಿ

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.