ಎಲ್ಲೆಡೆ ವಿಶ್ವ ಗುರು ಬಸವಣ್ಣನ ಸ್ಮರಣೆ
ಜಯಂತ್ಯುತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮ•ಬಸವೇಶ್ವರ ಭಾವಚಿತ್ರದ ಮೆರವಣಿಗೆ
Team Udayavani, May 8, 2019, 10:50 AM IST
ದಾವಣಗೆರೆ: ಕಾಯಿಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ತೊಟ್ಟಿಲೋತ್ಸವ.
ದಾವಣಗೆರೆ: ವಿಶ್ವದಲ್ಲೇ ಪ್ರಪ್ರಥಮವಾಗಿ ಸಾರ್ವತ್ರಿಕವಾಗಿ ಬಸವ ಜಯಂತಿ ಪ್ರಾರಂಭಿಸಿರುವ ಕೀರ್ತಿ ಹೊಂದಿರುವ ದಾವಣಗೆರೆಯಲ್ಲಿ ಮಂಗಳವಾರ ಜಗತ್ತಿನ ಮಹಾನ್ ದಾರ್ಶನಿಕ, ವಿಶ್ವಗುರು ಬಸವಣ್ಣನವರ 886ನೇ ಜಯಂತಿಯನ್ನು ಹಲವಾರು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಆಚರಿಸಲಾಯಿತು.
1913ರಲ್ಲಿ ಮೃತ್ಯುಂಜಯ್ಯ ಅಪ್ಪ ಮತ್ತು ಕರ್ನಾಟಕದ ಗಾಂಧಿ ಎಂದೇ ಕರೆಯಲ್ಪಡುವ ಹರ್ಡೇಕರ್ ಮಂಜಪ್ಪ ಅವರೊಡಗೂಡಿ ಮೊದಲ ಬಾರಿಗೆ ಸಾರ್ವತ್ರಿಕವಾಗಿ ಬಸವ ಜಯಂತಿ ಆಚರಣೆ ಪ್ರಾರಂಭಿಸಿದ ಇತಿಹಾಸ ಹೊಂದಿರುವ ವಿರಕ್ತ ಮಠದಲ್ಲಿ ಬಸವ ಜಯಂತಿ ಪ್ರಯಕ್ತ ಬಸವ ಪ್ರಭಾತ್ ಫೇರಿ, ಮಕ್ಕಳಿಗೆ ನಾಮಕರಣ, ತೊಟ್ಟಿಲೋತ್ಸವ ಮುಂತಾದ ಕಾರ್ಯಕ್ರಮಗಳು ಜರುಗಿದವು.
ಲೋಕಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅತಿ ಸರಳವಾಗಿ ಬಸವ ಜಯಂತಿ ಆಚರಿಸಲಾಯಿತು. ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಬಸವ ಜಯಂತಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಎಚ್. ಬಸವರಾಜೇಂದ್ರ ಚಾಲನೆ ನೀಡಿದರು. ವಿ. ಸಿದ್ದರಾಮ ಶರಣರು ಇತರರು ಬಸವಣ್ಣನವರ ಕುರಿತು ಮಾತನಾಡಿದರು.
ಕಾಯಿಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ತೊಟ್ಟಿಲೋತ್ಸವ ನಡೆಯಿತು. ಬಸವ ಜಯಂತಿ ಹಿನ್ನೆಲೆಯಲ್ಲಿ ವಿಶೇಷ ಪೂಜೆಗಾಗಿ ಸುಡುವ ಬಿಸಿಲ ನಡುವೆಯೂ ಸಾವಿರಾರು ಜನರು ಸರತಿ ಸಾಲಲ್ಲಿ ನಿಂತಿದ್ದು ಕಂಡು ಬಂದಿತು. ಮಹಾನಗರ ಪಾಲಿಕೆಯಲ್ಲಿ ಸರಳವಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು.
ಬಸವ ಜಯಂತಿ ಪ್ರಯಕ್ತ ಸುವರ್ಣ ಕರ್ನಾಟಕ ವೇದಿಕೆ ಯಿಂದ ಜಯದೇವ ವೃತ್ತದಲ್ಲಿ ಮಜ್ಜಿಗೆ ವಿತರಣೆ ಮಾಡಲಾಯಿತು,
ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಚನ್ನಬಸವೇಶ್ವರ ದೇವಸ್ಥಾನ ಸಮಿತಿ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಕಾರ್ಯಕ್ರಮ ನಡೆಯಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಿತು. ಮಹಿಳಾ ವೀರಗಾಸೆ ಒಳಗೊಂಡಂತೆ ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ ಕಣ್ಮನ ಸೆಳೆಯಿತು.
ಸಾಂಸ್ಕೃತಿಕ ಕಾರ್ಯಕ್ರಮ: 108ನೇ ಬಸವ ಜಯಂತಿ ಅಂಗವಾಗಿ ದಾವಣಗೆರೆಯ ದೊಡ್ಡಪೇಟೆಯ ಶ್ರೀ ಬಸವೇಶ್ವರ ಸೇವಾ ಸಂಘ, ಬೆಂಗಳೂರಿನ ಆದರ್ಶ ಸುಗಮ ಸಂಗೀತ ಆಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ರಾಶ್ರಯದಲ್ಲಿ ಮೇ. 8 ರಿಂದ 10 ಮೂರು ದಿನ ಬಸವ ಮಂಟಪದ ಬಯಲು ರಂಗ ಮಂದಿರದಲ್ಲಿ ನೃತ್ಯ ವೈಭವ, ಸುಗಮ ಸಂಗೀತ ವೈಭವ, ವಾದ್ಯ ಸಂಗೀತ ವೈಭವ, ಹಾಗೂ ಹಳೆಯ ಕನ್ನಡ ಚಲನಚಿತ್ರ ಗೀತೆಗಳಯುಗ ಯುಗಗಳೇ ಸಾಗಲಿ…, ಹಾಸ್ಯ ಸಂಜೆ ಕಾರ್ಯಕ್ರಮ ನಡೆಯಲಿವೆ ಎಂದು ದೊಡ್ಡಪೇಟೆಯ ಬಸವೇಶ್ವರ ಸೇವಾ ಸಂಘದ ಅಧ್ಯಕ್ಷ ಅಥಣಿ ಎಸ್. ವೀರಣ್ಣ ತಿಳಿಸಿದ್ದಾರೆ.
ಪ್ರತಿದಿನ ಸಂಜೆ 7 ಗಂಟೆಯಿಂದ ಪ್ರಾರಂಭವಾಗುವ ಕಾರ್ಯಕ್ರಮಗಳಲ್ಲಿ ವಿಶ್ವವಿಖ್ಯಾತ ಸಂಗೀತ ಸಾಧಕರು, ಚಲನಚಿತ್ರ ಹಿನ್ನೆಲೆ ಗಾಯಕರಾದ ಡಾ| ಕಿಕ್ಕೇರಿ ಕೃಷ್ಣಮೂರ್ತಿ, ನಗರ ಶ್ರೀನಿವಾಸ ಉಡುಪ, ಸೀಮಾ ರಾಯ್ಕರ್, ಸಿ.ಜೆ. ಶಶಿಕಲಾ, ಸಿ.ಜೆ. ಪೂರ್ಣಿಮಾ, ರಮೇಶ್‌ಚಂದ್ರ, ಸೀಮಾ ರಾಯ್ಕರ್, ರಾಜಾರಾಂ, ಶ್ರೀ ನಿವಾಸಮೂರ್ತಿ, ನಾಗಚಂದ್ರಿಕಾ ಭಟ್, ಅಭಿಷೇಕ್ ರಾಮ್‌ಪ್ರಸಾದ್, ಅಮಿತ್‌ರಾಜ್, ಅನಂತ ಪದ್ಮನಾಭ್, ರಾಜ್‌ಕಿರಣ್, ಶಶಿ ಕಿರಣ್, ಸುನೀಲ್, ಪ್ರಶಾಂತ್, ನೃತ್ಯ ಕಲಾವಿದರಾದ ನಮಿತಾರಾವ್, ವಿಕ್ರಂ ಸೂರಿ, ಸಂಜಯ್‌ಸೂರಿ, ಗಂಗಾವತಿ ಪ್ರಾಣೇಶ್ ಮುಂತಾದವರು ಭಾಗವಹಿಸಿ ವರ್ಣರಂಜಿತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ 12 ಕ್ಕೆ ಬಸವ ಜಯಂತ್ಯುತ್ಸವದ ಅಂಗವಾಗಿ ಅಥಣಿ ವೀರಣ್ಣ ಮತ್ತು ಸಹೋದರರ ಸೇವಾರ್ಥ ಸಾರ್ವಜನಿಕರಿಗೆ ಮಹಾ ದಾಸೋಹ ಹಮ್ಮಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.