ಹರ ಜಾತ್ರೆ ಜಾತ್ಯತೀತ ಸಂಭ್ರಮವಾಗಲಿ

14-15ರಂದು ಜಾತ್ರೆಪಕ್ಷಗಳಿಗೆ ಬೆಂಬಲ ಅನಿವಾರ್ಯವಾಗುವಂತೆ ಪೀಠ ಬೆಳೆಸೋಣ

Team Udayavani, Jan 6, 2020, 11:45 AM IST

6-Jnauary-3

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಜ.14 ಮತ್ತು 15 ರಂದು ನಡೆಯುವ ಹರ ಜಾತ್ರೆ ಜಾತ್ಯತೀತ ಜಾತ್ರೆ ಆಗಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಆಶಿಸಿದ್ದಾರೆ.

ಭಾನುವಾರ ದಾವಣಗೆರೆಯ ರೇಣುಕಾ ಮಂದಿರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವಿವಿಧ ಘಟಕಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರರು ಎಲ್ಲರೂ ಒಂದು ಕಡೆ ಸೇರಬೇಕು. ಸಂಕ್ರಾಂತಿಯನ್ನು ಜಾತ್ರೆಯಂತೆ ಆಚರಿಸಬೇಕು. ಆ ಹರ ಜಾತ್ರೆಯಲ್ಲಿ ಬರೀ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಮಾತ್ರವಲ್ಲ, ಎಲ್ಲ ಸಮಾಜದವರು ಭಾಗಿಯಾಗುವ ಮೂಲಕ ಜಾತ್ಯತೀತ ಜಾತ್ರೆ ಆಗಬೇಕು. ಹರ ಜಾತ್ರೆಯನ್ನು 5 ಅಂಶಗಳೊಂದಿಗೆ ಆಚರಿಸಲಾಗುವುದು ಎಂದು ತಿಳಿಸಿದರು.

ಎರಡು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ
ಬಾಂಧವರು ಎಲ್ಲರೂ ಭಾಗವಹಿಸಬೇಕು. ಎರಡು ದಿನ ಮನೆಗಳಲ್ಲಿ ಅಡುಗೆ ಮಾಡುವ ಪ್ರಮಯವೇ ಇಲ್ಲ. ಪೀಠದಲ್ಲೇ ತಿಂಡಿ, ಊಟ ಮಾಡಬೇಕು. ನಮ್ಮ ಸಮಾಜದವರು ಮಾತ್ರವಲ್ಲ. ಇತರ ಸಮಾಜದವರನ್ನೂ ಕರೆ ತರಬೇಕು. ಇನ್ನು ಮುಂದೆ ಪ್ರತಿ ಸಂಕ್ರಾಂತಿಯಂದು ಹರ ಜಾತ್ರೆ ನಡೆಯಲಿದೆ.

ಮುಂದೆ ಹರ ಜಾತ್ರೆ ಜಗತ್‌ ಜಾಗೃತಿ ಜಾತ್ರೆ ಆಗಲಿದೆ ಎಂದು ಶ್ರೀಗಳು ತಿಳಿಸಿದರು.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಈಗ ಜಾಗೃತ ಪೀಠವಾಗಿದೆ. ತನ್ನದೇ ಆದ ಇತಿಹಾಸ ಇದೆ. ಪೀಠವನ್ನು ಬೆಳೆಸುವ ಸವಾಲು ನಮ್ಮ ಮುಂದೆ ಇದೆ.  ಹಾಗಾಗಿ ಯಾವುದೇ ರಾಜಕೀಯ ಪಕ್ಷಗಳು ಒಳಗೊಂಡಂತೆ ಯಾರೂ ಸಹ ಹರಿಹರ ಪೀಠವನ್ನು ಹಗುರವಾಗಿ ಪರಿಗಣಿಸುವಂತೆಯೇ ಇಲ್ಲ. ಹರಿಹರ ಪೀಠ ಈಗ 1 ಕೋಟಿಯಷ್ಟು ಜನಸಂಖ್ಯೆಯ ಪೀಠವಾಗಿದೆ. ಎಲ್ಲಾ ಪಕ್ಷಗಳ ಮುಖಂಡರು ಬಂದು ಹೋಗುವಂತಾಗಿದೆ. ಹರಿಹರ ಪೀಠ ಒಂದೇ ಅಖಂಡ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠವಾಗಿದೆ. ರಾಜಕೀಯ ಪಕ್ಷಗಳಿಗೆ ಹರಿಹರ ಪೀಠದ ಬೆಂಬಲ ಅನಿವಾರ್ಯ ಆಗುವಂತೆ ನಾವೆಲ್ಲರೂ ಸಂಘಟಿತರಾಗಿ ಬೆಳೆಸಬೇಕು ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್‌ ಸಚಿವರಾಗಿದ್ದಾಗ ಹರಿಹರ ಪೀಠಕ್ಕೆ ಶುದ್ಧ ಸಿಹಿ ನೀರಿನ ಸೌಲಭ್ಯ
ಒದಗಿಸಬೇಕು ಎಂದು ಕೇಳಿದ್ದೆವು. ಅದರಂತೆ ಅವರು ಮಂಜೂರು ಮಾಡಿದ್ದರು. ಇನ್ನು ಕೆಲವೇ ದಿನಗಳಲ್ಲಿ ಪೀಠದಲ್ಲಿ ಸಿಹಿ ನೀರಿನ ಸೌಲಭ್ಯ ಇರಲಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ಪೀಠಕ್ಕೆ ಬಂದ ಸಂದರ್ಭದಲ್ಲಿ 4 ಕೋಟಿ ಅನುದಾನ ಮಂಜೂರು ಮಾಡಿದ್ದರು. ಈಗ ಪೀಠದಲ್ಲಿ ಸಿಮೆಂಟ್‌ ರಸ್ತೆ ಎಲ್ಲವೂ ಆಗುತ್ತಿವೆ. ಕೆಲವೇ ದಿನಗಳಲ್ಲಿ ಪೀಠದ ಚಿತ್ರಣವೇ ಬದಲಾಗಲಿದೆ. ಜನಪ್ರತಿನಿಧಿಗಳು ಅಧಿಕಾರಕ್ಕೆ ಬರುವಂತಹ ಅಧಿಕಾರ ನೀಡಿರುವ ಮಠ ಅಧಿಕಾರ ಪಡೆಯುವಂತಾಗಬೇಕು ಎಂದು ತಿಳಿಸಿದರು.

ಸಮಾಜದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಮಾತನಾಡಿ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ದೊರೆಯಬೇಕಾದ ಸೌಲಭ್ಯ, ತಮ್ಮದೇ ಗುರುಪೀಠ, ಗುರುಗಳನ್ನ ಹೊಂದಬೇಕು ಎನ್ನುವ ಕಾರಣಕ್ಕೆ 1994 ರಲ್ಲಿ ಹನುಮನಾಳ್‌ರವರು ಪ್ರಾರಂಭಿಸಿದ ಸಂಘಟನೆ ಈಗ ಬೆಳೆಯುತ್ತಿದೆ. ಈವರೆಗೆ 1036 ಸಾಮೂಹಿಕ ಮದುವೆ, 3,800 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗಿದೆ. ರಾಜ್ಯದ ಅತಿ ದೊಡ್ಡ ಸಮಾಜವಾಗಿದ್ದರೂ ಸಂಘಟನೆಯ ಕೊರತೆಯಿಂದ ಸಮಾಜ ಬೆಳೆದಿಲ್ಲ. ಸಮಾಜದ ಪ್ರತಿಯೊಬ್ಬರು ನನ್ನ ಸಮಾಜ, ನನ್ನ ಪೀಠ, ನಮ್ಮ ಗುರುಗಳು ಎಂಬ ಭಾವನೆಯಿಂದ ಸಮಾಜ ಬೆಳೆಸಿದಲ್ಲಿ ಮುಂದಿನ ಪೀಳಿಗೆಗೆ ಸಾಕಷ್ಟು ಅನುಕೂಲ ಆಗಲಿದೆ. ನಾವೆಲ್ಲರೂ ಸಂಘಟಿತರಾಗಿ ಹರಿಹರದ ಪೀಠವನ್ನು ರಾಜ್ಯದಲ್ಲಿ ಅತ್ಯುತ್ತಮ ಪೀಠವನ್ನಾಗಿ ಬೆಳೆಸೋಣ ಎಂದು ಮನವಿ ಮಾಡಿದರು.

ಸಮಾಜದ ಮುಖಂಡರಾದ ಬಾದಾಮಿ ಕರಿಬಸಪ್ಪ, ಎಂ. ದೊಡ್ಡಪ್ಪ, ಮಲ್ಲಿನಾಥ್‌,
ಮಂಜುನಾಥ್‌ ಪುರವಂತರ್‌, ಕಂಚೀಕೆರೆ ಸುಶೀಲಮ್ಮ, ರಶ್ಮಿ ಕುಂಕೋದ್‌, ಪಾರ್ವತಿ
ಕೊಟ್ರಗೌಡ, ಅಂದನೂರು ಮುರುಗೇಶ್‌, ಸತೀಶ್‌ ಮತ್ತೋಡು, ಮಹಾನಗರ ಪಾಲಿಕೆ ಸದಸ್ಯ ಕೆ.ಎಂ. ವೀರೇಶ್‌ ಇತರರು ಇದ್ದರು. ಪ್ರಧಾನ ಕಾರ್ಯದರ್ಶಿ ಎಸ್‌.ಸಿ. ಕಾಶೀನಾಥ್‌ ಸ್ವಾಗತಿಸಿದರು. ಉಚ್ಚಂಗಿದುರ್ಗದ ಬಸವರಾಜ್‌ ನಿರೂಪಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.