ಅಧಿಕೃತ ಮಾರಾಟಗಾರರಿಂದ ಬೀಜ ಖರೀದಿಸಿ


Team Udayavani, May 29, 2019, 4:42 PM IST

29-May-26

ದಾವಣಗೆರೆ: ಸಹಾಯಕ ಕೃಷಿ ಅಧಿಕಾರಿ ಕಚೇರಿ ಆವರಣದಲ್ಲಿ ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದರು.

ದಾವಣಗೆರೆ: ಅರಿವಿನ ಕೊರತೆ, ಅಲ್ಪ ಪ್ರಮಾಣ ಹಣದ ಉಳಿಸಲು ಇತ್ತೀಚಿನ ದಿನಗಳಲ್ಲಿ ಲೂಸ್‌ ಬೀಜಕ್ಕೆ ಮಾರು ಹೋಗುತ್ತಿದ್ದು, ಎಲ್ಲ ರೈತ ಬಾಂಧವರು ದಯವಿಟ್ಟು ಈ ತಪ್ಪು ಮಾಡದೇ, ಅಧಿಕೃತ ಮಾರಾಟಗಾರರಿಂದ ಬೀಜ ಖರೀದಿಸಿ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಮನವಿ ಮಾಡಿದ್ದಾರೆ.

ದಾವಣಗೆರೆ ತಾಲೂಕಿನ ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳಿಂದ ನಗರದ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಇಲಾಖೆಯು ಕೃಷಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪ್ರತಿ ಹಳ್ಳಿಗೂ ತಲುಪಿಸುವ ಯೋಜನೆ ರೂಪಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲೆಯು ರಾಜ್ಯದ ಮೆಕ್ಕೆಜೋಳ ಕಣಜವಾಗಿದ್ದು, ಈ ಬೆಳೆಗೆ ನೈಸರ್ಗಿಕವಾಗಿ ಫಾಲ್ ಆರ್ಮಿ ವರ್ಮ್ ಕೀಟದ ಬಾಧೆ ಒಂದು ಕಡೆಯಾದರೆ, ತಿಳಿವಳಿಕೆ ಕೊರತೆಯಿಂದ ರೈತರು ಕಳಪೆ ಬೀಜ ಖರೀದಿಸುತ್ತಾರೆ. ಈಗಾಗಲೇ ದಾವಣಗೆರೆ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವಾಡಿಕೆಯಂತೆ ಮಳೆ ಆಗುತ್ತಿದೆ ಎಂದರು.

ಎಲ್ಲ ರೈತರು ತಾಲೂಕಿನಲ್ಲಿ ಕೃಷಿ ಚಟುವಟಿಕೆ ಆರಂಭಿಸುತ್ತಿದ್ದಾರೆ. ಈ ಹಂತದಲ್ಲಿ ರೈತರು ಗಮನಿಸಬೇಕಾದ ಅಂಶವೇನೆಂದರೆ ತಾಲೂಕಿನಲ್ಲಿ ಸುಮಾರು 35,000 ಹೆಕ್ಟೇರ್‌ಗಳಲ್ಲಿ ಮೆಕ್ಕೆಜೋಳ ಬೆಳೆ ಹಾಗೂ 20,000 ಹೆಕ್ಟೇರ್‌ಗಳಲ್ಲಿ ಭತ್ತದ ಬೆಳೆ ಆವರಿಸಲಿದೆ. ಕಳೆದ ಎರಡು ವರ್ಷಗಳಿಂದ ಸೈನಿಕ ಹುಳು, ಫಾಲ್ ಆರ್ಮಿ ವರ್ಮ್ ಹುಳುವಿನ ಬಾಧೆಯು ಹೆಚ್ಚಾಗಿದೆ. ಈ ಕೀಟದ ನಡವಳಿಕೆ ಹಾಗೂ ಹತೋಟಿ ಕ್ರಮಗಳ ಬಗ್ಗೆ ಅರಿಯುವುದು ಮುಖ್ಯವಾಗಿದೆ ಎಂದು ಹೇಳಿದರು.

ಈ ಅಭಿಯಾನದಲ್ಲಿ ಪಾಲ್ಗೊಂಡ ಎಲ್ಲ ಅಧಿಕಾರಿಗಳು ಪ್ರತಿ ಗ್ರಾಮದಲ್ಲೂ ಎಲ್ಲ ರೈತರಿಗೂ ಇಲಾಖೆಗಳ ಸೌಲಭ್ಯಗಳೊಂದಿಗೆ ತಾಂತ್ರಿಕವಾಗಿ ಹೇಗೆ ಈ ಕೀಟ ನಿರ್ವಹಣೆ ಮಾಡಬೇಕು ಎಂಬುದರ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಚ್.ಕೆ. ರೇವಣಸಿದ್ದನಗೌಡ ಮಾತನಾಡಿ, ಈ ಅಭಿಯಾನ ಆರು ದಿನಗಳ ಕಾಲ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಚರಿಸಲಿದೆ. ಮೇ 29 ಮತ್ತು 30ರಂದು ಮಾಯಕೊಂಡ ಹಾಗೂ 31 ಮತ್ತು ಜೂನ್‌ 1ರಂದು ಆನಗೋಡು ಹೋಬಳಿಗಳಲ್ಲಿ ಸಂಚರಿಸಲಿದೆ ಎಂದರು.

ಈಗಾಗಲೇ ತಾಲೂಕು ಆಡಳಿತ ರೈತರ ಬೇಡಿಕೆಗೆ ಅನುಗುಣವಾಗಿ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳನ್ನು ಪೂರೈಸಲು ಸನ್ನದ್ಧವಾಗಿದೆ. ಈಗಾಗಲೇ ತಾಲೂಕಿನ ಎಲ್ಲ ಕೃಷಿ ಪರಿಕರ ಮಾರಾಟಗಾರರಿಗೂ ಈ ಕುರಿತು ತರಬೇತಿ ಸಹ ನೀಡಲಾಗಿದೆ ಎಂದು ತಿಳಿಸಿದರು.

ಕಳಪೆ ಗುಣಮಟ್ಟದ ಪರಿಕರಗಳನ್ನು ಮಾರಾಟ ಮಾಡಿದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಎಚ್ಚರಿಕೆ ಸಹ ನೀಡಲಾಗಿದೆ. ರೈತರು ಸಹ ಈ ನಿಟ್ಟಿನಲ್ಲಿ ಯಾವುದೇ ಕೃಷಿ ಪರಿಕರ ಮುಖ್ಯವಾಗಿ ಬಿತ್ತನೆ ಬೀಜಗಳನ್ನು ಅನಧಿಕೃತ ಅಥವಾ ಪರವಾನಗಿ ಇಲ್ಲದ ಮಾರಾಟಗಾರರಿಂದ ಪಡೆಯಬಾರದು ಎಂದು ಕೋರಿದರು.

ತಾಲೂಕಿನ ಯಾವುದೇ ಭಾಗದಲ್ಲಿ ಅಂತಹ ಕಾನೂನು ಬಾಹಿರ ಕೃಷಿ ಪರಿಕರಗಳ ಸಂಗ್ರಹ, ಮಾರಾಟ ಕಂಡು ಬಂದಲ್ಲಿ ಕೃಷಿ ಇಲಾಖೆಗೆ ಮಾಹಿತಿ ನೀಡಿ, ಸಹಕರಿಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕಸಬಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಾದ ವೆಂಕಟೇಶಮೂರ್ತಿ, ಲಾವಣ್ಯ, ತೇಜವರ್ಧನ್‌ ಮತ್ತು ಲೋಕೇಶಪ್ಪ, ರವಿಕುಮಾರ್‌ ಹಾಗೂ ಎಲ್ಲ ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಆತ್ಮ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.