ಅನ್ಯ ಭಾಷೆ ಕಲಿಯಿರಿ-ಕನ್ನಡ ಪ್ರೀತಿಸಿ

ಕನ್ನಡ ನಾಡಿನ ಸರ್ವಾಂಗೀಣ ಬೆಳವಣಿಗೆಗಾಗಿ ಎಲ್ಲಾ ಕನ್ನಡಿಗರು ಕಂಕಣಬದ್ಧರಾಗಿ: ಜಿಲ್ಲಾಧಿಕಾರಿ

Team Udayavani, Nov 2, 2019, 12:37 PM IST

November-5

ದಾವಣಗೆರೆ: ಕನ್ನಡಕ್ಕೆ ಬಂದೊದಗಿರುವ ಸಾಂಸ್ಕೃತಿಕ ದುಸ್ಥಿತಿಯನ್ನು ಪ್ರತಿಯೊಬ್ಬ ಕನ್ನಡಿಗರು ಬದಲಿಸಬೇಕಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಆಶಿಸಿದ್ದಾರೆ.

ಶುಕ್ರವಾರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 64ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಲಿಖೀತ ಸಂದೇಶ ನೀಡಿದ ಅವರು, ಆಂಗ್ಲಭಾಷಾ ವ್ಯಾಮೋಹಕ್ಕೆ ಸಿಲುಕಿ ಕನ್ನಡ ಸಂಸ್ಕೃತಿಯನ್ನು ನಾಶಗೊಳಿಸಿಕೊಳ್ಳುತ್ತಿದ್ದೇವೆ. ಆಧುನಿಕ ಯುಗದಲ್ಲಿ ಅನ್ಯ ಭಾಷೆಗಳ ಕಲಿಕೆ ಅನಿವಾರ್ಯ. ಅನ್ಯಭಾಷೆಗಳ ಕಲಿಯುವ ಜೊತೆಗೆ ಕನ್ನಡವನ್ನು ಹೆಚ್ಚಾಗಿ ಬಳಸುವ, ಪ್ರೀತಿಸುವ ಮೂಲಕ ಉಳಿಸಿ, ಬೆಳೆಸುವಂತಾಗಬೇಕು ಎಂದರು.

ಕನ್ನಡ ಪ್ರತಿಯೊಬ್ಬ ಕನ್ನಡಿಗರ ಬದುಕು, ಭಾವನೆಯಲ್ಲಿ ಬೆರೆತಿರುವ, ಉಸಿರಿನಲ್ಲಿ ಉಸಿರಾಗಿ, ಜೀವದ ಜೀವವಾಗಿರುವ ಭಾಷೆ. ಸಾಹಿತ್ಯದ ಅಭಿವೃದ್ಧಿ ಹಾಗೂ ಕನ್ನಡ ನಾಡಿನ ಸರ್ವಾಂಗೀಣ ಬೆಳವಣಿಗೆಗಾಗಿ ಎಲ್ಲಾ ಕನ್ನಡಿಗರು ಕಂಕಣಬದ್ಧರಾಗಬೇಕು ಎಂದು ತಿಳಿಸಿದರು.

ಕನ್ನಡಕ್ಕೆ ಎರಡು ಸಾವಿರ ವರ್ಷದ ಸುದೀರ್ಘ‌ ಇಹಾಸ ಇದೆ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದಿರುವ ಹೆಮ್ಮೆಯ ಭಾಷೆ. ಅಂತಹ ಕನ್ನಡ ಅಳಿಯುತ್ತಿದೆ ಎಂಬ ನೋವು, ಆತಂಕ ಕಾಡುತ್ತಿದೆ. ಕನ್ನಡ ಭಾಷೆ ಬೆಳೆಸಬೇಕಾದರೆ ಅದರ ಮಹತ್ವವನ್ನು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕು. ಪುಸ್ತಕ ಓದುವ, ಚರ್ಚಿಸುವ, ವಿಮರ್ಶಿಸುವ ಕೆಲಸಕ್ಕೆ ತೊಡಗಿಸಬೇಕು ಎಂದು ತಿಳಿಸಿದರು.

ದೈನಂದಿನ ಕೆಲಸ- ಕಾರ್ಯದಲ್ಲಿ, ಸಭೆ, ಸಮಾರಂಭ, ಗೆಳೆಯರೊಡನೆ ಕನ್ನಡದಲ್ಲಿ ಮಾತನಾಡುವುದರಿಂದ ಆಗುವ ಲಾಭಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಕನ್ನಡ ಭಾಷೆ, ಪುಸ್ತಕ, ಕವಿಗಳು, ಲೇಖಕರನ್ನು ಗೌರವಿಸಬೇಕು ಎಂದು ತಿಳಿಸಿದರು.

ಮಕ್ಕಳ ಪ್ರತಿಭೆ ಅರಳುವಿಕೆಯಲ್ಲಿ, ಬೌದ್ಧಿಕ ಬೆಳವಣಿಗೆಯಲ್ಲಿ, ವ್ಯಕ್ತಿತ್ವ ವಿಕಸನದಲ್ಲಿ ಭಾಷೆಯಿಂದ ದೊರೆಯುವ ಅನಂದದ ಅನುಭವಕ್ಕೆ ಅವಕಾಶ ಕಲ್ಪಿಸಬೇಕು. ಕನ್ನಡಿಗರು ಫಲವತ್ತಾದ ಕನ್ನಡ ನೆಲದಲ್ಲಿ ಆಳಕ್ಕೆ ಬೇರೂರಿ, ಹೆಮ್ಮರವಾಗಿ ಬೆಳೆಯಬೇಕು. ನಮ್ಮ ತಾಯ್ನುಡಿಯ ಬಗ್ಗೆ ನಿರಭಿಮಾನ, ದುರಭಿಮಾನ ಹೊಂದದೆ ಸದಭಿಮಾನ ರೂಢಿಸಿಕೊಂಡಾಗ ಮಾತ್ರ ರಾಜ್ಯೋತ್ಸವದ ಆಚರಣೆ ಅರ್ಥಪೂರ್ಣ ಎನಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆ ಬೇಕು. ಆದರೆ, ನಮ್ಮ ಭಾಷೆಯ ಬದಲಿಗೆ ಅಲ್ಲ. ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರವೇ ಉದ್ಯೋಗ ದೊರೆಯುತ್ತದೆ ಎಂಬುದು ಭಾವನೆಯಲ್ಲಿ ಬೆರೆತಿದೆ. ಅದು ಸರಿಯಲ್ಲ. ಕನ್ನಡ ಮಾಧ್ಯಮದಲ್ಲೇ ಓದಿದವರು ಉನ್ನತ ಸ್ಥಾನಮಾನ ಹೊಂದಿರುವುದು ನಮ್ಮ ಕಣ್ಮುಂದೆ ಇದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಬಹುಸಂಖ್ಯಾತ ಜನರ ಭಾಷೆ ಕನ್ನಡವೇ ಆಗಿದ್ದರೂ, ಅದು ರಾಜ್ಯ ಸರ್ಕಾರದ ಅಧಿಕೃತ ಭಾಷೆಯಾಗಿದೆಯಷ್ಟೆ. ಉದ್ಯೋಗವನ್ನು ದೃಷ್ಟಿಯಲ್ಲಿರಿಸಿಕೊಂಡು ಪೋಷಕರು ಇಂಗ್ಲಿಷ್‌ ಮಾಧ್ಯಮದ ಶಿಕ್ಷಣಕ್ಕೆ ಶರಣಾಗುತ್ತಿರುವ ಪರಿಣಾಮವಾಗಿ ನಾಡಿನೆಲ್ಲೆಡೆ ಸಾವಿರಾರು ಕನ್ನಡ ಶಾಲೆಗಳು ಮುಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಕನ್ನಡಿಗರು ಅತ್ಯಂತ ಉದಾರ ಮನಸ್ಸಿನವರು ಮತ್ತು ವಿಶಾಲ ಹೃದಯವಂತರಾಗಿದ್ದು ಎಲ್ಲರನ್ನೂ ಹಾಗೂ ಎಲ್ಲವನ್ನೂ ಸ್ವೀಕರಿಸುವ ಮನೋಭಾವ ಹೊಂದಿದ್ದೇವೆ. ಭಾಷಾಭಿಮಾನ ಕೊರತೆಯೊಂದಿಗೆ ಭಾಷಾ ಅಭಿಮಾನವೂ ನಮ್ಮಲ್ಲಿಲ್ಲ. ಅನ್ಯ ಭಾಷಿಕರ ಆಕ್ರಮಣವಿಲ್ಲದಿದ್ದರೂ ನಾವೇ ಅವರನ್ನು ಸಂತುಷ್ಟಗೊಳಿಸುತ್ತಿದ್ದೇವೆ. ಈಗಾಗಲೇ ನಾವು ಬಳಸುವ ಕನ್ನಡ ಭಾಷೆಯಲ್ಲಿ ಶೇ.60 ರಷ್ಟು ಆಂಗ್ಲಭಾಷಾ ಪದಗಳೇ ಸೇರಿರುವುದು ದುರಂತ ಎಂದು ಬಣ್ಣಿಸಿದರು.

ಅನ್ಯಭಾಷಿಕರಿಗಿಂತ ಕನ್ನಡಿಗರ ಕೌಶಲ್ಯ ಹೆಚ್ಚಿದ್ದರೂ ಅವರ ಕಾರ್ಯವೇಗಕ್ಕೆ ಹೆಚ್ಚಿನ ಒತ್ತು ನೀಡಿ ಅನ್ಯಭಾಷಿಕರಿಗೆ ನಮ್ಮ ನಾಡಿನಲ್ಲಿ ಹೆಚ್ಚಿನ ಉದ್ಯೋಗಾವಕಾಶ ನೀಡುತ್ತಿರುವುದು ನಿಲ್ಲಬೇಕಿದೆ ಎಂದರು.

ಬ್ರಿಟಿಷರ ಅಧಿಕಾರವಧಿಯಲ್ಲಿ ಹರಿದು ಹಂಚಿ ಹೋಗಿದ್ದ ಕರ್ನಾಟಕದ ಏಕೀಕರಣ ಕನಸನ್ನು ಡೆಪ್ಯೂಟಿ ಚನ್ನಬಸಪ್ಪ ಕಂಡಿದ್ದರು. 1856ರಲ್ಲಿ ಚಾಲನೆ ನೀಡಿದ ಬೀಜ ರೂಪದ ಚಳವಳಿ 100 ವರ್ಷಗಳವರೆಗೆ ನಿರಂತರ ಹೋರಾಟ ನಡೆಸಿದ ಫಲ ಸ್ವರೂಪ 1956ರ ನ. 1 ರಂದು ವಿಶಾಲ ಮೈಸೂರು ರಾಜ್ಯವಾಯಿತು. ಅದಕ್ಕಾಗಿ ಕನ್ನಡ ಕುಲ ಪುರೋಹಿತ ಆಲೂರು ವೆಂಕಟರಾಯರು, ರಾ.ಹ. ದೇಶಪಾಂಡೆ, ರೊದ್ದಂ ಶ್ರೀನಿವಾಸ ರಾವ್‌, ಬಿ.ಎಂ. ಶ್ರೀಕಂಠಯ್ಯ, ಆ.ನ. ಕೃಷ್ಣರಾಯ, ಹಡೇìಕರ್‌ ಮಂಜಪ್ಪ, ಬೆನಗಲ್‌ ಶಿವರಾಮ್‌, ಬೆನಗಲ್‌ ರಾಮರಾವ್‌, ಹುಯಿಲಗೋಳ ನಾರಾಯಣರಾವ್‌, ಕುವೆಂಪು, ಎಸ್‌. ನಿಜಲಿಂಗಪ್ಪ, ಪಾಟೀಲ್‌ ಪುಟ್ಟಪ್ಪ ಇತರರ ಹೋರಾಟ ಅವಿಸ್ಮರಣೀಯ ಎಂದು ಸ್ಮರಿಸಿದರು.

ಏಕೀಕರಣ ಚಳವಳಿ ಸಮಯದಲ್ಲಿ ಕನ್ನಡ ಹೋರಾಟಗಾರ ಹಡೇìಕರ್‌ ಮಂಜಪ್ಪ ದಾವಣಗೆರೆಗೆ ಆಗಮಿಸಿದ್ದರು. ದಾವಣಗೆರೆಯವರೇ ಆದ ಎ.ಎಚ್‌.
ಶಿವಾನಂದಸ್ವಾಮಿ ಏಕೀಕರಣ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅನೇಕರ ಅಹರ್ನಿಶಿ ಹೋರಾಟದ ಫಲವಾಗಿ ಉದಯವಾಗಿರುವ ಕನ್ನಡನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಜೊತೆಗೆ ನಾಡು, ನುಡಿ, ಸಂಸ್ಕೃತಿಯನ್ನ ಅಖಂಡವಾಗಿಸೋಣ ಎಂದು ಮನವಿ ಮಾಡಿದರು. ತರಳಬಾಳು ಶಾಲೆ, ಗೋಲ್ಡನ್‌ ಪಬ್ಲಿಕ್‌ ಸ್ಕೂಲ್‌ ಹಾಗೂ ಸೊಪ್ರೊಸೈನ್‌ ಕಾನ್ವೆಂಟ್‌ ಮಕ್ಕಳು ಚಿತ್ತಾಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತ ಪಡಿಸಿದರು.

ವೇದಿಕೆ ಕಾರ್ಯಕ್ರಮದ ಮುನ್ನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಶ್ರೀ ಭುವನೇಶ್ವರಿ ಪ್ರತಿಮೆ ಮೆರವಣಿಗೆ ಕಲಾ ತಂಡಗಳೊಂದಿಗೆ ಜರುಗಿತು. ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಶಿಸ್ತುಬದ್ಧ ಪಥಸಂಚಲನಕ್ಕೆ ಮೀಸಲು ಸಶಸ್ತ್ರ ಪಡೆಯ ಮುಖ್ಯ ಸಮಾದೇಷ್ಟ ಎಸ್‌.ಎನ್‌.ಕಿರಣ್‌ ಕುಮಾರ್‌ ಕನ್ನಡಲ್ಲೇ ಆಜ್ಞೆ ನೀಡುವ ಮೂಲಕ ಗಮನ ಸೆಳೆದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.