ಶಂಕಿತ ಡೆಂಗ್ಯೂ ಜ್ವರಕ್ಕೆ ಯುವಕ ಬಲಿ
Team Udayavani, Aug 4, 2019, 10:59 AM IST
ಬಂಟ್ವಾಳ : ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲುಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಘಟನೆ ವರದಿಯಾಗಿದೆ. ಬಿ.ಸಿ.ರೋಡು ಕೈಕಂಬ ಸಮೀಪದ ತಲಪಾಡಿ ನಿವಾಸಿ ಪ್ರಶಾಂತ್ (39) ಎಂಬವರೇ ಜ್ವರದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಡೆಂಗ್ಯೂ ಜ್ವರದ ಕಾರಣದಿಂದಲೇ ಪ್ರಶಾಂತ್ ಮೃತಪಟ್ಟಿರಬಹುದೆಂದು ಇದೀಗ ಶಂಕಿಸಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಾಲೂಕಿನಲ್ಲಿ ಶಂಕಿತ ಡೆಂಗ್ಯು ಪ್ರಕರಣಕ್ಕೆ ಇದೇ ಮೊದಲ ಬಲಿಯಾಗಿದ್ದು, ಈ ಹಿಂದೆ ಒಟ್ಟು 39 ಡೆಂಗ್ಯು ಪ್ರಕರಣಗಳು ಕಂಡುಬಂದಿರುವ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿತ್ತು.
ಇವರ ತಂದೆ ತಾಯಿ ಈ ಹಿಂದೆಯೇ ಮೃತ ಪಟ್ಟಿದ್ದು, ಇಬ್ಬರು ಸಹೋದರಿಯರು ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.