ಆರು ನೌಕರರಿಂದ ಆತ್ಮಹತ್ಯೆಗೆ ಯತ್ನ

ಚಿಗಟೇರಿ ಆಸ್ಪತ್ರೆಯ 52 ಗುತ್ತಿಗೆ ನೌಕರರು ವಜಾ•ಆತ್ಮಹತ್ಯೆಗೆ ಯತ್ನಿಸಿದವರಿಗೆ ಸೂಕ್ತ ಚಿಕಿತ್ಸೆ

Team Udayavani, Jun 2, 2019, 10:06 AM IST

2-June-3

ದಾವಣಗೆರೆ: ಚಿಗಟೇರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಗುತ್ತಿಗೆ ನೌಕರರು.

ದಾವಣಗೆರೆ: ಕೆಲಸದಿಂದ ವಜಾಗೊಳಿಸಿದ್ದಕ್ಕೆ ಬೇಸರಗೊಂಡು ಚಿಗಟೇರಿ ಸಾರ್ವಜನಿಕ ಆಸ್ಪತ್ರೆಯ ಗುತ್ತಿಗೆ ನೌಕರರಲ್ಲಿ ಆರು ಮಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ನಡೆದಿದೆ.

ಕಳೆದ 9 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಜಿಲ್ಲಾಸ್ಪತ್ರೆಯ ವಿವಿಧ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ 52 ಮಂದಿಗೆ ಜೂನ್‌ 1ರಿಂದ ಕೆಲಸಕ್ಕೆ ಬರದಂತೆ ಸೂಚಿಸಲಾಗಿತ್ತು. ಇದರಿಂದ ನೊಂದ 6 ನೌಕರರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಜಿಲ್ಲಾಸ್ಪತ್ರೆಯಲ್ಲೇ ದಾಖಲಿಸಲಾಗಿದೆ.

ಕೆಲಸದಿಂದ ವಜಾಗೊಳಿಸಿದ ಹಿನ್ನೆಲೆಯಲ್ಲಿ ಸ್ಟಾಫ್‌ ನರ್ಸ್‌ಗಳಾಗಿ ಸೇವೆ ಸಲ್ಲಿಸುತ್ತಿದ್ದ ಹನುಮಂತಪ್ಪ, ಸೋಮಶೇಖರ್‌, ದೀಪಾ, ಸುಮಯ್ಯಬಾನು, ಸಿಂಧು ಹಾಗೂ ವಿನಯ ಆತ್ಮಹತ್ಯೆಗೆ ಯತ್ನಿಸಿದವರು. ಇವರಲ್ಲಿ ಇಬ್ಬರು ನಿದ್ರೆಮಾತ್ರೆ ನುಂಗಿದರೆ, ನಾಲ್ವರು ವಿಷ ಕುಡಿದು ಆತ್ಮಹತ್ಯೆ ಪ್ರಯತ್ನಿಸಿದ್ದು ಅಸ್ವಸ್ಥಗೊಂಡ ಇವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಚೇತರಿಸಿಕೊಂಡ ವಿನಯರನ್ನು ಬಿಡುಗಡೆ ಮಾಡಲಾಗಿದೆ.

ಘಟನೆ ಹಿನ್ನೆಲೆ: ಚಿಗಟೇರಿ ಜಿಲ್ಲಾಸ್ಪತ್ರೆಯ ವಿವಿಧ ವಿಭಾಗದಲ್ಲಿ 2010ರಿಂದಲೂ 80ಕ್ಕೂ ಹೆಚ್ಚು ಮಂದಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 30 ನರ್ಸ್‌ಗಳು, 10 ಲ್ಯಾಬ್‌ ಟೆಕ್ನಿಷಿಯನ್‌ ಹಾಗೂ ಎಕ್ಸ್‌ರೇ ವಿಭಾಗದಲ್ಲಿ 10 ಮಂದಿಯಲ್ಲದೇ 24 ಮಂದಿ ಕಂಪ್ಯೂಟರ್‌ ಆಪರೇಟರ್‌ಗಳಾಗಿಯೂ ಕೆಲಸ ಮಾಡುತ್ತಿದ್ದಾರೆ. ಇವರಲ್ಲಿ ಕಂಪ್ಯೂಟರ್‌ ಆಪರೇಟರ್‌ಗಳನ್ನು ಬೆಂಗಳೂರಿನ ಏಜೆನ್ಸಿ ಮೂಲಕ ನೇಮಕ ಮಾಡಿಕೊಳ್ಳಲಾಗಿದೆ. ನರ್ಸ್‌ಗಳು, ಲ್ಯಾಬ್‌ ಟೆಕ್ನಿಷಿಯನ್‌ಗಳನ್ನು ದಾವಣಗೆರೆಯ ಏಜೆನ್ಸಿಯೊಂದರ ಮೂಲಕ ನೇಮಕ ಮಾಡಿಕೊಳ್ಳಲಾಗಿದೆ.

ಕಳೆದ 9 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಇವರೆಲ್ಲ ಸೇವಾ ಖಾಯಮಾತಿ ಸೇರಿದಂತೆ ಸೌಲಭ್ಯ ಕಲ್ಪಿಸಲು ಅನೇಕ ಬಾರಿ ಸಂಬಂಧಪಟ್ಟವರ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಈ ಮಧ್ಯೆ ಜಿಲ್ಲಾಸ್ಪತ್ರೆಯ ಅಧೀಕ್ಷಕಿ ಡಾ| ನೀಲಾಂಬಿಕೆ, ಒಂದು ತಿಂಗಳ ಹಿಂದೆಯೇ ಜೂನ್‌ 1ರಿಂದ ಕೆಲಸಕ್ಕೆ ಬರದಂತೆ ಗುತ್ತಿಗೆ ನೌಕರರಿಗೆ ನೊಟೀಸ್‌ ನೀಡಿದ್ದರಂತೆ. ಶನಿವಾರ ಬೆಳಗ್ಗೆ ಎಲ್ಲಾ ವಿಭಾಗದ ಗುತ್ತಿಗೆ ನೌಕರರು ಜಿಲ್ಲಾಸ್ಪತ್ರೆಗೆ ತೆರಳಿ, ಸಹಿ ಮಾಡಲು ಹಾಜರಿ ಪುಸ್ತಕ ಕೇಳಿದಾಗ ಸಂಬಂಧಪಟ್ಟವರು ಅದನ್ನು ನೀಡಿಲ್ಲ. ಅಲ್ಲದೇ ನಿಮಗೆ ಹಾಜರಿ ಪುಸ್ತಕ ನೀಡದಂತೆ ಆಸ್ಪತ್ರೆಯ ಅಧೀಕ್ಷಕರು ಸೂಚಿಸಿದ್ದಾರೆ ಎಂಬುದಾಗಿ ಹೇಳಿದ್ದಾರೆ.

ಇದರಿಂದ ನೊಂದ ಗುತ್ತಿಗೆ ನೌಕರರು ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅವರಲ್ಲಿ ನೊಂದ ಆರು ಮಂದಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈ ಮಧ್ಯೆ ಗುತ್ತಿಗೆ ನೌಕರರು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ.ರವೀಂದ್ರನಾಥ್‌ ಬಳಿ ತೆರಳಿ, ತಮ್ಮ ಸಮಸ್ಯೆ ಗಮನಕ್ಕೆ ತಂದಾಗ, ಶಾಸಕರು ದೂರವಾಣಿ ಮೂಲಕ ಮಾತನಾಡಿ, ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯದಂತೆ ಜಿಲ್ಲಾಸ್ಪತ್ರೆ ಅಧೀಕ್ಷಕರಿಗೆ ತಿಳಿಸಿದ್ದಾರೆ.

ಗುತ್ತಿಗೆ ನೌಕರರ ಮುಖಂಡರು ಜಿಲ್ಲಾಧಿಕಾರಿಯವರನ್ನೂ ಭೇಟಿಯಾಗಿ, ತಮ್ಮ ಸಮಸ್ಯೆ ತೋಡಿಕೊಂಡಿದ್ದು, ಅವರು ಸಹ ಆಸ್ಪತ್ರೆಯ ಡಿಎಸ್‌ ಅವರೊಂದಿಗೆ ಮಾತನಾಡಿ, ಸದ್ಯ ಗುತ್ತಿಗೆ ನೌಕರರನ್ನು ಡಿ ಗ್ರೂಪ್‌ನಲ್ಲಿ ಮುಂದುವರಿಸುವಂತೆ ಸೂಚಿಸಿದ್ದಾರೆ.

ಗುತ್ತಿಗೆ ನೌಕರರಿಗೆ ಎಆರ್‌ಎಸ್‌ ಫಂಡ್‌ನಿಂದ ಏಜೆನ್ಸಿಯವರಿಗೆ ಹಣ ಪಾವತಿ ಮಾಡುತ್ತಿದ್ದು, ಕೆಲವು ತಿಂಗಳಿಂದ ಆ ಫಂಡ್‌ನ‌ ಕೊರತೆಯಿಂದಾಗಿ ಏಜೆನ್ಸಿಯವರಿಗೆ ಹಣ ನೀಡದೇ ಇರುವುದರಿಂದ ಗುತ್ತಿಗೆ ನೌಕರರಿಗೆ 4-5 ತಿಂಗಳ ವೇತನ ಸಹ ಸಿಗದಂತಾಗಿದೆ.

ಆದರೂ 9 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಗುತ್ತಿಗೆ ನೌಕರರು ಇಂದಲ್ಲಾ ನಾಳೆ ತಮ್ಮ ಕೆಲಸ ಕಾಯಂ ಮಾಡಬಹುದೆಂಬ ನಿರೀಕ್ಷೆಯಲ್ಲೇ ಕಾಲ ತಳ್ಳುತ್ತಿದ್ದಾರೆ. ಈ ಮಧ್ಯೆ ಕೆಲಸದಿಂದ ವಜಾಗೊಳಿಸಿದ್ದರಿಂದ ಕೆಲವರು ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ

ಟಾಪ್ ನ್ಯೂಸ್

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.