ಗಡಿ ಕಾಯುವ ಸೈನಿಕರೇ ನಿಜವಾದ ಹೀರೋಗಳು
ಸೈನಿಕರ ಜೊತೆಗೆ ರೈತರ ಹಾಗೂ ಶಿಕ್ಷಕರ ಸೇವೆಯೂ ಸ್ಮರಣೀಯ
Team Udayavani, Jul 8, 2019, 4:57 PM IST
ದಾವಣಗೆರೆ: ಶ್ರೀ ಬಸವಪ್ರಭು ಸ್ವಾಮೀಜಿ ಜಿಲ್ಲಾ ಮಾಜಿ ಸೈನಿಕ ವಿವಿಧೋದ್ದೇಶ ಸಂಘದ ಬೆಳ್ಳಿ ಹಬ್ಬ ಮಹೋತ್ಸವ ಉದ್ಘಾಟಿಸಿದರು.
ದಾವಣಗೆರೆ: ದೇಶದ ರಕ್ಷಣೆಯಲ್ಲಿ ಸದಾ ತೊಡಗಿಸಿಕೊಂಡಿರುವ ಸೈನಿಕರೇ ನಿಜವಾದ ಹೀರೋಗಳು ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಬಣ್ಣಿಸಿದ್ದಾರೆ.
ಭಾನುವಾರ ಶಿವಯೋಗಾಶ್ರಮದಲ್ಲಿ ದಾವಣಗೆರೆ ಜಿಲ್ಲಾ ಮಾಜಿ ಸೈನಿಕ ವಿವಿಧೋದ್ದೇಶ ಸಂಘದ ಬೆಳ್ಳಿ ಹಬ್ಬ ಮಹೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಜನರು ಶಾಂತಿ, ನೆಮ್ಮದಿಯಿಂದ ಬದುಕುವಂತೆ ನೋಡಿಕೊಳ್ಳುವ ಸೈನಿಕರೇ ನಿಜವಾದ ಹೀರೋಗಳು ಎಂದರು.
ಸಿನಿಮಾಗಳಲ್ಲಿ ನಟಿಸುವ ನಟರನ್ನು ಹೀರೋಗಳೆಂದು ಭಾವಿಸಲಾಗುತ್ತದೆ.ಆದರೆ, ಅವರು ಕೇವಲ ಮೂರು ತಾಸಿನ ಚಿತ್ರದ ಪರದೆಗೆ ಮಾತ್ರ ಸೀಮಿತರು. ದೇಶದಲ್ಲಿ ಇಂದು ಪ್ರತಿಯೊಬ್ಬರೂ ಶಾಂತಿ, ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂದರೆ ಅದು ಸೈನಿಕರಿಂದ ಮಾತ್ರ. ಸರ್ವಸ್ವವನ್ನೂ ಬಿಟ್ಟು, ತ್ಯಾಗ ಮನೋಭಾವನೆಯೊಂದಿಗೆ ದೇಶದ ಗಡಿ ಕಾಯುವ ಸೈನಿಕರು ನಿಜವಾದ ಹೀರೋಗಳು ಎಂದು ತಿಳಿಸಿದರು.
ಸೈನಿಕರ ಜೊತೆಗೆ ರೈತರ ಹಾಗೂ ಶಿಕ್ಷಕರ ಸೇವೆಯೂ ಸ್ಮರಣೀಯವಾಗಿದೆ. ಸೈನಿಕರು, ರೈತರು, ಶಿಕ್ಷಕರು ದೇಶದ ರಕ್ಷಕರಾಗಿದ್ದಾರೆ. ಅನ್ನವಿಲ್ಲದೆ, ಶಿಕ್ಷಣವಿಲ್ಲದೆ, ದೇಶದ ರಕ್ಷಣೆ ಇಲ್ಲದೆ ನೆಮ್ಮದಿಯಿಂದ ಬದುಕುವುದು ಅಸಾಧ್ಯ. ಶಿಕ್ಷಕರು, ರೈತರು ಮತ್ತು ಸೈನಿಕರನ್ನು ನಾವು ನಮ್ಮ ಜೀವಮಾನದುದ್ದಕ್ಕೂ ಗೌರವಿಸಲೇಬೇಕು. ಸೈ ನಿಕರ ಬೇಡಿಕೆಗಳಿಗೂ ಸರ್ಕಾರ ಸ್ಪಂದಿಸಬೇಕು ಎಂದು ಶ್ರೀಗಳು ಆಗ್ರಹಿಸಿದರು.
ಮನುಷ್ಯನ ಶಾಂತಿ, ನೆಮ್ಮದಿಗೆ ಸತ್ಸಂಗವೂ ಅಗತ್ಯವಾಗಿವೆ. ಸತ್ಸಂಗದಿಂದ ಒಳ್ಳೆಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿನಿತ್ಯ ತೋರಿಸಿದ್ದೇ ತೋರಿಸುವ, ಹೇಳಿದ್ದೇ ಹೇಳುವ, ನೋಡಿದ್ದೇ ನೋಡುವ ಟಿವಿಯಲ್ಲಿನ ಧಾರವಾಹಿಗಳಿಂದ ಕೆಲ ಸಮಯ ದೂರವಿದ್ದು, ಸತ್ಸಂಗದಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮನಸ್ಸಿಗೆ ಶಾಂತಿ, ನೆಮ್ಮದಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ವಿರಕ್ತಮಠದಲ್ಲಿ ಕಳೆದ 109 ವರ್ಷಗಳಿಂದ ಶ್ರಾವಣ ಮಾಸದ ಪ್ರವಚನ ನಡೆದುಕೊಂಡು ಬರುತ್ತಿದೆ. ಆ. 2ರಿಂದ 31ರವರೆಗೆ ಪ್ರತಿದಿನ ಸಂಜೆ ಶರಣರ ವಚನಗಳ ಪ್ರವಚನ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಮಾಜಿ ಸೈನಿಕ ವಿವಿಧೋದ್ದೇಶ ಸಂಘದ ಅಧ್ಯಕ್ಷ ಸತ್ಯಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಚಂದ್ರಪ್ಪ, ಸಂಘದ ಉಪಾಧ್ಯಕ್ಷ ಮನೋಹರ ಮಹೇಂದ್ರಪ್ಪ, ಕಾರ್ಯದರ್ಶಿ ಶಶಿಕಾಂತ್ ಇತರರು ಇದ್ದರು.
ಅಭಿರಾಮ್ ಪ್ರಾರ್ಥಿಸಿದರು. ಪ್ರತಿಕ್ಷಾ, ಅಂಜಲಿ ದೇಶಭಕ್ತಿ ಗೀತೆಗಳನ್ನು ಹಾಡಿದರು. ನಿವೃತ್ತ ಯೋಧರಾದ ಶೇಖರಪ್ಪ, ಈಶಪ್ರಭು ಅವರನ್ನು ಸನ್ಮಾನಿಸಲಾಯಿತು. ಉಚಿತ ರಕ್ತ ತಪಾಸಣೆ ಶಿಬಿರ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.