29ಕ್ಕೆ ವಿಶ್ವ ಮಾನವ ದಿನಾಚರಣೆ
ಕುವೆಂಪು ವೈಜ್ಞಾನಿಕ ಚಿಂತನೆಗಳು ಎಲ್ಲರನ್ನೂ ತಲುಪಲಿ: ಮಲ್ಲೇಶ್
Team Udayavani, Dec 22, 2019, 11:41 AM IST
ದಾವಣಗೆರೆ: ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನದ ಅಂಗವಾಗಿ ಡಿ.29ರಂದು ವಿಶ್ವ ಮಾನವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ತೀರ್ಮಾನಿದೆ. ಶನಿವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದಲ್ಲಿ ವಿಶ್ವ ಮಾನವ ದಿನಾಚರಣೆ ಸಂಬಂಧ ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ನಗರದ ಕುವೆಂಪು ಕನ್ನಡ ಭವನದಲ್ಲಿ ಡಿ.29ರಂದು ವಿಶ್ವ ಮಾನವ ದಿನ ಅರ್ಥಪೂರ್ಣವಾಗಿ ಆಚರಿಸಲು ಸಂಘ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು, ಸಾಹಿತಿಗಳು, ಕನ್ನಡಾಭಿಮಾನಿಗಳು ಸಹಕಾರ ನೀಡಬೇಕೆಂದು ಸಭೆ ಆರಂಭದಲ್ಲಿ ಜಿಲ್ಲಾಧಿಕಾರಿ ಮನವಿ ಮಾಡಿದರು.
ಪತ್ರಕರ್ತ ಬಿ.ಎನ್.ಮಲ್ಲೇಶ್ ಮಾತನಾಡಿ, ವಿಶ್ವ ಮಾನವ ದಿನಾಚರಣೆ ಕೇವಲ ಉಪನ್ಯಾಸಕ್ಕೆ ಸೀಮಿತಗೊಳಿಸದೇ ಕುವೆಂಪು ರಚಿಸಿರುವ ಬರಹಗಳು, ಕಾವ್ಯ, ಸಮಾಜದ ಎಲ್ಲರನ್ನೂ ಎಚ್ಚರಿಸುವಂತಹ ಅವರ ವೈಜ್ಞಾನಿಕ ಚಿಂತನೆಗಳು ಎಲ್ಲರನ್ನೂ ತಲುಪುವ ಕಾರ್ಯವಾಗಲಿ ಎಂದು ಹೇಳಿದರು. ವಿಶ್ವ ಕರ್ನಾಟಕ ವೇದಿಕೆ ರಾಜ್ಯಾಧ್ಯಕ್ಷ ಕೆ.ಜಿ. ಯಲ್ಲಪ್ಪ ಮಾತನಾಡಿ, ರಾಷ್ಟ್ರಕವಿ ಕುವೆಂಪುರವರು ಸಮಾಜದಲ್ಲಿ ಜನತಾಪ್ರಜ್ಞೆ, ವಿಶ್ವ ಮಾನವ ಸಂದೇಶ ಹಾಗೂ ವಿಚಾರ ಕ್ರಾಂತಿಗೆ ಆಹ್ವಾನ ನೀಡಿದಂತಹ ಮಹಾನ್ ಪುರುಷ. ಅವರ ಕೃತಿಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಮೂಲಕ ಅವರಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಬೇಕು ಎಂದು ಸಲಹೆ ನೀಡಿದರು.
ನಂತರ ಜಿಲ್ಲಾಧಿಕಾರಿ ಬೀಳಗಿ ಮಾತನಾಡಿ, ಡಿ.29ರ ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಮನುಜಕುಲಕ್ಕೆ ಕುವೆಂಪು ಸಂದೇಶ ಅಥವಾ ಕುವೆಂಪು ಜೀವನ ದರ್ಶನ ವಿಷಯ ಕುರಿತು ಉಪನ್ಯಾಸ ನೀಡಲು ಜಾನಪದ ವಿದ್ವಾಂಸ ಹಾಗೂ ನಿವೃತ್ತ ಪ್ರಾಚಾರ್ಯ ಡಾ| ಎಂ.ಜಿ ಈಶ್ವರಪ್ಪರನ್ನು ಆಹ್ವಾನಿಸಲಾಗುವುದು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಹಂಚುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಅಗತ್ಯ ಪ್ರಚಾರದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯವರು ಕ್ರಮ ಕೈಗೊಳ್ಳಲು ಸೂಚಿಸಿದರು.
ವಿಶ್ವಮಾನವ ದಿನಾಚರಣೆಯ ಅಂಗವಾಗಿ ಪ್ರೌಢಶಾಲೆ ಮಕ್ಕಳಿಗೆ ಮನುಜ ಮತ ವಿಶ್ವಪಥ ಮತ್ತು ಪಿ.ಯು ವಿದ್ಯಾರ್ಥಿಗಳಿಗೆ ಕುವೆಂಪು ಸಾಹಿತ್ಯದಲ್ಲಿ ವೈಚಾರಿಕ ಪ್ರಜ್ಞೆ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಶ್ರೀರಾಮಯಾಣ ದರ್ಶನಂ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುವುದು ಎಂದು ತಿಳಿಸಿದರು.
ವಿಶ್ವ ಮಾನವ ದಿನಾಚರಣೆಯಂದು ಕುವೆಂಪುರವರು ರಚಿಸಿರುವ ವಿಚಾರ ಕ್ರಾಂತಿಗೆ ಆಹ್ವಾನ ಎಂಬ ಪುಸ್ತಕದ ಸುಮಾರು 5,000 ಪ್ರತಿಗಳನ್ನು ಉಚಿತವಾಗಿ ವಿತರಿಸುವ ಉದ್ದೇಶ ಇದೆ. ಅಂದು ಶಾಲಾ ಮಕ್ಕಳಿಂದ ಕುವೆಂಪು ರಚಿತ ಕವಿತೆಗಳ ಗಾಯನ ಮತ್ತು ಚಿರಂತನ ಸಂಸ್ಥೆಯಿಂದ ಕುವೆಂಪು ಗೀತೆಗಳ ನೃತ್ಯ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮುದ್ದುಕಣ್ಣನವರ, ಬಯಲಾಟ ಅಕಾಡೆಮಿ ಸದಸ್ಯ ಎನ್.ಎಸ್ ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಶ್ರೀನಿವಾಸ್, ಜಿಪಂ ಯೋಜನಾ ನಿರ್ದೇಶಕ ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ರವೀಂದ್ರ ಡಿ, ಮುಖಂಡರಾದ ಹೆಗ್ಗೆರೆ ರಂಗಪ್ಪ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.