ಯೋಜನೆ ತರುವ ಸಾಮರ್ಥ್ಯ ನನಗಿದೆ

ಅಭಿವೃದ್ಧಿಗೆ ಶಾಸಕರು ಕೈಜೋಡಿಸಲಿ•ರಾಜ್ಯ ಸರ್ಕಾರ-ಜಿಲ್ಲಾಡಳಿತದಿಂದ ಅಸಹಕಾರ ನೀತಿ

Team Udayavani, May 25, 2019, 10:24 AM IST

25-May-5

ದಾವಣಗೆರೆ: ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಯಾವುದೇ ಅಭಿವೃದ್ಧಿ ಯೋಜನೆ ಸಂಬಂಧ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಬಂದಲ್ಲಿ ತಾವು ಮಂಜೂರು ಮಾಡಿಸಲು ಸಿದ್ಧ ಎಂದು ಸತತ ನಾಲ್ಕನೇ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿರುವ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್‌ ಹೇಳಿದ್ದಾರೆ.

ಮುಂದಿನ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಯೋಜನೆಗಳ ಬಗ್ಗೆ ಶುಕ್ರವಾರ ಜಿಎಂಐಟಿ ಗೆಸ್ಟ್‌ಹೌಸ್‌ನಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಕೆಲಸ ಮೊದಲು ಆಗಬೇಕಿದೆ. ನಾವು ಬರೀ ಶುದ್ಧ ನೀರು ಕೊಡುತ್ತೇವೆ ಎಂದು ಹೇಳಿದರೆ ಆಗಲ್ಲ. ನಾನು ಆ ಕಾರ್ಯಕ್ಕೆ ಈ ಅವಧಿಯಲ್ಲಿ ಆದ್ಯತೆ ನೀಡುವೆ. ಇದಕ್ಕೆ ಜಿಲ್ಲೆಯ ಎಲ್ಲಾ ಶಾಸಕರು ಕೈ ಜೋಡಿಸಬೇಕು ಎಂದರು.

ರಾಜ್ಯ ಸರ್ಕಾರದಿಂದ ಯಾವುದಾದರೂ ಪ್ರಸ್ತಾವನೆ ಬಂದರಲ್ಲವೆ ಕೇಂದ್ರ ಸರ್ಕಾರ ಅನುಮೋದನೆ ನೀಡುವುದು. ಹಾಗಾಗಿ ಕ್ಷೇತ್ರದ ಎಲ್ಲಾ ಶಾಸಕರು ತಮ್ಮ ತಮ್ಮ ತಾಲೂಕುಗಳಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಸಂಬಂಧ ವಿಸ್ತೃತ ಯೋಜನೆ ಸಿದ್ಧಪಡಿಸಿ, ಅಂದಾಜು ಮೊತ್ತ ವಿವರವನ್ನು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಕಳುಹಿಸಿಕೊಟ್ಟಲ್ಲಿ ನಾನು ಅದನ್ನು ಮಂಜೂರು ಮಾಡಿಸಲು ಬದ್ಧನಾಗಿರುವೆ. ಆ ಕೆಲಸಕ್ಕೆ ಎಲ್ಲಾ ಶಾಸಕರು ಮುಂದಾಗಬೇಕಿದೆ ಎಂದು ಹೇಳಿದರು.

ಈಗಾಗಲೇ ದಾವಣಗೆರೆ ರೈಲ್ವೆ ನಿಲ್ದಾಣ ಹೊಸ ನಿರ್ಮಾಣ, ಇಎಸ್‌ಐ ಆಸ್ಪತ್ರೆ 100 ಹಾಸಿಗೆಗೆ ಮೇಲ್ದರ್ಜೆಗೇರಿಸಲು ಶಂಕುಸ್ಥಾಪನೆ ನೆರವೇರಿಸಿದ್ದು, ಆದಷ್ಟು ಬೇಗ ಆ ಕಾಮಗಾರಿ ಪೂರ್ಣಗೊಳಿಸಬೇಕು. ಇನ್ನು ಅಮೃತ್‌ ಸಿಟಿ ಯೋಜನೆಯಡಿ ದಾವಣಗೆರೆ ನಗರಕ್ಕೆ ದಿನವೀಡಿ ನೀರು ಪೂರೈಸುವ ಜಲಸಿರಿ ಯೋಜನೆ ಕಾರ್ಯಗತಗೊಳಿಸಲು ಕ್ರಮವಹಿಸುವೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಇಂಧನ ಇಲಾಖೆಯಿಂದ ಹರಿಹರದ ಹನಗವಾಡಿ ಬಳಿ 960 ಕೋಟಿ ರೂ. ವೆಚ್ಚದಲ್ಲಿ 2ಜಿ ಎಥೆನಾಲ್ ಘಟಕ ಮಂಜೂರಾಗಿದ್ದು. ಆ ಘಟಕ ಆರಂಭದ ಜತೆಗೆ ಹರಿಹರದಲ್ಲಿ 6500 ಕೋಟಿ ರೂ.ವೆಚ್ಚದ ರಸಾಯನಿಕ ಗೊಬ್ಬರ ಕಾರ್ಖಾನೆ ಸ್ಥಾಪನೆ ಬಗ್ಗೆಯೂ ಕ್ರಮ ಕೈಗೊಳ್ಳುವೆ ಎಂದು ತಿಳಿಸಿದರು.

ವಿಕಲಚೇತನರಿಗಾಗಿ ಗೋವಾ-ಕರ್ನಾಟಕ ಎರಡೂ ರಾಜ್ಯಗಳಿಗೆ ಸೇರಿದ ಎನ್‌ಐಎಂಎಚ್(ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್‌ ಮೆಂಟಲ್ ಹೆಲ್ತ್) ಸಿಆರ್‌ಸಿ ದಾವಣಗೆರೆ ನಗರದಲ್ಲಿ ಈಗಾಗಲೇ ಪ್ರಾರಂಭವಾಗಿದ್ದು, ಅದರ ಮೇಲ್ದರ್ಜೆಗೆ 8 ಎಕರೆ ಭೂಮಿ ಕೋರಲಾಗಿತ್ತು. ಹಿಂದಿನ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಜಾಗ ಮಂಜೂರು ಮಾಡಿದ್ದಾರೆ. ಕೇಂದ್ರದಲ್ಲಿ ವಿವಿಧ ತರಬೇತಿ ಕೋರ್ಸ್‌ಗಳು, ಸುಸಜ್ಜಿತ ಆಸ್ಪತ್ರೆ ಸೌಲಭ್ಯ ಇರಲಿದೆ. 30 ಕೋಟಿ ರೂ. ವೆಚ್ಚದಲ್ಲಿ ಆ ಕೇಂದ್ರ ನಿರ್ಮಿಸಲಾಗುವುದು ಎಂದರು.

ಕೇಂದ್ರ ಸರ್ಕಾರ ರೈಲ್ವೆ, ರಾಷ್ಟ್ರೀಯ ಹೆದ್ದಾರಿ, ಟೆಲಿಫೋನ್‌, ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಯೋಜನೆ ಜಾರಿಗೊಳಿಸಲಿದೆ. ಕೇಂದ್ರ ಯಾವುದೇ ಯೋಜನೆಯನ್ನ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ಸಹಕಾರ ಅಗತ್ಯ. ಆದರೆ, ರಾಜ್ಯ ಸರ್ಕಾರ ಸೂಕ್ತ ರೀತಿ ಸ್ಪಂದಿಸದಿದ್ದರೆ ನಾನೇನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ದಾವಣಗೆರೆ-ಬೆಂಗಳೂರು ನೇರ ರೈಲು ಮಾರ್ಗ, ಅಶೋಕ ಚಿತ್ರಮಂದಿರದ ಬಳಿಯ ರೈಲ್ವೆ ಗೇಟ್ ಬಳಿ ಮೇಲ್ಸೇತುವೆ ಯೋಜನೆಯೇ ಇದಕ್ಕೆ ಸಾಕ್ಷಿ ಎಂದರು.

ದಾವಣಗೆರೆ-ಬೆಂಗಳೂರು ನೇರ ರೈಲು ಮಾರ್ಗ ಮಂಜೂರಾಗಿ ಹಲವು ವರ್ಷಗಳೇ ಕಳೆದಿವೆ. ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಜಮೀನು ಸ್ವಾಧೀನಪಡಿಸಿಕೊಳ್ಳಬೇಕಿದೆ. ಆ ಕಾರ್ಯ ಇನ್ನೂ ಆಗಿಲ್ಲ. ಇನ್ನು ದಾವಣಗೆರೆ ಅಶೋಕ ಚಿತ್ರಮಂದಿರ ಬಳಿಯ ರೈಲ್ವೆಗೇಟ್ನಿಂದ ಸಾರ್ವಜನಿಕರು ಪ್ರತಿನಿತ್ಯ ಅನುಭವಿಸುವ ಕಿರಿಕಿರಿ ತಪ್ಪಿಸಲು ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆಯಿಂದ ನಾಲ್ಕು ವರ್ಷಗಳ ಹಿಂದೆಯೇ ಅನುದಾನ ಮಂಜೂರಾಗಿತ್ತು. ಆ ಕಾಮಗಾರಿಗೆ ಜಿಲ್ಲಾಡಳಿತ ಇನ್ನೂ ಜಾಗವನ್ನೇ ನೀಡಿಲ್ಲ. ಹೀಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ಅಸಹಕಾರದಿಂದಾಗಿ ಕೆಲವು ಯೋಜನೆಗಳು ನನೆಗುದಿಗೆ ಬಿದ್ದಿವೆ. ಇದಕ್ಕೆ ನಾನು ಕಾರಣವೇ ಎಂದು ಪ್ರಶ್ನಿಸಿದರು.

ದಾವಣಗೆರೆ ನಗರದ ಡಿಸಿಎಂ ಟೌನ್‌ಶಿಫ್‌ ಬಳಿ ರೈಲ್ವೇ ಮೇಲ್ಸೇತುವೆ ಪುನರ್‌ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.ಆದಷ್ಟು ಬೇಗ ಆ ಕಾಮಗಾರಿ ಮುಗಿಸಿ, ಅದನ್ನು ಲೋಕಾರ್ಪಣೆಗೆ ಕ್ರಮ ವಹಿಸುವೆ ಎಂದ ಅವರು, ಕೇಂದ್ರ ಸರ್ಕಾರದಿಂದ ಯಾವ ಯೋಜನೆಯನ್ನಾದರೂ ಮಂಜೂರು ಮಾಡಿಸುವ ಸಾಮರ್ಥ್ಯ ನನಗಿದೆ. ಆದರೆ, ರಾಜ್ಯ ಸರ್ಕಾರದ ಸಹಕಾರ ಬೇಕು ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸ್ಥಾನ ಗೆಲ್ಲಲು ಲಿಂಗಾಯತ ಫ್ಯಾಕ್ಟರ್‌ ಏನಾದರೂ ಕೆಲಸ ಮಾಡಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದೇಶ್ವರ್‌, ನಮ್ಮಲ್ಲಿ ಯಾವುದೇ ಜಾತಿ ಇಲ್ಲ. ಬಡವ, ಮಧ್ಯಮ ವರ್ಗ, ಶ್ರೀಮಂತರೆಲ್ಲರೂ ಕೂಡ ಬಿಜೆಪಿ ಬೆಂಬಲಿಸಿದ್ದಾರೆ. ಎಲ್ಲಾ ಕಾರ್ಯಕರ್ತರು 60 ದಿವಸ ಶ್ರಮವಹಿಸಿ ಕೆಲಸ ಮಾಡಿದ್ದಾರೆ ಎಂದರು.

ಬಿಎಸ್‌ವೈ ಸಿಎಂ ಆದಲ್ಲಿ ಸಮಸ್ಯೆ ಪರಿಹಾರ
ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಬದಲಾವಣೆ ಆಗಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾದಲ್ಲಿ ಮಾತ್ರ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿನ ಕೆಲಸ ತಕ್ಷಣ ಆಗಲಿವೆ. ಸರ್ಕಾರ ಪತನವಾಗುವ ಬಗ್ಗೆ ಮಾಧ್ಯಮಗಳಲ್ಲೆ ಪ್ರಸಾರವಾಗುತ್ತಿದೆ. ಮೈತ್ರಿ ಪಕ್ಷದ ಅವರವರೇ ಕಚ್ಚಾಡುತ್ತಿದ್ದಾರೆ. ನಿಮ್ಮನ್ನ ನಂಬಿಕೊಂಡು ನಾವ್‌ ಕೆಟ್ವಿ ಎಂದು ಒಬ್ಬರು, ನಿಮ್ಮನ್ನ ನಂಬಿ ನಾವ್‌ ಕೆಟ್ವಿ ಅಂತ ಮತ್ತೂಬ್ಬರು ಆರೋಪ ಮಾಡುತ್ತಿದ್ದಾರೆ. ಜೆಡಿಎಸ್‌ ಜತೆಗೋಗಿ ತಪ್ಪು ಕೆಲಸ ಮಾಡಿದ್ವಿ ಅಂತ ಕಾಂಗ್ರೆಸ್‌ನವರು, ಕಾಂಗ್ರೆಸ್‌ ಜತೆ ಸೇರಿ ನಾವು ತಪ್ಪು ಮಾಡಿದ್ದೀವಿ ಅಂತ ಜೆಡಿಎಸ್‌ನವರು ಹೇಳುತ್ತಿದ್ದಾರೆ. ಇದಕ್ಕೆಲ್ಲಾ ಯಾವ ರೀತಿ ಉತ್ತರ ಕೊಡುತ್ತಾರೋ ಗೊತ್ತಿಲ್ಲ. ಡಿಸಿಎಂ ಜಿ.ಪರಮೇಶ್ವರ್‌ ಬಗ್ಗೆ ಜೀರೋ ಟ್ರಾಫಿಕ್‌ ಮಿನಿಸ್ಟರ್‌ ಎಂದು ಅವರ ಪಕ್ಷದವರೇ ಆದ ತುಮಕೂರು ಕೆ.ಎನ್‌.ರಾಜಣ್ಣ ಬಹಳ ಹೀನಾಯವಾಗಿ ಟೀಕಿಸಿದ್ದಾರಲ್ಲದೆ, ಸರ್ಕಾರ ಅಂದ್ರೆ ದೇವೇಗೌಡರ ಫ್ಯಾಮಿಲಿ ಸರ್ಕಾರವಾಗಿದೆ ಅಂತ ಹೇಳಿದ್ದಾರೆ. ರಾಜ್ಯದಲ್ಲಿ ಒಂದು ವರ್ಷದಿಂದಲೂ ಮೈತ್ರಿ ಪಕ್ಷದವರು ಕಿತ್ತಾಡುತ್ತಲೇ ಇದ್ದಾರೆ. ಹಾಗಾಗಿ ಬೇರೆಯವರಿಗಾದರೂ ಸರ್ಕಾರ ರಚಿಸಲು ಬಿಡಬೇಕು ಇಲ್ಲವೇ ಸರ್ಕಾರ ವಿಸರ್ಜಿಸಬೇಕು. ಪೂರ್ಣ ಬಹುಮತ ಹೊಂದಿದ ಪಕ್ಷ ಅಧಿಕಾರ ಬಂದಲ್ಲಿ ಸರಿಯಾದ ರೀತಿ ಆಡಳಿತ ನಡೆಸಲಿದೆ.

ಎನ್‌.ಆರ್‌. ನಟರಾಜ್‌

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.