ಪೊಲೀಸರೂ ಪ್ರತಿಭೆ ಪ್ರದರ್ಶಿಸಲಿ

•ಮನಸ್ಸಿನ ಭಾವ ಹೇಳಿಕೊಳ್ಳುವ ಮಾಧ್ಯಮವೇ ಕವಿತೆ: ಆನಂದ

Team Udayavani, Aug 18, 2019, 1:09 PM IST

18-Agust-27

ದಾವಣಗೆರೆ: ಡಿವೈಎಸ್ಪಿ ಡಾ| ದೇವರಾಜ್‌ ರಚಿಸಿದ ಕವನ ಸಂಕಲನವನ್ನು ಎಸ್‌ಪಿ ಹನುಮಂತರಾಯ ಬಿಡುಗಡೆಗೊಳಿಸಿದರು.

ದಾವಣಗೆರೆ: ಪೊಲೀಸ್‌ ಇಲಾಖೆಯಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು, ಅವರೆಲ್ಲರೂ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದ್ದಾರೆ.

ಶನಿವಾರ ನಗರದ ಸೋಮೇಶ್ವರ ವಿದ್ಯಾಲಯದ ಮಂಜೂಷ ಸಭಾಂಗಣದಲ್ಲಿ ಡಿವೈಎಸ್ಪಿ ಡಾ| ಬಿ. ದೇವರಾಜ್‌ ರಚಿಸಿದ ಅಮೃತದ ಒರತೆ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಶು ವೈದ್ಯಕೀಯದಲ್ಲಿ ಪದವಿ ಪಡೆದ ಡಾ| ದೇವರಾಜ್‌ ಪೊಲೀಸ್‌ ಇಲಾಖೆಗೆ ಸೇರಿದ್ದಾರೆ. ಅವರು ಇನ್ನೂ ಹೆಚ್ಚು ಹೆಚ್ಚು ಬರೆಯಲಿ ಎಂದು ಆಶಿಸಿದರು.

ನಮ್ಮ ಪೊಲೀಸ್‌ ಇಲಾಖೆಯಲ್ಲಿ ಬಹಳಷ್ಟು ಮಂದಿ ಪ್ರತಿಭಾವಂತರಿದ್ದಾರೆ. ಅವರೆಲ್ಲರನ್ನೂ ಪ್ರೋತ್ಸಾಹಿಸುವ ಅಗತ್ಯವಿದೆ. ಇತ್ತೀಚೆಗೆ ಪೊಲೀಸ್‌ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಪೊಲೀಸರಿಗಾಗಿಯೇ ಕವಿಗೋಷ್ಠಿ ಆಯೋಜಿಸಲಾಗಿತ್ತು. ಅದೇ ರೀತಿ ದಾವಣಗೆರೆಯಲ್ಲಿಯೂ ಸಹ ಮುಂದಿನ ದಿನಗಳಲ್ಲಿ ಏರ್ಪಡಿಸಲಾಗುವುದು ಎಂದು ಹೇಳಿದರು.

ಉಡುಪಿಯ ಕರಾವಳಿ ಕಾವಲು ಪಡೆ ಪೊಲೀಸ್‌ ಅಧೀಕ್ಷಕ ಆರ್‌.ಚೇತನ್‌ ಮಾತನಾಡಿ, ಡಾ| ಬಿ. ದೇವರಾಜ್‌ ಬಹುಮುಖೀ ಪ್ರತಿಭೆ. ಎಲ್ಲ ರಂಗಗಳಲ್ಲೂ ಆಸಕ್ತಿ ಹೊಂದಿರುವ ಅವರು ತಾಯಿ, ಪ್ರೀತಿ, ಪ್ರೇಮ, ಪ್ರಕೃತಿ, ದೇಶಪ್ರೇಮ ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಕವಿತೆಗಳಲ್ಲಿ ವ್ಯಕ್ತಪಡಿಸಿದ್ದಾರೆ. ಪೊಲೀಸ್‌ ಇಲಾಖೆಯವರು ಒಂದೇ ರೀತಿ ಇರುತ್ತಾರೆ ಎಂಬುದಾಗಿ ಸಮಾಜ ಭಾವಿಸುತ್ತದೆ. ಪೊಲೀಸರು ಮಾತ್ರವಲ್ಲ ವೈದ್ಯರು, ಉಪನ್ಯಾಸಕರು ಹೀಗೆ ಇವರೆಲ್ಲ ಹೀಗೆ ಇರಬೇಕು ಎಂದು ಸಮಾಜ ಬಯಸುತ್ತದೆ. ಅದನ್ನು ಮೀರಿದವರು ದೇವರಾಜ್‌. ಇಲಾಖೆಯಲ್ಲಿ ಇರುವ ಎಲ್ಲ ಪ್ರತಿಭೆಗಳಿಗೆ ಅವರು ಮಾದರಿಯಾಗಲಿ. ಅವರ ಅಮೃತ ಒರತೆ ಕವನ ಸಂಕಲನಕ್ಕೆ ನಾನೇ ಮುನ್ನುಡಿ ಬರೆದಿರುವೆ. ಮುಂದೆ ಕೂಡ ಅವರು ಸಾಕಷ್ಟು ಕೃತಿಗಳನ್ನು ರಚಿಸಲಿ ಎಂದು ಹಾರೈಸಿದರು.

ಸಾಹಿತಿ,ಕವಿ ಆನಂದ ಋಗ್ವೇದಿ ಮಾತನಾಡಿ, ಮನಸ್ಸಿನ ಭಾವ ಹೇಳಿಕೊಳ್ಳುವ ಮಾಧ್ಯಮವೇ ಕವಿತೆ. ಇಲ್ಲಿ ಪ್ರೀತಿ, ಸಂಕಟ, ಬಡತನ ಎಲ್ಲವನ್ನೂ ಒಳಗೊಂಡ ಮನುಷ್ಯ ಪ್ರೀತಿಯ ಕವಿತೆಗಳು ಇವಾಗಿವೆ ಎಂದು ಹೇಳಿದರು.

ವಿಧಾನ ಪರಿಷತ್‌ ಮಾಜಿ ಮುಖ್ಯಸಚೇತಕ ಡಾ.ಎ.ಎಚ್ ಶಿವಯೋಗಿಸ್ವಾಮಿ, ಜಾನಪದ ತಜ್ಞ ಡಾ| ಎಂ.ಜಿ ಈಶ್ವರಪ್ಪ, ಹಿರಿಯ ಪತ್ರಕರ್ತ ಬಿ.ಎನ್‌ ಮಲ್ಲೇಶ್‌, ಸೋಮೇಶ್ವರ ವಿದ್ಯಾಲಯದ ಕೆ.ಎಂ ಸುರೇಶ್‌ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.