ಜಿಲ್ಲೆಗೆ 5 ಲಕ್ಷ ಸದಸ್ಯತ್ವದ ಗುರಿ: ಕೋಟಾ
•ಬಿಜೆಪಿ 11 ಕೋಟಿ ಸದಸ್ಯರಿರುವ ವಿಶ್ವದ ಅತಿ ದೊಡ್ಡ ಪಕ್ಷ•ಕಾರ್ಯಕರ್ತರೇ ಪಕ್ಷದ ಆಧಾರ
Team Udayavani, Jun 29, 2019, 10:10 AM IST
ದಾವಣಗೆರೆ: ಸದಸ್ಯತಾ ಅಭಿಯಾನ ಕಾರ್ಯಾಗಾರವನ್ನು ಮುಖಂಡರು ಉದ್ಘಾಟಿಸಿದರು.
ದಾವಣಗೆರೆ: ಜನಸಂಘದ ಕಾಲದಿಂದಲೂ ಕಾರ್ಯಕರ್ತರ ರಾಷ್ಟ್ರೀಯತೆ, ದೇಶಪ್ರೇಮದ ಆಧಾರವಾಗಿ ಬೆಳೆಯುತ್ತಿರುವ ಬಿಜೆಪಿ ಈಗ ಜಗತ್ತಿನಲ್ಲೇ ಅತಿ ಹೆಚ್ಚಿನ ಸದಸ್ಯರನ್ನು ಹೊಂದಿರುವ ಪಕ್ಷವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಶುಕ್ರವಾರ ಬಿಜೆಪಿ ಕಾರ್ಯಾಲಯದಲ್ಲಿ ಸಂಘಟನಾ ಪರ್ವ ಸದಸ್ಯತಾ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತಿತರ ಪಕ್ಷಗಳು ಹಣ, ಅಧಿಕಾರಕ್ಕಾಗಿ ಇದ್ದರೆ. ಬಿಜೆಪಿ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿದೆ. ರಾಷ್ಟ್ರಕ್ಕಾಗಿ ತಮ್ಮ ಬದುಕನ್ನೇ ಸಮರ್ಪಣೆ ಮಾಡಿದಂತಹವರ ಪಡೆಯೇ ಬಿಜೆಪಿಯಲ್ಲಿ ಇದೆ ಎಂದರು.
ಜನಸಂಘ ಕಾಲದಿಂದಲೂ ಬಿಜೆಪಿ ಸಂಘಟನೆ, ಕಾರ್ಯಕರ್ತರ ಶಕ್ತಿ, ರಾಷ್ಟ್ರೀಯತೆ, ದೇಶಭಕ್ತಿ ಎಂಬ ಅಂಶಗಳ ಆಧಾರದಲ್ಲಿ ಬೆಳೆದು ಬಂದಿದೆ.ಈಗ 11 ಕೋಟಿಯಷ್ಟು ಸದಸ್ಯರನ್ನು ಬಿಜೆಪಿ ಹೊಂದಿದೆ. ಜಗತ್ತಿನ ಯಾವುದೇ ರಾಜಕೀಯ ಪಕ್ಷ ಇಷ್ಟೊಂದು ಸಂಖ್ಯೆಯ ಸದಸ್ಯತ್ವ ಹೊಂದಿಲ್ಲ . ಕಾರ್ಯಕರ್ತರ ಪಡೆಯನ್ನೇ ಹೊಂದಿರುವ ಬಿಜೆಪಿಯನ್ನು ಯಾವುದೇ ಕಾರಣಕ್ಕೂ ಜೆಡಿಎಸ್, ಕಾಂಗ್ರೆಸ್‌ನೊಂದಿಗೆ ಹೋಲಿಕೆ ಮಾಡುವುದು ಸರಿ ಅಲ್ಲ ಎಂದು ತಿಳಿಸಿದರು.
ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು. ಹಾಗಾಗಿಯೇ ಮುಂದೆಯೂ ಇನ್ನೂ ಹೆಚ್ಚಿನ ಸದಸ್ಯತ್ವ ಹೊಂದುವ ಉದ್ದೇಶದಿಂದ ಜು.6 ರಿಂದ ಆ.11ರ ವರೆಗೆ ರಾಜ್ಯದ 58,500 ಬೂತ್ ಒಳಗೊಂಡಂತೆ ದೇಶದ್ಯಾಂತ ಸದಸ್ಯತಾ ಅಭಿಯಾನ ನಡೆಯಲಿದೆ. ಅಭಿಯಾನದಲ್ಲಿ 5 ಲಕ್ಷ ಸದಸ್ಯತಾ ನೋಂದಣಿ ಗುರಿ ಇರುವ ದಾವಣಗೆರೆ ಜಿಲ್ಲೆ ರಾಜ್ಯಕ್ಕೆ ನಂಬರ್ ಒನ್ ಸ್ಥಾನ ಪಡೆಯಬೇಕು ಎಂದು ಆಶಿಸಿದರು.
ರಾಜ್ಯ ಸರ್ಕಾರ ರೈತರ 53 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗುವುದು. ಅದಕ್ಕಾಗಿ ಬಜೆಟ್‌ನಲ್ಲಿ 12 ಸಾವಿರ ಕೋಟಿ ಇಡಲಾಗಿದೆ ಎಂದು ಹೇಳುತ್ತಿದೆ. ಆದರೆ, ಅರ್ಧದಷ್ಟು ರೈತರ ಸಾಲ ಮನ್ನಾ ಮಾಡಿಲ್ಲ. ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆ 76 ಲಕ್ಷ ರೈತ ಕುಟುಂಬಗಳಿಗೆ ತಲುಪಬೇಕು. ಆದರೆ, 10 ಲಕ್ಷ ಕುಟುಂಬಗಳಿಗೆ ತಲುಪಿಲ್ಲ. ಆಯುಷ್ಮಾನ್ ಭಾರತ್ ಯೋಜನೆ ತಲುಪಿಸುವಲ್ಲೂ ರಾಜ್ಯ ಸರ್ಕಾರ ವಿಫಲವಾಗಿದೆ. ಇಂತಹ ಎಲ್ಲ ವಿಚಾರಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಎಸ್.ಎ. ರವೀಂದ್ರನಾಥ್ ಮಾತನಾಡಿ, 1972-73ರಲ್ಲಿ ಜನಸಂಘದ ಸದಸ್ಯತ್ವ, ತಾಲೂಕು ಸಮಿತಿ ರಚನೆಗೆ ಕಷ್ಟಪಡಬೇಕಾದ ಕೆಟ್ಟ ಸ್ಥಿತಿ ಇತ್ತು. ಈಗ ಬಿಜೆಪಿ ಜಿಲ್ಲೆಯಲ್ಲಿ 5 ಲಕ್ಷ ಸದಸ್ಯತ್ವ ಹೊಂದಿದೆ. ಅಭಿಯಾನದಲ್ಲಿ ಮನೆ ಮನೆಗೆ ತೆರಳಿ ಜನರ ಸಮಸ್ಯೆ ಆಲಿಸಿ, ಅದಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸವನ್ನ ಕಾರ್ಯಕರ್ತರ ಮಾಡಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್ ಮಾತನಾಡಿ, ಎಲ್ಲರೂ ಒಟ್ಟಾಗಿ 5 ಲಕ್ಷ ಸದಸ್ಯತ್ವ ಗುರಿಯನ್ನೂ ಮೀರಿ ಹೆಚ್ಚಿನ ಸದಸ್ಯತ್ವ ಮಾಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎನ್. ಶಿವಕುಮಾರ್ ಪ್ರಾಸ್ತಾವಿಕ ಮಾತುಗಳಾಡಿದರು. ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ| ಎ.ಎಚ್. ಶಿವಯೋಗಿಸ್ವಾಮಿ, ಮಾಜಿ ಶಾಸಕ ಎಂ.ಬಸವರಾಜನಾಯ್ಕ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶೈಲಜಾ ಬಸವರಾಜ್, ಉಪಾಧ್ಯಕ್ಷ ಸಿ. ಸುರೇಂದ್ರನಾಯ್ಕ, ತಾಲೂಕು ಪಂಚಾಯತ್ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ವೈ. ಮಲ್ಲೇಶ್, ಚಂದ್ರಶೇಖರ್, ಎನ್.ಇ. ಅಣಬೇರು ಜೀವನಮೂರ್ತಿ, ಸಿ. ರಮೇಶ್‌ನಾಯ್ಕ, ಎಚ್.ಎಂ. ರುದ್ರಮುನಿಸ್ವಾಮಿ, ಕೆ. ಹೇಮಂತ್‌ಕುಮಾರ್ ಇತರರು ಇದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ರಾಜಶೇಖರ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.