ಎಲ್ಲರಿಗೂ ಕಾನೂನು ಅರಿವು ಅಗತ್ಯ
ಹಕ್ಕು ಚಲಾವಣೆಯಂತೆ ಕರ್ತವ್ಯಗಳನ್ನೂ ನಿರ್ವಹಿಸಿ•ವಿಶೇಷ ಉಪನ್ಯಾಸ
Team Udayavani, Jul 10, 2019, 10:20 AM IST
ದಾವಣಗೆರೆ: ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಪ್ರಭು ಎನ್. ಬಡಿಗೇರ್ ಮಾತನಾಡಿದರು.
ದಾವಣಗೆರೆ: ವಿದ್ಯಾರ್ಥಿಗಳು ಜೀವನವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಕಾಯ್ದೆ, ಕಾನೂನುಗಳ ಅರಿವು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು ಎನ್. ಬಡಿಗೇರ್ ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ, ಆರಕ್ಷಕ, ಸರ್ಕಾರಿ ಅಭಿಯೋಜಕ ಇಲಾಖೆ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಶಾಮನೂರಿನ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಸಮಾಜದಲ್ಲಿ ಕಾನೂನಿನ ಅರಿವು ಕೊರತೆಯಿಂದ ಸಮಾಜಘಾತುಕ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು.
ದೇಶದ್ಯಾಂತ ಜಿಲ್ಲಾ ಮುಖ್ಯ ನ್ಯಾಯಾಧೀಶರುಗಳ ನೇತೃತ್ವದಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಏರ್ಪಡಿಸಿ ವಿದ್ಯಾರ್ಥಿ ಸಮುದಾಯ, ಸಾರ್ವಜನಿಕರಲ್ಲಿ ಕಾನೂನಿನ ಅರಿವು ಮೂಡಿಸಲಾಗುತ್ತಿದೆ. ಕಾನೂನು ಅರಿವು ಕಾರ್ಯಕ್ರಮಗಳ ಮೂಲಕ ಸಮಾಜಘಾತುಕ ಕಾರ್ಯಗಳನ್ನು ನಿಯಂತ್ರಿಸಬಹುದು ಎಂದು ಅಭಿಪ್ರಾಯಪಟ್ಟರು.
ಅನ್ಯಾಯಕ್ಕೆ ಒಳಗಾದವರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮದ ಮೂಲಕ ಸಹಾಯ ಒದಗಿಸಲಾಗುತ್ತಿದೆ. ಮಕ್ಕಳು ಕಾರ್ಯಕ್ರಮದ ಮೂಲಕ ಕಾನೂನುಗಳನ್ನು ಅರಿತು ಕುಟುಂಬ ಮತ್ತು ನೆರೆಹೊರೆಯವರಲ್ಲಿ ಕಾನೂನಿನ ಅರಿವು ಮೂಡುವಂತೆ ಮಾಡಬೇಕು .ಆಗ ಇಂತಹ ಕಾರ್ಯಕ್ರಮಗಳು ಸಾರ್ಥಕವಾಗಲಿವೆ ಎಂದರು.
ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಮಂಜಪ್ಪ ಕಾಕನೂರು ಮಾತನಾಡಿ, ಮೂಲಭೂತ ಹಕ್ಕು ಮತ್ತು ಮೂಲಭೂತ ಕರ್ತವ್ಯಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಸಮಾಜದ ನೀತಿ ನಿಯಮಗಳನ್ನು ಆಧರಿಸಿ ರಚಿಸಲ್ಪಟ್ಟ ಕಾನೂನುಗಳನ್ನು ದೇಶದ ಪ್ರತಿಯೊಬ್ಬರೂ ಅವಶ್ಯಕವಾಗಿ ತಿಳಿಯಬೇಕು ಎಂದು ತಿಳಿಸಿದರು.
ಹಿಂದಿನ ಕಾಲಕ್ಕೆ ಹೋಲಿಸಿದರೆ ಇಂದಿನ ಸರ್ಕಾರಿ ಶಾಲೆಗಳು ಉತ್ತಮವಾಗಿವೆ. ಸಮಾಜದಲ್ಲಿ ಇಂದು ಬಹುತೇಕರು ಸರ್ಕಾರಿ ಶಾಲೆಗಳಲ್ಲಿ ಓದಿ ಶ್ರೇಷ್ಠ ವಿಜ್ಞಾನಿ, ಆರ್ಥಿಕ ಚಿಂತಕರು, ಇಂಜಿನಿಯರ್, ರಾಜಕಾರಣಿಗಳು, ನ್ಯಾಯಾಧೀಶರಗಳು ಸೇರಿದಂತೆ ಉನ್ನತ ಅಧಿಕಾರಿಗಳ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಆದರೆ, ಖಾಸಗಿ ಶಾಲೆಗಳಲ್ಲಿ ಶಿಕ್ಷಕರಿಗೆ ಅಗತ್ಯವಾಗಿ ಬೇಕಾದ ಅರ್ಹತೆಗಳಿಲ್ಲದಿದ್ದರೂ ಇಂದು ಶಿಕ್ಷಕರಾಗಿದ್ದಾರೆ. ಅವರುಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆಗಳ ಶಿಕ್ಷಕರೇ ಎಷ್ಟೋ ಉತ್ತಮ ಎಂದು ತಿಳಿಸಿದರು.
ಮಕ್ಕಳು ಅವಶ್ಯವಾಗಿ ತಿಳಿಯಬೇಕಾದ ಸಂವಿಧಾನದ 14ನೇ ವಿಧಿಯಿಂದ 32ನೇ ವಿಧಿಯವರೆಗೆ ಇರುವ ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳ ಕುರಿತು ಅರಿವು ಮೂಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ದೇವೇಂದ್ರಪ್ಪ ಮಾತನಾಡಿ, ಮಕ್ಕಳಿಗೆ ಇಂದು ಮಾರ್ಗದರ್ಶನ ನೀಡಲು ಉತ್ತಮ ಶಿಕ್ಷಕರಿದ್ದರೂ ಮಕ್ಕಳು ಒಳ್ಳೆಯ ಮಾರ್ಗಗಳನ್ನು ಅನುಸರಿಸುತ್ತಿಲ್ಲ. ಮಕ್ಕಳಿಗೆ ಕಾನೂನಿನ ಅರಿವು ಮೂಡಿಸಿದರೆ ಅವರು ಸರಿದಾರಿಯಲ್ಲಿ ನಡೆಯಲು ಸಹಕಾರಿಯಾಗಲಿದೆೆ ಎಂದರು.
ನ್ಯಾಯವಾದಿ ಬಿ.ವಿ.ಮಂಜುಳಾ, ಭ್ರಷ್ಟಾಚಾರ ಪ್ರತಿಬಂಧಕ ಅಧಿನಿಯಮ ಕಾಯ್ದೆಯ ನೀತಿ ನಿಯಮಗಳನ್ನು ತಿಳಿಸಿಕೊಟ್ಟರು. ಹಿರಿಯ ವಕೀಲ ಆಂಜನೇಯ ಗುರೂಜಿ, ಶಿಕ್ಷಕ ವೀರಣ್ಣ, ಗ್ರಾಮಲೆಕ್ಕಾಧಿಕಾರಿ ವಿಶ್ವನಾಥ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.