ದುರ್ಬಲರಿಗೆ ಭದ್ರತೆ ಒದಗಿಸಿದ್ದು ಅರಸು

ದೇವರಾಜ ಅರಸು ಜನ್ಮ ದಿನಾಚರಣೆಯಲ್ಲಿ ಪ್ರೊ| ಪಿ.ಕಣ್ಣನ್‌ ಬಣ್ಣನೆ•ಐಟಿ ಕ್ರಾಂತಿ ರಾಜೀವ್‌ ಕೊಡುಗೆ

Team Udayavani, Aug 21, 2019, 10:21 AM IST

21-Agust-2

ದಾವಣಗೆರೆ: ದಾವಿವಿಯಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ ದಿನಾಚರಣೆಯಲ್ಲಿ ಕುಲಸಚಿವ ಪ್ರೊ| ಪಿ.ಕಣ್ಣನ್‌ ಮಾತನಾಡಿದರು.

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಸಮಾಜದಲ್ಲಿ ಸಮಾನತೆ, ಏಕತೆ ಜೊತೆಗೆ ಹಿಂದುಳಿದ ದುರ್ಬಲ ವರ್ಗದ ಜನರ ಆರ್ಥಿಕ, ಸಾಮಾಜಿಕ ಭದ್ರತೆಗೆ ನೆಲೆ ಒದಗಿಸಿದ ಮಹಾನ್‌ ವ್ಯಕ್ತಿ ಎಂದು ದಾವಿವಿ ಕುಲಸಚಿವ ಪ್ರೊ| ಪಿ. ಕಣ್ಣನ್‌ ಬಣ್ಣಿಸಿದ್ದಾರೆ.

ಮಂಗಳವಾರ, ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಸಮಾಜದಲ್ಲಿ ಎಲ್ಲ ವರ್ಗಗಳ ಜನರಲ್ಲಿ ಆರ್ಥಿಕ, ರಾಜಕೀಯ ಸಮಾನತೆ ತರುವ ಉದ್ದೇಶದಿಂದ ಉಳುವವನೇ ಒಡೆಯ ಕಾನೂನು ಕಟ್ಟು ನಿಟ್ಟಾಗಿ ಜಾರಿಗೊಳಿದ್ದು ಅರಸುರವರು. ದುರ್ಬಲ ವರ್ಗದ ಜನರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ದೊರಕಿಸುವ ಜೊತೆಗೆ ಶೈಕ್ಷಣಿಕ ಉನ್ನತಿಗೆ ನೆರವು ನೀಡಿದರು ಎಂದು ಸ್ಮರಿಸಿದರು.

ಸಮಾಜದಲ್ಲಿ ಆಚರಣೆಯಲ್ಲಿದ್ದ ಹಲವಾರು ಅನಿಷ್ಠ ಪದ್ಧತಿ ಹೋಗಲಾಡಿಸಲು ಅರಸು ಕಾನೂನು ಜಾರಿಗೆ ತಂದರು. ಹಿಂದುಳಿದ ವರ್ಗಗಳ ಜನರಿಗೆ ಹಲವಾರು ಯೋಜನೆಗಳನ್ನು ರೂಪಿಸಿ ಅಭಿವೃದ್ಧಿಗೆ ನೆರವಾದರು. ಅವರ ಆಶ್ರಯದಲ್ಲಿ ಬೆಳೆದ ನೂರಾರು ಜನರು ರಾಜಕೀಯವಾಗಿ ಉನ್ನತಿ ಸಾಧಿಸಲು ಪ್ರೇರಕ ಶಕ್ತಿಯಾಗಿದ್ದರು ಎಂದು ಹೇಳಿದರು.

ರಾಜಕೀಯವಾಗಿ ಹಲವಾರು ಏಳು ಬೀಳು ಅನುಭವಿಸಿದರೂ ನಾಡಿನ ಜನರ ಬಗ್ಗೆ ಅವರಿಗಿದ್ದ ಕಾಳಜಿ, ಇಚ್ಛಾಶಕ್ತಿ, ಬದ್ಧತೆ ಯುವಜನರಿಗೆ ಪ್ರೇರಣೆಯಾಗಿದೆ. ಸಮಸ್ಯೆಯ ಮೂಲವನ್ನು ಅರಿತು, ಪರಿಹಾರ ಕಂಡುಕೊಳ್ಳುವ ಅವರ ಜನಪರ ಕಳಕಳಿಯಿಂದಾಗಿ ಇಂದಿಗೂ ಅವರನ್ನು ಸ್ಮರಿಸುವಂತಾಗಿದೆ ಎಂದು ಹೇಳಿದರು.

ಕುಲಸಚಿವ (ಪರೀಕ್ಷಾಂಗ) ಬಸವರಾಜ ಬಣಕಾರ, ದೇವರಾಜ ಅರಸುರವರ ಜನಪರ ಕಾಳಜಿ ಕುರಿತು ಮಾತನಾಡಿದರು. ವಿಶ್ವವಿದ್ಯಾನಿಲಯದ ಹಿಂದುಳಿದ ವರ್ಗಗಳ ಘಟಕದ ಸಂಯೋಜನಾಧಿಕಾರಿ ಕುಮಾರ ಸಿದ್ಧಮಲ್ಲಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಡೀನ್‌ಗಳಾದ ಪ್ರೊ| ಕೆ.ಬಿ.ರಂಗಪ್ಪ, ಪ್ರೊ| ಕೆ. ಲಕ್ಷ್ಮಣ್‌ ಉಪಸ್ಥಿತರಿದ್ದರು.

ವನಮಹೋತ್ಸವ: ದೇವರಾಜ ಅರಸು ಜನ್ಮದಿನದ ಪ್ರಯುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿ ವಿದ್ಯಾರ್ಥಿಗಳು ನೂರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು, ನೀರುಣಿಸಿದರು. ಈ ಕಾರ್ಯಕ್ರಮಕ್ಕೆ ಕುಲಸಚಿವ ಪ್ರೊ| ಕಣ್ಣನ್‌ ಚಾಲನೆ ನೀಡಿದರು.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.