ಎಲ್ಲೆಡೆ ಈಗ ಬಿರುಸಿನ ಪ್ರಚಾರ

ಅಭ್ಯರ್ಥಿಗಳ ಪರ ಮುಖಂಡರ ಓಡಾಟಮತದಾರರ ಮನ ಗೆಲ್ಲಲು ಹರಸಾಹಸ

Team Udayavani, Nov 8, 2019, 11:14 AM IST

8-November-3

ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌, ಸಿಪಿಐ ಮುಖಂಡರು, ಕಾರ್ಯಕರ್ತರು ಬಿರುಸಿನ ಪ್ರಚಾರ ನಡೆಸಿದರು.

ಗುರುವಾರ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಕೆ.ಟಿ.ಜೆ. ನಗರ- ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಯಶೋಧಾ ಯೋಗೇಶ್‌ ಪರ ಪ್ರಚಾರ ನಡೆಸಿದರು. ಮನೆ ಮನೆಗೆ ತೆರಳಿ, ಕೇಂದ್ರ, ರಾಜ್ಯ ಸರ್ಕಾರದ ಸರ್ಕಾರದ ಸಾಧನೆ ತಿಳಿಸಿ, ದಾವಣಗೆರೆ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು.

ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌, ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರ ಇತರರು ಭಗತ್‌ಸಿಂಗ್‌ ನಗರ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಆರ್‌. ಲಕ್ಷ್ಮಣ್‌ ಪರ ವಿವಿಧ ಭಾಗದಲ್ಲಿ ಬಿರುಸಿನ ಪ್ರಚಾರ ನಡೆಸಿ, ಬಿಜೆಪಿ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಜಾಲಿನಗರ ವಾರ್ಡ್‌ನ ಕಾಂಗ್ರೆಸ್‌ ಅಭ್ಯರ್ಥಿ ವಿನಾಯಕ ಪೈಲ್ವಾನ್‌ ಪರ ಪ್ರಚಾರ ನಡೆಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌ ತಮ್ಮ ಪುತ್ರ, 10ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ರಾಕೇಶ್‌ ಜಾಧವ್‌ ಪರ ವಿವಿಧ ಭಾಗದಲ್ಲಿ ಪ್ರಚಾರ ನಡೆಸಿದರು.

ಮಾಜಿ ಮೇಯರ್‌ ಅನಿತಾ ಮಾಲತೇಶ್‌ ತಮ್ಮ ಪತಿ, 10ನೇ ವಾರ್ಡ್‌ನ ಕಾಂಗ್ರೆಸ್‌ ಸದಸ್ಯ ಮಾಲತೇಶ್‌ ಜಾಧವ್‌ ಪರ ಪ್ರಚಾರ ನಡೆಸಿದರು. ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಟಿ. ಗಣೇಶ್‌ ದಾಸಕರಿಯಪ್ಪ 14ನೇ ವಾರ್ಡ್‌ನ ಸಾದತ್‌ ಮುಬಾರಕ್‌ ಪರ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು.

17ನೇ ವಾರ್ಡ್‌ನ ಸಿಪಿಐ ಅಭ್ಯರ್ಥಿ ಎಂ.ಜಿ. ಶ್ರೀಕಾಂತ್‌, 16ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಎಚ್‌. ದಿವಾಕರ್‌ ಇತರರು ಪ್ರಚಾರ ನಡೆಸಿದರು. ಚನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಬೂಬಜಾರ್‌ ಮತ್ತು ಶೇಖರಪ್ಪ ನಗರದಲ್ಲಿ 19ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಕೆ.ಎಂ. ಬಸವರಾಜ್‌ ಪರ ಚುನಾವಣಾ ಪ್ರಚಾರ ನಡೆಸಿದರು. ಬಂಬೂಬಜಾರ್‌ ಮತ್ತು ಶೇಖರಪ್ಪ ನಗರದ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು. ದಾವಣಗೆರೆ ನಗರದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು.

ಜಿಲ್ಲಾ ಪಂಚಾಯತ್‌ ಸದಸ್ಯ ಪಿ. ವಾಗೀಶ್‌, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಎಸ್‌.ಸುಶೀಲಮ್ಮ, ವೈ. ಮಲ್ಲೇಶ್‌, ಕುಮಾರ್‌ಸ್ವಾಮಿ, ಗೌತಮ್‌ ಜೈನ್‌, ಟಿ.ವಿ. ರಾಜು, ಮರುಳಪ್ಪ, ಸಿದ್ದೇಶ್‌, ಗಂಗಾಧರನಾಯ್ಕ, 14ನೇ ವಾರ್ಡ್‌  ಅಭ್ಯರ್ಥಿ ವೇಣು, ಎನ್‌.ಎಚ್‌. ಹಾಲೇಶ್‌, ಯಲ್ಲೇಶ್‌, ಶಾಂತಕುಮಾರ, ಕಂಚಿಕೆರೆ ರುದ್ರೇಶ್‌, ಶಿವರಾಜ್‌, ಚಂದ್ರು, ನಾಗರಾಜ್‌ ಇದ್ದರು.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.