ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ: ನಾರಾವಿಯ ಯುವರಾಜ್ ಜೈನ್ ಆಯ್ಕೆ
Team Udayavani, Mar 7, 2018, 1:51 PM IST
ವೇಣೂರು : ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2017-18ನೇ ಸಾಲಿನ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಬೆಳ್ತಂಗಡಿ ತಾಲೂಕಿನ ನಾರಾವಿಯ ಯುವರಾಜ್ ಜೈನ್ ಅವರು ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
35 ವರ್ಷಗಳಿಂದ ಕಂಬಳದ ಕೋಣಗಳನ್ನು ಓಡಿಸುತ್ತಿದ್ದ ಇವರು, ಗ್ರಾಮೀಣ ಕ್ರೀಡೆ ಕಂಬಳ ಕ್ಷೇತ್ರದ ವಿಶಿಷ್ಟ ಸಾಧನೆಗೈದು ಸುಮಾರು 600 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಈ ಬಾರಿಯ ಕಂಬಳದ 16 ಕಡೆ ಭಾಗವಹಿಸಿ 24 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡವರು. ಕನೆಹಲಗೆ ಮತ್ತು ಅಡ್ಡಹಲಗೆಯ ಕೋಣಗಳನ್ನು ಓಡಿಸುತ್ತಿದ್ದರು. ಈ ಹಿಂದೆ ಕೋಣಗಳನ್ನು ಹೊಂದಿದ್ದ ಇವರು ಇದೀಗ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಕೇರಳ, ಮಂಜೇಶ್ವರ, ಬಾರ್ಕೂರು ಕಡೆಗಳಲ್ಲಿಯೂ ಕಂಬಳದಲ್ಲಿ ಕೋಣಗಳನ್ನು ಓಡಿಸುತ್ತಿದ್ದ ಇವರು, ಸುಮಾರು 15 ಕಡೆಗಳಲ್ಲಿ ಸಮ್ಮಾನ ಸ್ವೀಕರಿಸಿದ್ದಾರೆ.
ಸಚಿವರಿಂದ ಪಟ್ಟಿ ಪ್ರಕಟ
ಪ್ರಶಸ್ತಿಯಲ್ಲಿ ರೂ. 1 ಲಕ್ಷ ನಗದು, ಫಲಕ, ಪ್ರಶಸ್ತಿಪತ್ರ ಒಳಗೊಂಡಿದೆ. ಉಡುಪಿಯಲ್ಲಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಕಂಬಳ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸರಕಾರ ರಾಜ್ಯ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಅತ್ಯಂತ ಖುಷಿ ತಂದಿದೆ. ಗ್ರಾ. ಪ್ರದೇಶದಲ್ಲಿ ಜನಿಸಿದ ನನಗೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಅವಕಾಶ ಕಲ್ಪಿಸಿದ ಎಲ್ಲರಿಗೂ ಚಿರಋಣಿ. ನನಗೆ 63 ವರ್ಷ ವಯಸ್ಸಾಗಿದ್ದು, ಕೋಣಗಳ ಓಟಗಾರನಾಗಿ ಮುಂದುವರಿಯುವ ಹುಮ್ಮಸ್ಸು ಇದೆ.
-ಯುವರಾಜ ಜೈನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾಂಬಾಡಿ ಸುಬ್ರಹ್ಮಣ್ಯ ಭಟ್ ಗೆ ಕರ್ನಾಟಕ ಯಕ್ಷಗಾನ ಅಕಾಡಮಿಯ ಪಾರ್ತಿಸುಬ್ಬ ಪ್ರಶಸ್ತಿ ಘೋಷಣೆ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.