ಅಪ್ರಾಪ್ತ ಬಾಲಕಿ ವಿವಾಹಕ್ಕೆ ಅಧಿಕಾರಿಗಳ ತಡೆ
Team Udayavani, Apr 12, 2018, 4:22 PM IST
ಹರಪನಹಳ್ಳಿ: ಅಪ್ರಾಪ್ತ ಬಾಲಕಿ ವಿವಾಹ ತಡೆದ ಅಧಿಕಾರಿಗಳು ಪೋಷಕರ ಮನವೊಲಿಸಿ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ನೀಡಿದ ಘಟನೆ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದ ಪ್ರಕಾಶ್ ಹಾಗೂ ಕೆಂಚಮ್ಮ ಎಂಬುವರ ಪುತ್ರಿಯ ವಿವಾಹವನ್ನು ಹುಲಿಕಟ್ಟಿ ಗ್ರಾಮದ ಹನುಮಂತಪ್ಪ ಎಂಬುವವರ ಮಗ ಜೆ.ಬಸವರಾಜ್ ಎಂಬಾತನೊಂದಿಗೆ ನಿಗದಿಗೊಳಿಸಲಾಗಿತ್ತು. ಏ. 11ರಂದು ಬೆಳಗ್ಗೆ ವರನ ಸ್ವಗೃಹದಲ್ಲಿ ವಿವಾಹ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಶಾಲಾ ದಾಖಲೆಯ ಪ್ರಕಾರ ಬಾಲಕಿಯ ವಯಸ್ಸು ಕೇವಲ 15 ವರ್ಷ ಎಂಬ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿವಾಹ ತಡೆಹಿಡಿದಿದ್ದಾರೆ.
ಅಧಿಕಾರಿಗಳು, ಗ್ರಾಮಸ್ಥರು ಏ. 10ರಂದು ರಾತ್ರಿಯೇ ಮದುವೆ ಮಾಡದಂತೆ ಪೋಷಕರಿಗೆ ಎಚ್ಚರಿಕೆ ನೀಡಿದರು. ಆದರೂ ಕಣ್ಣು ತಪ್ಪಿಸಿ ಮದುವೆ ನಡೆಯಬಹುದು ಎಂಬ ಅತಂಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮಲೆಕ್ಕಾಧಿಕಾರಿ, ಪಿಡಿಒ, ನೇಸರ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ತಂಡ ಬುಧವಾರ ವರನ ಮನೆಗೆ ತೆರಳಿ ಅವರಿಗೆ ಬಾಲ್ಯ ವಿವಾಹದಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಿದರು. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಬಾಲಕಿಗೆ 18 ವರ್ಷ ತುಂಬುವವರೆಗೆ ಮದುವೆ ಮಾಡುವುದಿಲ್ಲ ಎಂದು ಪೋಷಕರು ಅಧಿಕಾರಿಗಳಿಗೆ ಮುಚ್ಚಳಿಕೆ ಪತ್ರವನ್ನು ಬರೆದುಕೊಟ್ಟಿದ್ದಾರೆ.
ಜಿಲ್ಲಾ ಮಕ್ಕಳ ಕಲ್ಯಾಣ ರಕ್ಷಣಾಧಿ ಕಾರಿ ಕೆ.ಎಚ್. ವಿಜಯಕುಮಾರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮನಾಯ್ಕ, ಸದಸ್ಯರಾದ ಎಲ್. ಮಂಜುನಾಥ, ಅಮೀರಬಾನು, ಶಿಶು ಅಭಿವೃದ್ಧಿ ಯೋಜನಾಧಿ ಕಾರಿ ಮಹಾಂತಸ್ವಾಮಿ, ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾಧಿ ಕಾರಿ ಕೆ.ಪಿ.ದೇವರಾಜ್, ತಾಪಂ ಸದಸ್ಯ ಎಚ್.ಚಂದ್ರಪ್ಪ, ಪೊಲೀಸ್ ಅಧಿಕಾರಿ ಅಪ್ಪಣ್ಣರೆಡ್ಡಿ, ನೇಸರ್ ಸಂಸ್ಥೆಯ ಕಾರ್ಯಕರ್ತ ಎಚ್. ಎಂ.ರಮೇಶ್, ಗ್ರಾಮಸ್ಥರಾದ ಪಿ.ಗಂಗಾಧರಪ್ಪ, ಬಿ. ಕೃಷ್ಣಪ್ಪ, ಟಿ.ಹೋಮ್ಯಪ್ಪ, ಹೊಳಿಯಪ್ಪ, ಶಿವಾನಂದಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Editorial: ಗಿಫ್ಟ್ ಡೀಡ್: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ
ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗಳ ದರವೂ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.