ಕೊಲೆಯಾಗಿದೆ ಎಂದು ಸೆಲ್ಫಿ ಹಾಕಿ ಯಾಮಾರಿಸಿದ!

ಮೊಬೈಲ್ ವಿಚಾರವಾಗಿ ಜಗಳ ಸ್ನೇಹಿತರಿಗೆ ಹೆದರಿ ಈ ಕೃತ್ಯ

Team Udayavani, May 20, 2019, 10:30 AM IST

20-May-5

ದಾವಣಗೆರೆ: ಯುವಕನೋರ್ವ ತನ್ನನ್ನು ಕೊಲೆ ಮಾಡಲಾಗಿದೆ ಎಂದು ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪಲೋಡ್‌ ಮಾಡಿ ಕುಟುಂಬ ವರ್ಗದವರು, ಪೊಲೀಸರು ಸೇರಿ ಎಲ್ಲರನ್ನೂ ಯಾಮಾರಿಸಿದ ಪ್ರಸಂಗವೊಂದು ನಡೆದಿದೆ. ಪೊಲೀಸರು ಯುವಕನನ್ನು ಪತ್ತೆ ಹಚ್ಚಿ, ಠಾಣೆಗೆ ಕರೆತಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಮೊಬೈಲ್ ವಿಚಾರವಾಗಿ ಜಗಳ ಮಾಡಿಕೊಂಡಿದ್ದ ದಾವಣಗೆರೆಯ ಯಲ್ಲಮ್ಮ ನಗರದ 12ನೇ ಕ್ರಾಸ್‌ ನಿವಾಸಿ ಪರಶುರಾಮ ವಾಟ್ಸ್‌ ಆ್ಯಪ್‌ನಲ್ಲಿ ಫೋಟೋ ಹಾಕಿ ಎಲ್ಲರನ್ನೂ ಯಾಮಾರಿಸಿದ್ದ.

ಈಗಾಗಲೇ ದಾವಣಗೆರೆಯಲ್ಲಿ ನಡೆದಿರುವ ಮೂರು ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ತಲೆ ಕೆಡಿಸಿಕೊಂಡಿರುವ ಪೊಲೀಸರಿಗೆ ಮತ್ತೂಂದು ಕೊಲೆಯ ವಿಚಾರ ಇನ್ನಷ್ಟು ತಲೆನೋವು ಉಂಟು ಮಾಡಿತ್ತು. ಆದರೆ ಪರಶುರಾಮ ವಾಟ್ಸ್‌ ಆ್ಯಪ್‌ ಮೂಲಕ ಕಳಿಸಿದ್ದ ಫೋಟೋವನ್ನು ಅತಿ ಸೂಕ್ಷ್ಮವಾಗಿ ಪರಿಶೀಲಿಸಿದ ಪೊಲೀಸರು ಪ್ರಕರಣದ ರಹಸ್ಯ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ: ಯಲ್ಲಮ್ಮ ನಗರದ ಪರಶುರಾಮ್‌ ತರಕಾರಿ ವ್ಯಾಪಾರ ಮಾಡುತ್ತಿದ್ದ. ಮೊಬೈಲ್ ವಿಚಾರವಾಗಿ ತನ್ನ ಗೆಳೆಯರೊಂದಿಗೆ ಜಗಳ ಮಾಡಿಕೊಂಡಿದ್ದ. ಅವರು ತನಗೆ ಹೊಡೆಯಬಹುದು ಎಂದುಕೊಂಡಿದ್ದ ಪರಶುರಾಮ, ಶನಿವಾರ ದಾವಣಗೆರೆಯ ಹೊಳೆಹೊನ್ನೂರು ತೋಟದ ನಿರ್ಜನ ಪ್ರದೇಶಕ್ಕೆ ತೆರಳಿ ತನ್ನ ಮೈಮೇಲೆ ಕುಂಕುಮದ ನೀರು ಹಾಕಿಕೊಂಡು ತನಗೆ ಹೊಡೆದು ಕೊಲೆ ಮಾಡಲಾಗಿದೆ ಎನ್ನುವಂತೆ ತನ್ನದೇ ಮೊಬೈಲ್ನಲ್ಲಿ ಸೆಲ್ಫಿ ತೆಗೆದು ಕೆಲವರಿಗೆ ಫೋಟೋ ಫಾರ್ವರ್ಡ್‌ ಮಾಡಿದ್ದ. ಕೊನೆಗೆ ಮೊಬೈಲ್ ಸ್ವಿಚ್ ಆಫ್‌ ಮಾಡಿಕೊಂಡಿದ್ದ.

ಕ್ಷಣ ಮಾತ್ರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪರಶುರಾಮನ ಫೋಟೋ ಹರಿದಾಡಿದೆ. ಅವನ ಕುಟುಂಬದವರಿಗೂ ವಿಷಯ ಮುಟ್ಟಿದೆ. ಕಂಗಾಲಾದ ಕುಟುಂಬದ ಸದಸ್ಯರು ಈತನಿಗಾಗಿ ಹುಡುಕಾಡಿ ನಂತರ ಬಡಾವಣಾ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದಾರೆ. ಆದರೆ, ಎಲ್ಲಿಯೂ ಪರಶುರಾಮನ ಶವ ಪತ್ತೆಯಾಗಿಲ್ಲ. ಕೊನೆಗೆ ಸಂಜೆ 5 ಗಂಟೆ ಸುಮಾರಿಗೆ ಪರಶುರಾಮನ ಮೊಬೈಲ್ ಆನ್‌ ಆಗಿದೆ. ತಕ್ಷಣ ಆತ ಇರುವ ಸ್ಥಳ ಪತ್ತೆ ಹಚ್ಚಿದ ಪೊಲೀಸರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದಾಗ ಅಸಲಿ ವಿಷಯ ಬಯಲಿಗೆ ಬಂದಿದೆ. ಮೊಬೈಲ್ ವಿಚಾರವಾಗಿ ಗಲಾಟೆ ಮಾಡಿದ್ದ ರಾಣೆಬೆನ್ನೂರು ಸಮೀಪದ ಮೆಡ್ಲೇರಿ ಗ್ರಾಮದ ಯುವಕನನ್ನೂ ಪತ್ತೆ ಹಚ್ಚಿದ ಪೊಲೀಸರು ಆತನ ವಿಚಾರಣೆ ನಡೆಸಿದ್ದಾರೆ.

ನನ್ನದೇ ಕೊಲೆಯಾಗಿದೆ ಎಂದು ಸುಳ್ಳು ಹೇಳುವ ಮೂಲಕ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದ ಪರಶುರಾಮನಿಗೆ ಪೊಲೀಸರು ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆ.

ಟಾಪ್ ನ್ಯೂಸ್

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.