ನಮ್ಮ ಬೇಡಿಕೆ ಈಡೇರಿಸಿ
ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರ ಪ್ರತಿಭಟನೆ
Team Udayavani, Jul 6, 2019, 10:11 AM IST
ದಾವಣಗೆರೆ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಅಹೋರಾತ್ರಿ ಧರಣಿ.
ದಾವಣಗೆರೆ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೋವಾ ಮಾದರಿ ಸೇವಾ ಅವಧಿ ಆಧಾರದಲ್ಲಿ ಗೌರವ ಧನ ಒಳಗೊಂಡಂತೆ ಹಲವಾರು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್(ಎಐಟಿಯುಸಿ) ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಅಹೋರಾತ್ರಿ ಧರಣಿ ಪ್ರಾರಂಭಿಸಿದರು.
ರಾಜ್ಯದಲ್ಲಿರುವ 65,911 ಅಂಗನವಾಡಿ, 3,331 ಮಿನಿ ಅಂಗನವಾಡಿ ಕೇಂದ್ರಗಳನ್ನೇ ಕಿಂಡರ್ ಗಾರ್ಡನ್‌ಗಳಾಗಿ ಮಾರ್ಪಡಿಸಿ, ಇಂಗ್ಲಿಷ್ ಕಾನ್ವೆಂಟ್, ನರ್ಸರಿ ಸ್ಕೂಲ್ಗಳನ್ನಾಗಿ ಪರಿವರ್ತಿಸಿ, 2.6 ವರ್ಷದ ಮಕ್ಕಳನ್ನು ಅಂಗನವಾಡಿ ನರ್ಸರಿಗಳಿಗೆ ಸೇರಿಸಿಕೊಳ್ಳಲು ಸರ್ಕಾರ ಆದೇಶ ಮಾಡಬೇಕು. ಇಂಗ್ಲಿಷ್ ಬೋಧನೆಗೆ ಅಗತ್ಯ ಪುಸ್ತಕ, ಮಕ್ಕಳಿಗೆ ಸಮವಸ್ತ್ರ, ಶೂ ಇತರೆ ಅಗತ್ಯ ಸೌಲಭ್ಯ ಒದಗಿಸಬೇಕು. ಅಂಗನವಾಡಿ ನರ್ಸರಿಯಲ್ಲಿ ಕಲಿತವರನ್ನ ಪ್ರಾಥಮಿಕ ಶಾಲೆಗೆ ಸೇರಿಸುವ ಆದೇಶವನ್ನೂ ಸರ್ಕಾರ ನೀಡುವ ಮೂಲಕ ಅಂಗನವಾಡಿ ಕೇಂದ್ರಗಳ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ನಿವೃತ್ತ ಕಾರ್ಯಕರ್ತೆಯರಿಗೆ 50, ಸಹಾಯಕಿಯರಿಗೆ 30 ಸಾವಿರ ಎನ್‌ಪಿಎಸ್ ಹಣ ನೀಡಬೇಕು. ಗೋವಾ ಮಾದರಿ ಸೇವಾ ಅವಧಿ ಆಧಾರದಲ್ಲಿ ಗೌರವ ಧನ, ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ 60 ವರ್ಷಕ್ಕೆ ನಿವೃತ್ತರಾದ ಕಾರ್ಯಕರ್ತೆಯರು, ಸಹಾಯಕಿಯರಿಗೆ 6 ಸಾವಿರ ಪಿಂಚಣಿ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.
ಫೆಡರೇಷನ್ ರಾಜ್ಯ ಸಂಚಾಲಕ ಆವರಗೆರೆ ಚಂದ್ರು, ಖಜಾಂಚಿ ಎಂ.ಬಿ. ಶಾರದಮ್ಮ, ಐರಣಿ ಚಂದ್ರು, ಎಸ್.ಎಸ್. ಮಲ್ಲಮ್ಮ, ವಿಶಾಲಾಕ್ಷಿ ಮೃತ್ಯುಂಜಯ, ರೇಣುಕಮ್ಮ, ಎಚ್.ಎಸ್. ನೀಲಮ್ಮ, ಪಿ.ಬಿ. ಕಾಳಮ್ಮ, ರೇಣುಕಾ, ಉಮಾ ಇತರರು ಇದ್ದರು. ಶನಿವಾರ ಮಧ್ಯಾಹ್ನ ಬಹಿರಂಗ ಸಭೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.