ಅಚ್ಚರಿ ಫಲಿತಾಂಶದ ಕ್ಷೇತ್ರದಲ್ಲಿ ಯಾರಿಗೆ ಲೀಡ್‌?

•ಸರಿ ಸುಮಾರು ಕಳೆದ ವಿಧಾನಸಭೆ ಚುನಾವಣೆಯಷ್ಟೇ ಮತದಾನ ಪ್ರಮಾಣ•ಬಿಜೆಪಿ ಶಾಸಕ ರವೀಂದ್ರನಾಥ್‌ ಕ್ಷೇತ್ರ

Team Udayavani, Apr 27, 2019, 11:03 AM IST

27-April-6

ದಾವಣಗೆರೆ:  ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಮತಕ್ಷೇತ್ರ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 2014 ಮತ್ತು ಈಗಷ್ಟೇ ಮುಗಿದಿರುವ 2019ರ ಚುನಾವಣೆಯಲ್ಲಿನ ಮತದಾನ ಪ್ರಮಾಣದಲ್ಲಿ ಭಾರೀ ವ್ಯತ್ಯಾಸವೇನು ಇಲ್ಲ.

2008ರಲ್ಲಿ ಅಸ್ತಿತ್ವಕ್ಕೆ ಬಂದಿರುವ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 1,21,501 ಪುರುಷರು ಮತ್ತು 1,22,041 ಮಹಿಳೆಯರು ಹಾಗೂ 32 ಇತರೆ ಒಳಗೊಂಡಂತೆ 2,43,574 ಮತದಾರರು ಇದ್ದಾರೆ.

ಕಳೆದ ಏ.23 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ. 65.71 ಮತದಾನ ಆಗಿದೆ. 81,420 ಪುರುಷರು, 78,644 ಮಹಿಳಾ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಒಟ್ಟಾರೆ ಕ್ಷೇತ್ರದ 2,43,574 ಮತದಾರರ ಪೈಕಿ 1,60,064 ಮಂದಿ ತಮ್ಮ ಸಂವಿಧಾನಿಕ ಹಕ್ಕು ಚಲಾಯಿಸಿದ್ದಾರೆ.

2014ರಲ್ಲಿ ನಡೆದ ಚುನಾವಣೆಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಶೇ. 65.13 ಮತದಾನ ಆಗಿತ್ತು. 2,26,924 ಮತದಾರರಲ್ಲಿ 1,48,025 ಮತದಾರರರು ಮತದಾನ ಮಾಡಿದ್ದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಸ್‌.ಎ. ರವೀಂದ್ರನಾಥ್‌ 81,434 ಮತ ಗಳಿಸಿದ್ದರು. ಕ್ಷೇತ್ರದ ಶಾಸಕರು ಆಗಿದ್ದಂತಹ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ 58,427 ಮತ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದರು.

ಗಮನಾರ್ಹ ವಿಷಯವೆಂದರೆ ಬಹಳ ವರ್ಷಗಳ ನಂತರ 2013ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಬಿಜೆಪಿಯ ಎಸ್‌.ಎ. ರವೀಂದ್ರನಾಥ್‌ ವಿರುದ್ಧ 53 ಸಾವಿರಕ್ಕೂ ಅಧಿಕ ಮತಗಳಲ್ಲಿ ಗೆಲುವು ಸಾಧಿಸಿದ್ದರು. ಒಂದು ವರ್ಷದ ಅಂತರದಲ್ಲಿ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಸ್ವ ಕ್ಷೇತ್ರದಲ್ಲಿ ಭಾರೀ ಹಿನ್ನೆಡೆ ಕಂಡಿದ್ದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಮತ್ತು ಬಿಜೆಪಿಯ ಎಸ್‌.ಎ. ರವೀಂದ್ರನಾಥ್‌ ನಡೆದ ರೋಚಕ, ಭಾರೀ ಪೈಪೋಟಿಯಲ್ಲಿ ರವೀಂದ್ರನಾಥ್‌ ಅಚ್ಚರಿಯ ಗೆಲುವು ಸಾಧಿಸುವ ಮೂಲಕ ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳುವಂತೆ ಮಾಡಿದರು. ಆ ಫಲಿತಾಂಶ ಲೋಕಸಭಾ ಚುನಾವಣೆ ಮೇಲೂ ಪರಿಣಾಮ ಉಂಟು ಮಾಡುವ ಲೆಕ್ಕಾಚಾರ ಇದೆ.

ಕಳೆದ ಬಾರಿ ಚುನಾವಣೆಗಿಂತಲೂ ಈ ಬಾರಿ ಚುನಾವಣೆಯಲ್ಲಿ ಮತದಾನ ಮಾಡಿದವರ ಶೇಕಡಾವಾರು ಪ್ರಮಾಣದಲ್ಲಿ ಶೇ. 0.58 ಮಾತ್ರ ವ್ಯತ್ಯಾಸ. ಶೇಕಡಾವಾರುಗಿಂತಲೂ ಮತದಾರರ ಲೆಕ್ಕ ಹಾಕಿದರೆ ಈ ಬಾರಿ 11,979 ಹೆಚ್ಚು ಮತದಾರರು ತಮ್ಮ ಪರಮೋಚ್ಚ ಅಧಿಕಾರ ಚಲಾಯಿಸಿದ್ದಾರೆ. 11,979 ಮತಗಳು ಫಲಿತಾಂಶದ ಲೆಕ್ಕಾಚಾರವನ್ನೇ ಬುಡಮೇಲು ಮಾಡಬಹುದು ಎಂಬುದು ಗಮನಾರ್ಹ!.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಪ್ರಮಾಣದಲ್ಲಿ ಕಳೆದ ಬಾರಿಯ ಚುನಾವಣೆಗಿಂತ ಅಂತಹ ಭಾರೀ ವ್ಯತ್ಯಾಸ ಇಲ್ಲ. ಹಾಗಾಗಿಯೇ ಇದೇ ಪಕ್ಷ ಲೀಡ್‌ ಪಡೆಯುತ್ತದೆ ಎಂದು ಅಂದಾಜಿಸುವುದು ಸುಲಭ ಅಲ್ಲ.

2018ರ ಚುನಾವಣೆಯಂತೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳ ಜೊತೆಗೆ ಹೊಸದಾಗಿ ಸೇರ್ಪಡೆಯಾಗಿರುವ ಯುವ ಮತದಾರರ ಒಲವಿನ ಬಲದ ಆಧಾರದಲ್ಲಿ ಬಿಜೆಪಿಗೆ ಲೀಡ್‌… ದೊರೆಯಲಿದೆ ಎಂಬುದು ಕಮಲ ಪಾಳೆಯದ ಲೆಕ್ಕಾಚಾರ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಕಣದಲ್ಲಿರುವ ಕಾರಣಕ್ಕೆ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳ ಜೊತೆಗೆ ಜೆಡಿಎಸ್‌ ಮತಗಳು ಸೇರುವುದರಿಂದ ಮೈತ್ರಿ ಅಭ್ಯರ್ಥಿಗೆ ಲೀಡ್‌ ದೊರೆಯಲಿದೆ ಎಂಬುದು ಮೈತ್ರಿ ಪಾಳೆಯದ ಅಂದಾಜು. ಬಿಜೆಪಿ ಮತ್ತು ಮೈತ್ರಿ ಅಭ್ಯರ್ಥಿಗಳ ಪರ ಏನೇ ಲೆಕ್ಕಾಚಾರ ಇದ್ದರೂ ಅದು ಪಕ್ಕಾ ಆಗುವುದು ಮೇ 23 ರಂದು ಮತ ಎಣಿಕೆಯ ನಂತರವೇ. ಅಂತಹ ಫೈಟ್… ಇಲ್ಲ ಎಂಬ ಕಾರಣಕ್ಕಾಗಿಯೇ ಏನೋ ಬೆಟ್ಟಿಂಗ್‌ ಸದ್ದು ಇಲ್ಲವೇ ಇಲ್ಲ ಎನ್ನುವಂತಿದೆ.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.