ವಿನೋಬ ನಗರ ವಿನಾಯಕಗೆ ವಿದಾಯ

ಮುಗಿಲು ಮುಟ್ಟಿದ ಹರ್ಷೋದ್ಘಾರ•ಸಾವಿರಾರು ಜನ ಭಾಗಿ •ಶಾಂತಿಯುತ ಮೆರವಣಿಗೆ

Team Udayavani, Sep 11, 2019, 11:27 AM IST

11-Sepctember-2

ದಾವಣಗೆರೆ: ವಿನೋಬ ನಗರ ಗಣೇಶ ವಿಸರ್ಜನಾ ಮೆರವಣಿಗೆಯ ನೋಟ.

ದಾವಣಗೆರೆ: ವರುಣನ ಸಿಂಚನ…, ಬೇಸಿಗೆ ನಾಚಿಸುವ ಬಿರು ಬಿಸಿಲು.., ಹೂವಿನ ಮಳೆ…, ಕಿವಿಗಡುಚ್ಚುಕ್ಕುವ ಡಿಜೆ…, ಪಟಾಕಿಯ ಸದ್ದು…, ಧ್ವನಿವರ್ಧಕದಿಂದ ತೇಲಿ ಬರುತ್ತಿದ್ದ ಹಾಡುಗಳಿಗೆ ತಕ್ಕಂತೆ ಹೆಜ್ಜೆ…, ಮುಗಿಲು ಮುಟ್ಟಿದ ಹರ್ಷೋದ್ಘಾರ…, ಮೈ ಮನ ನವಿರೇಳಿಸುವಂತ ವಿಜೃಂಭಣೆಯ ಮೆರವಣಿಗೆಯೊಂದಿಗೆ ಮಂಗಳವಾರ ವಿನೋಬ ನಗರ 2ನೇ ಮುಖ್ಯ ರಸ್ತೆಯ ಶ್ರೀ ವೀರ ವರಸಿದ್ಧಿ ವಿನಾಯಕನ ವಿಸರ್ಜನೆ ಮಾಡಲಾಯಿತು.

ವಿನೋಬ ನಗರ 2ನೇ ಮುಖ್ಯ ರಸ್ತೆಯ ಶ್ರೀ ವೀರ ವರಸಿದ್ಧಿ ವಿನಾಯಕನ ವಿಸರ್ಜನಾ ಮೆರವಣಿಗೆ ತನ್ನದೇ ಆದ ಖ್ಯಾತಿಗೆ ತಕ್ಕಂತೆ ಸೊಬಗಿನಿಂದ ಕೂಡಿತ್ತು. ಭರ್ಜರಿ ಮೆರವಣಿಗೆಗೆ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಚಾಲನೆ ನೀಡಿದರು. ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಹಳ್ಳಿ ರಮೇಶ್‌, ನಗರಸಭೆ ಮಾಜಿ ಉಪಾಧ್ಯಕ್ಷ ಎ. ನಾಗರಾಜ್‌, ಶ್ರೀ ವೀರ ವರಸಿದ್ಧಿ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಟಿ.ಎಂ. ಗುರುನಾಥ್‌ಬಾಬು, ಗಣೇಶ್‌, ಡಿ.ಎಸ್‌. ರಮೇಶ್‌, ಎಂ. ಟಿಪ್ಪುಸುಲ್ತಾನ್‌, ಬೆಳ್ಳೊಡಿ ಮಂಜುನಾಥ್‌, ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ತಹಶೀಲ್ದಾರ್‌ ಜಿ. ಸಂತೋಷ್‌ಕುಮಾರ್‌ ಇತರರು ಸಾಥ್‌ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ, ಅದ್ಧೂರಿ, ವಿಜೃಂಭಣೆಯ ಗಣೇಶನ ಮೆರವಣಿಗೆ ನೋಡುವುದೇ ಆನಂದ. ಅಲ್ಪಸಂಖ್ಯಾತ ಬಾಂಧವರು ಸಹ ಗಣೇಶಮೂರ್ತಿಗೆ ಮಾಲಾರ್ಪಣೆ ಮಾಡುವುದು ಸಾಮರಸ್ಯದ ಸಂಕೇತ ಎಂದು ಸಂತಸ ವ್ಯಕ್ತಪಡಿಸಿದರು.

ಎಸ್‌ಪಿ ಹನುಮಂತರಾಯ ಮಾತನಾಡಿ, ಬಹಳ ವರ್ಷಗಳಿಂದ ವಿನೋಬ ನಗರ ಗಣೇಶನ ಮೆರವಣಿಗೆಯನ್ನ ಅದ್ಧೂರಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಶಾಂತಿ, ಸುವ್ಯವಸ್ಥೆಯುತ ಮೆರವಣಿಗೆ ನಡೆಯಲಿಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಗಣೇಶನ ಮೆರವಣಿಗೆ ಪ್ರಾರಂಭವಾಗುತ್ತಿದ್ದಂತೆ ಪಟಾಕಿ ಸಿಡಿಸಿ, ಗುಲಾಲ್ ಎರಚಿ ಸಂಭ್ರಮಕ್ಕೆ ಮುನ್ನಡಿ ಬರೆಯಲಾಯಿತು. ಡೊಳ್ಳು, ಕರಡಿ ಮಜಲು, ನಂದಿಕೋಲು… ಮುಂತಾದ ಜಾನಪದ ಕಲಾ ಪ್ರಕಾರ, ಡಿಜೆಯಿಂದ ಹೊರ ಹೊಮ್ಮುತ್ತಿದ್ದ ಹಾಡುಗಳಿಗೆ ವಿಶೇಷ ಧಿರಿಸಿನಲ್ಲಿದ್ದ ನೂರಾರು ಯುವಕರು ಮನಸೋ ಇಚ್ಛೆ ಹೆಜ್ಜೆ ಹಾಕಿದರು. ಸೆಲ್ಫಿ ತೆಗೆದುಕೊಳ್ಳುವ ಮೂಲಕ ಮೆರವಣಗೆ ಸ್ಮರಣೀಯವಾಗಿಸಿಕೊಂಡರು.

ಗಣಪತಿ ಬಪ್ಪ ಮೋರಯ… ಜೈ ಜೈ ಶಿವಾಜಿ… ಜೈ ಶ್ರೀರಾಮ್‌…, ಭಾರತ್‌ ಮಾತಾ ಕೀ ಜೈ… ಎಂಬ ಘೋಷಣೆ ಮೊಳಗಿದವು. ಮುಗಿಲು ಮುಟ್ಟುವಂತೆ ವಿಘ್ನೇಶ್ವರ್‌ ಮಹಾರಾಜ್‌ ಕೀ ಜೈ… ಎಂಬ ಜೈಕಾರ ಹಾಕಿದರು. ಮೆರವಣಿಗೆ ಸಾಗಿ ಬಂದ ಇಕ್ಕೆಲಗಳ ಕಟ್ಟಡಗಳಿಂದ ಹೂವಿನ ಮಳೆ ಸುರಿಸುವ ಮೂಲಕ ಮೆರವಣಿಗೆಗೆ ಇನ್ನಷ್ಟು ಸೊಬಗು ಹೆಚ್ಚಿಸಲಾಯಿತು.

ಮೆರವಣಿಗೆ ಸಾಗುತ್ತಿದ್ದಂತೆ ಜನರ ಸಂಖ್ಯೆ ಜಾಸ್ತಿಯಾಗತೊಡಗಿತು. ಸಾವಿರಾರು ಜನರು ಮೆರವಣಿಗೆಗೆ ಕೂಡಿ ಕೊಂಡಿದ್ದರಿಂದ ಕಾಲಿಡಲು ಜಾಗ ಇಲ್ಲದಂತಾಯಿತು. ಕಿರಿದಾದ ರಸ್ತೆಯುದ್ದಕ್ಕೂ ಅಕ್ಷರಶಃ ಜನಸಾಗರವೇ ಕಂಡು ಬಂದಿತು. ಚಿಕ್ಕ ಮಕ್ಕಳು, ಯುವಕರು, ವಯೋವೃದ್ಧರು… ಎನ್ನದೆ ಎಲ್ಲರೂ ಹೆಜ್ಜೆ ಹಾಕಿ, ಸಂಭ್ರಮಿಸಿದರು.

ಮೆರವಣಿಗೆ ಪ್ರಾರ್ಥನಾ ಮಂದಿರದ ಬಳಿ ಬರುವ ವೇಳೆಗೆ ಸಾಗರೋಪಾದಿ ಜನರು ನೆರೆದಿದ್ದರು. ಮೆರವಣಿಗೆಯಲ್ಲಿದ್ದವರ ಹರ್ಷೋದ್ಘಾರ ಹೆಚ್ಚಾಯಿತು.ಅಲ್ಪಸಂಖ್ಯಾತ ಮುಖಂಡರು ಗಣೇಶಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾದರು. ಪ್ರಾರ್ಥನಾ ಮಂದಿರದ ಬಳಿ ಸ್ವತಃ ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ತಹಶೀಲ್ದಾರ್‌ ಜಿ. ಸಂತೋಷ್‌ಕುಮಾರ್‌ ನಿಂತಿದ್ದು ಆಗಾಗ ಕೆಲ ಸೂಚನೆ ನೀಡುವ ಮೂಲಕ ಮೆರವಣಿಗೆ ಮುಂದೆ ಸಾಗುವ ಉಸ್ತುವಾರಿ ವಹಿಸಿಕೊಂಡಿದ್ದರು.

ವಿನೋಬ ನಗರ 2ನೇ ಮುಖ್ಯ ರಸ್ತೆ, ಅರುಣಾ ಚಿತ್ರಮಂದಿರ ವೃತ್ತ, ರಾಂ ಆ್ಯಂಡ್‌ ಕೋ ವೃತ್ತ, ಚರ್ಚ್‌ ರಸ್ತೆ, ವಿನೋಬ ನಗರ 1ನೇ ಮುಖ್ಯ ರಸ್ತೆ, ಹಳೆ ಪಿಬಿ ರಸ್ತೆಯ ಮೂಲಕ ಬಾತಿ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವ ವೇಳೆಗೆ ರಾತ್ರಿಯಾಗಿತ್ತು.

ಸಾಕಷ್ಟು ಬಿಗಿ ಪೊಲೀಸ್‌, ಹೋಂ ಗಾರ್ಡ್‌ಭದ್ರತೆ ಒದಗಿಸಲಾಗಿತ್ತು. 68ಕ್ಕೂ ಹೆಚ್ಚು ಭಾಗದಲ್ಲಿ ಸಿಸಿ ಟಿವಿ ಕ್ಯಾಮೆರಾ, ಡ್ರೋಣ್‌ ಕ್ಯಾಮೆರಾ, ನೀರು, ತಂಪು ಪಾನೀಯ, ತಿಂಡಿ, ತುರ್ತು ಸೇವೆಗೆ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿತ್ತು. ಟ್ರ್ಯಾಕ್ಟರ್‌ ಹರಿದ ಪರಿಣಾಮ ಓರ್ವ ಪಿಎಸ್‌ಐ, ಪೇದೆಯೊಬ್ಬರ ಕಾಲಿಗೆ ಗಾಯವಾಗಿದ್ದು ಬಿಟ್ಟರೆ ಮೆರವಣಿಗೆ ಶಾಂತಿಯುತವಾಗಿ ನಡೆಯಿತು.

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.