ಹೊನ್ನಾಳಿ-ನ್ಯಾಮತಿ ತಾಲೂಕಿನಲ್ಲಿ 8 ಕೋವಿಡ್ ಪ್ರಕರಣ ಪತ್ತೆ

Team Udayavani, Jul 12, 2020, 2:17 PM IST

ಹೊನ್ನಾಳಿ-ನ್ಯಾಮತಿ ತಾಲೂಕಿನಲ್ಲಿ 8 ಕೋವಿಡ್ ಪ್ರಕರಣ ಪತ್ತೆ

ಹೊನ್ನಾಳಿ: ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ 8 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಹೊನ್ನಾಳಿ ಪಟ್ಟಣದಲ್ಲಿ ಶನಿವಾರ ಕೋವಿಡ್ ದೃಢಪಟ್ಟ ಮನೆಗಳನ್ನು ಸೀಲ್‌ಡೌನ್‌ ಮಾಡಿಸಿದ ನಂತರ ತಹಶೀಲ್ದಾರ್‌ ತುಷಾರ್‌ ಬಿ. ಹೊಸೂರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಪಟ್ಟಣದ ಅಕ್ಕಸಾಲಿಗರ ಬೀದಿಯಲ್ಲಿ 1, ಎ.ಕೆ. ಕಾಲೋನಿಯಲ್ಲಿ 2, ಟಿ.ಎಂ. ರಸ್ತೆಯಲ್ಲಿ 1, ತಾಲೂಕಿನ ಬಿದರಗಡ್ಡೆ ಗ್ರಾಮದಲ್ಲಿ 1 ಹಾಗೂ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮದಲ್ಲಿ 2 ಮತ್ತು ತೆಗ್ಗಿಹಳ್ಳಿ ಗ್ರಾಮದಲ್ಲಿ 1 ಸೇರಿದಂತೆ ಒಟ್ಟು 8 ಪ್ರಕರಣಗಳು ವರದಿಯಾಗಿವೆ ಎಂದರು.

ಇದುವರೆಗೆ ಪಟ್ಟಣದಲ್ಲಿ 16 ಹಾಗೂ ಗ್ರಾಮಾಂತರದಲ್ಲಿ 21 ಪ್ರಕರಣಗಳು ಸೇರಿದಂತೆ ಒಟ್ಟು 37 ಜನರಿಗೆ ಸೋಂಕು ದೃಢಪಟ್ಟಿದೆ. ಅದರಲ್ಲಿ 12 ಜನರು ಗುಣಮುಖರಾಗಿದ್ದರೆ, 25 ಸಕ್ರಿಯ ಪ್ರಕರಣಗಳಿವೆ. ಪಟ್ಟಣ ಹಾಗೂ ಗ್ರಾಮಾಂತರ ಸೇರಿ ಒಟ್ಟು 17 ಕಡೆ ಕಂಟೇನ್ಮೆಂಟ್‌ ಝೋನ್‌ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೋವಿಡ್ ಸೋಂಕು ದೃಢಪಟ್ಟ ಮನೆಗಳ ಬಳಿ ಸೀಲ್‌ಡೌನ್‌ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು. ನಂತರ ಅಕ್ಕಪಕ್ಕದ ಮನೆಯವರಿಗೆ ಯಾರೂ ಮನೆಯಿಂದ ಹೊರಬರಬೇಡಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಎಂದು ಮನವಿ ಮಾಡಿದರು. ಕೋವಿಡ್ ಸೋಂಕಿತರಿಗೆ ಯಾವುದೇ ಅಪಾಯ ಎದುರಾಗುವುದಿಲ್ಲ. ಆದರೆ ಆತ್ಮವಿಶ್ವಾಸಬವನ್ನು ಬೆಳೆ‌ಸಿಕೊಳ್ಳಬೇಕು. ಇದರಿಂದ ಯಾವುದೇ ಕಾಯಿಲೆಯನ್ನು ಗೆಲ್ಲಬಹುದು. ಬಹು ಮುಖ್ಯವಾಗಿ ಸರ್ಕಾರದ ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಆಗ ಮಾತ್ರ ಕೊರೊನಾ ಸೋಂಕು ಹರಡುವಿಕೆಯಿಂದ ಪಾರಾಗಬಹುದು ಎಂದು ತಿಳಿಸಿದರು.

ಸಿಪಿಐ ಟಿ.ವಿ. ದೇವರಾಜ್‌, ಪಿಎಸ್‌ಐ ತಿಪ್ಪೇಸ್ವಾಮಿ, ಪಪಂ ಮುಖ್ಯಾಧಿ ಕಾರಿ ಎಸ್‌.ಆರ್‌. ವೀರಭದ್ರಯ್ಯ, ಕಿರಿಯ ಆರೋಗ್ಯ ಸಹಾಯಕ ನಾಗೇಶ್‌, ಕಂದಾಯಾಧಿಕಾರಿ ರಾಮಚಂದ್ರಪ್ಪ, ರವಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.