ಎಸ್‌ಸಿಪಿ, ಟಿಎಸ್‌ಪಿ ಅನುದಾನ: ಗರಿಷ್ಠ ಪ್ರಗತಿ ಸಾಧಿಸಲು ಜಿ.ಪಂ. ಸಿಇಒ ಸೂಚನೆ
Team Udayavani, Dec 30, 2022, 6:15 AM IST
ಮಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭ್ಯುದಯಕ್ಕಾಗಿ ಬಿಡುಗಡೆ ಮಾಡಲಾಗುವ ಎಸ್‌ಸಿಪಿ, ಟಿಎಸ್‌ಪಿ ಅನುದಾನದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಕಾಲದಲ್ಲಿ ಯೋಜನೆ ಅನುಷ್ಠಾನಗೊಳಿಸಿ ಗರಿಷ್ಠ ಪ್ರಗತಿ ಸಾಧಿಸಬೇಕು ಎಂದು ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕುಮಾರ್ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರಗಿದ ವಿಶೇಷ ಘಟಕ ಮತ್ತು ಪರಿಶಿಷ್ಟ ವರ್ಗಗಳ ಉಪಯೋಗ ಕಾರ್ಯಕ್ರಮಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರ್ಹ ಫಲಾನುಭವಿಗೆ ಯೋಜನೆಯ ಲಾಭ ಸಿಗಬೇಕು. ಆಯ್ಕೆ ವಿಳಂಬಕ್ಕೆ ಆಸ್ಪದವಾಗದಂತೆ ಗಮನ ಹರಿಸಬೇಕು. ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಸೂಕ್ತ ಪ್ರಗತಿ ಸಾಧಿಸದ ಇಲಾಖೆಗಳ ಮುಖ್ಯಸ್ಥರಿಗೆ ಕೂಡಲೇ ನೋಟಿಸ್ ನೀಡಬೇಕು ಎಂದವರು ಸೂಚನೆ ನೀಡಿದರು.
ಎಡಿಸಿ ಕೃಷ್ಣಮೂರ್ತಿ, ಮಹಾನಗರ ಪಾಲಿಕೆಯ ಉಪ ಆಯುಕ್ತ (ಆಡಳಿತ) ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪ ಭೋವಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನ ನಿರ್ದೇಶಕ ಅಭಿಷೇಕ್, ಆಹಾರ-ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.