ಒಂದು ದಿನದ ಮಟ್ಟಿಗೆ ಕ್ರೀಡಾ ಅಧಿಕಾರಿಗಳಾದ ಉಭಯ ಜಿಲ್ಲೆಯ ವಿದ್ಯಾರ್ಥಿಗಳು
ಮಂಗಳೂರಿನ ಧನ್ಯಶ್ರೀ ಡಿ. ಭಟ್ ಮತ್ತು ಉಡುಪಿಯ ರಿಶೆಲ್ ಡಿ'ಮೆಲ್ಲೊ
Team Udayavani, Oct 13, 2022, 9:18 AM IST
ಮಂಗಳೂರು/ಉಡುಪಿ : ಯೇನಪೊಯ ಕಾಲೇಜಿನ ತೃತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಧನ್ಯಶ್ರೀ ಡಿ. ಭಟ್ ಮತ್ತು ಉಡುಪಿ ಅಜ್ಜರಕಾಡಿನ ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ರಿಶೆಲ್ ಡಿ’ಮೆಲ್ಲೊ ಅವರು ತಮ್ಮ ಜಿಲ್ಲೆಯ ಯುವಜನ ಕ್ರೀಡಾ ಇಲಾಖೆಯಲ್ಲಿ ಒಂದು ದಿನ ಯುವ ಕ್ರೀಡಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಹಿನ್ನೆಲೆಯಲ್ಲಿ ಒಂದು ದಿನ ಕ್ರೀಡಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ 18ರಿಂದ 23 ವಯೋಮಾನದ ಒಳಗಿನ ಯುವತಿಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಯುವತಿಯರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಧನ್ಯಶ್ರೀ ಡಿ. ಭಟ್ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ. ನಾಯಕ್ ಅವರೊಂದಿಗೆ ಕಾರ್ಯನಿರ್ವಹಿಸಿದರು.
ಬೆಳಗ್ಗಿನಿಂದ ಸಂಜೆಯವರೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ, ಹೊರಾಂಗಣ ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣ, ಕ್ರೀಡಾ ವಸತಿ ನಿಲಯ ಮುಂತಾದ ಸ್ಥಳಗಳಿಗೆ ಭೇಟಿ ನೀಡಿದರು. ಕಚೇರಿಯ ಕೆಲಸ ನಿರ್ವಹಣೆ, ಇಲಾಖೆಯ ಕಾರ್ಯಕ್ರಮಗಳು, ಕ್ರೀಡಾಕೂಟಗಳ ಆಯೋಜನೆ, ಕ್ರೀಡಾ ತರಬೇತಿ, ಕ್ರೀಡಾಂಗಣದ ನಿರ್ವಹಣೆ, ಕಡತಗಳ ನಿರ್ವಹಣೆಯ ಬಗ್ಗೆ ವಿವರಣೆ ಪಡೆದುಕೊಂಡರು. ಸಂಜೆ ಕಚೇರಿಯ ಕೆಲಸದ ನಿಮಿತ್ತ ಜಿ.ಪಂ. ಸಿಇಒರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಿಇಒ ಶುಭಕೋರಿದರು.
ಧನ್ಯಶ್ರೀ ಮಾತನಾಡಿ, ಒಂದು ದಿನದಲ್ಲಿ ಹಲವಾರ ಹೊಸ ವಿಷಯ ಕಲಿತಿದ್ದೇನೆ ಎಂದರು.
ಉಡುಪಿ: ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಂದರ್ಭ ಕ್ರೀಡಾಧಿಕಾರಿ ಜತೆಗೆ ಒಂದು ದಿನ ಕಾರ್ಯಕ್ರಮ ಉಡುಪಿ ಜಿಲ್ಲೆಯಲ್ಲೂ ಬುಧವಾರ ನಡೆಯಿತು.
ಸ್ವಯಂ ಉದ್ಯೋಗದೊಂದಿಗೆ ಉಡುಪಿಯ ಅಜ್ಜರಕಾಡಿನ ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ರಿಶೆಲ್ ಡಿ’ಮೆಲ್ಲೊ ಅ. 11ರಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕ ಡಾ| ರೋಶನ್ ಕುಮಾರ್ ಶೆಟ್ಟಿ ಅವರೊಂದಿಗೆ ಇದ್ದು, ಅವರ ಕಾರ್ಯವೈಖರಿಯನ್ನು ಗಮನಿಸಿದರು.
ಇದನ್ನೂ ಓದಿ : ಪಶುಸಂಗೋಪನ ಇಲಾಖೆ; ವೈದ್ಯಾಧಿಕಾರಿ ಸಹಿತ ಬಹುತೇಕ ಹುದ್ದೆ ಖಾಲಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.