Ullala: ನೇಣು ಬಿಗಿದು ಯುವಕ ಆತ್ಮಹತ್ಯೆ
Team Udayavani, Feb 29, 2024, 9:48 PM IST
ಉಳ್ಳಾಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮೀಗುಡ್ಡೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪೂಜಾರಿ (32) ಆತ್ಮಹತ್ಯೆಗೈದವರು.
ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೇನಪೊಯ ಪಾರ್ಕಲ್ಲಿ ಆಟೋ ರಿûಾ ಚಲಾಯಿಸುತ್ತಿದ್ದರು. ಗುರುವಾರ ಸಂಜೆ ಅವರ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿ ಅನಾರೋಗ್ಯಕ್ಕೊಳಗಾಗಿದ್ದು ಧನರಾಜ್ ಮನನೊಂದು ಆತ್ಮ ಹತ್ಯೆಗೈದಿರುವ ಶಂಕೆ ಇದೆ.
ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.