LOVE ಮಾಡುವಂತೆ ಪೀಡಿಸಿದ್ದಲ್ಲದೆ ಸಾರ್ವಜನಿಕವಾಗಿ ಫ್ಲೆಕ್ಸ್ ಹಾಕಿದ್ದವನಿಗೆ 6 ತಿಂಗಳು ಜೈಲು
Team Udayavani, Aug 2, 2024, 9:03 PM IST
ದಾವಣಗೆರೆ: ಪ್ರೀತಿಸುವಂತೆ ಪೀಡಿಸಿದ್ದಲ್ಲದೆ ಫ್ಲೆಕ್ಸ್ ಹಾಕಿ ಮಾನಹಾನಿ ಮಾಡಿದ್ದವನಿಗೆ ದಾವಣಗೆರೆಯ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯ 6 ತಿಂಗಳು ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ದಾವಣಗೆರೆಯ ನಿಟುವಳ್ಳಿ ನಿವಾಸಿ ಅಲ್ತಾಫ್(22) ಶಿಕ್ಷೆಗೆ ಒಳಗಾದವನು. ಅಲ್ತಾಫ್ 16 ವರ್ಷದ ಅಪ್ರಾಪ್ತೆಯನ್ನ ಪ್ರೀತಿಸು ಎಂದು ಪೀಡಿಸಿ, ಚುಡಾಯಿಸುತ್ತಿದ್ದ. ಪ್ರೀತಿ ಮಾಡಲಿಲ್ಲ ಎಂದರೆ ಮುಖಕ್ಕೆ ಆಸಿಡ್ ಹಾಕಿ, ಅಪಹರಿಸಿ, ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದ. ಅಲ್ಲದೆ ಡಿಪಿಯಲ್ಲಿನ ಫೋಟೋ ತೆಗೆದುಕೊಂಡು ಹಾಗೂ ಅವನ ಫೋಟೋದ ಜೊತೆಗೆ ಸೇರಿಸಿ ಎಡಿಟ್ ಮಾಡಿ ಎಚ್. ಕೆ. ಆರ್ ಸರ್ಕಲ್ ಬಳಿ ಫ್ಲೆಕ್ಸ್ ಸಹ ಹಾಕಿದ್ದನು.
ಅಲ್ತಾಫ್ ವಿರುದ್ಧ ಬಾಲಕಿಯ ತಂದೆ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡ ಮಹಿಳಾ ಪೊಲೀಸ್ ಠಾಣಾ ವೃತ್ತ ನಿರೀಕ್ಷಕಿ ಮಲ್ಲಮ್ಮ ಚೌಬೆ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ರಾಮ ನಾರಾಯಣ ಹೆಗಡೆ ರವರು ಆರೋಪಿಗೆ 6 ತಿಂಗಳು ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ,ದಂಡದ ಹಣವನ್ನು ಸಂತ್ರಸ್ತೆಗೆ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.