ಮಕ್ಕಳ ಲಸಿಕೆಯಲ್ಲಿ ಗುರಿ ಮೀರಿದ ಸಾಧನೆ

ಲಾಕ್‌ಡೌನ್‌ನಲ್ಲೂ ತಪ್ಪದ ಕಾರ್ಯ,ಪ್ರತಿ ಮನೆಗೆ ತೆರಳಿ ಲಸಿಕೆ ಹಾಕಿಸಿದ ಆರೋಗ್ಯ ಇಲಾಖೆ

Team Udayavani, Nov 3, 2020, 7:15 PM IST

dg-tdy-1

ದಾವಣಗೆರೆ: ಶಿಶುವಿಗೆ ಲಸಿಕೆ ಹಾಕುತ್ತಿರುವುದು (ಸಾಂದರ್ಭಿಕ ಚಿತ್ರ) ಹಾಗೂ ಮಕ್ಕಳ ಲಸಿಕೆ ಕಾರ್ಯ ಅನುಷ್ಠಾನಕ್ಕಾಗಿ ಸ್ಕೋಚ್‌ ಸಂಸ್ಥೆ ರಾಜ್ಯ ಆರೋಗ್ಯ ಇಲಾಖೆಗೆ ನೀಡಿದ ಬೆಳ್ಳಿ ಪ್ರಶಂಸಾ ಪುರಸ್ಕಾರ

ದಾವಣಗೆರೆ: ಕೋವಿಡ್ ಕಾರಣದಿಂದ ವಿಧಿಸಿದ ಲಾಕ್‌ಡೌನ್‌ನಂಥ ಕಠಿಣ ಪರಿಸ್ಥಿತಿಯಲ್ಲಿಯೂ ಜಿಲ್ಲಾ ಆರೋಗ್ಯ ಇಲಾಖೆ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯದಲ್ಲಿ ಗುರಿ ಮೀರಿ ಸಾಧನೆ ಮಾಡಿ ಗಮನ ಸೆಳೆದಿದೆ.

ಲಾಕ್‌ಡೌನ್‌ ವೇಳೆ ಮನೆಯಿಂದ ಹೊರ ಬರಲು ಆಗದೆ ವಿಶ್ವದ ಲಕ್ಷಾಂತರ ಮಕ್ಕಳುನಿಗದಿತ ಚುಚ್ಚುಮದ್ದಿನ ಲಸಿಕೆಗಳಿಂದ ವಂಚಿತರಾಗಿದ್ದರು. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಆತಂಕ ವ್ಯಕ್ತಪಡಿಸಿತ್ತು. ಆದರೆ ಜಿಲ್ಲಾ ಆರೋಗ್ಯ ಇಲಾಖೆ ಮಾತ್ರ ಒಂದು ದಿನದಿಂದಹಿಡಿದು 16 ವರ್ಷದೊಳಗಿನ ಮಕ್ಕಳಿಗೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಗಳನ್ನು ಹಾಕುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ.

ಆರೋಗ್ಯ ಇಲಾಖೆ ಏಪ್ರಿಲ್‌ನಿಂದ ಸೆಪ್ಟೆಂಬರ್‌ ವರೆಗೆ ಒಟ್ಟು 13,181 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿತ್ತು. ಲಾಕ್‌ಡೌನ್‌ ಇದ್ದಾಗಲೂ ಇಲಾಖೆಯ ಅಧಿಕಾರಿಗಳು ಮುತುವರ್ಜಿವಹಿಸಿ ಜಿಲ್ಲೆಯ 13,322 ಮಕ್ಕಳಿಗೆ ಲಸಿಕೆ ಹಾಕಿದ್ದು ಸಾಧನೆ ಶೇ. 101 ಆಗಿದೆ. ಆರೋಗ್ಯ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಹೋಗಿ ಲಸಿಕೆ ಹಾಕಿರುವುದು ವಿಶೇಷ. ಐದು ವರ್ಷ, 10 ವರ್ಷ ಹಾಗೂ 16 ವರ್ಷದ ಮಕ್ಕಳಿಗಂತೂ ಎಲ್ಲಿಯೂ ಲಸಿಕೆ ಹಾಕುವ ಕಾರ್ಯ ಸಮರ್ಪಕವಾಗಿ ನಡೆದಿಲ್ಲ.ಆದರೆ ಜಿಲ್ಲಾ ಆರೋಗ್ಯ ಇಲಾಖೆ ಮಾತ್ರ ಈ ವಯಸ್ಸಿನ 2800 ಮಕ್ಕಳಿಗೆ ಲಾಕ್‌ಡೌನ್‌ ಅವಧಿಯಲ್ಲಿ ಲಸಿಕೆ ಹಾಕಿ ದಾಖಲೆ ಬರೆದಿದೆ.

ತಾಲೂಕುವಾರು ವಿವರ: ಚನ್ನಗಿರಿ ತಾಲೂಕಿನಲ್ಲಿ 2531 ಮಕ್ಕಳಿಗೆ, ದಾವಣಗೆರೆ ತಾಲೂಕಿನಲ್ಲಿ 5096 ಮಕ್ಕಳಿಗೆ, ಹರಿಹರ ತಾಲೂಕಿನಲ್ಲಿ 2174 ಮಕ್ಕಳಿಗೆ, ಹೊನ್ನಾಳಿ ತಾಲೂಕಿನಲ್ಲಿ 2099 ಮಕ್ಕಳಿಗೆ, ಜಗಳೂರು ತಾಲೂಕಿನಲ್ಲಿ1422 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಹೊನ್ನಾಳಿ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ ಶೇ. 123 (1701 ಗುರಿ) ಗುರಿ ಸಾಧಿಸಲಾಗಿದೆ. ಉಳಿದಂತೆ ಚನ್ನಗಿರಿ ತಾಲೂಕಿನಲ್ಲಿ ಶೇ. 104 (2442 ಗುರಿ), ದಾವಣಗೆರೆ ತಾಲೂಕಿನಲ್ಲಿ ಶೇ.91 (5575 ಗುರಿ), ಹರಿಹರ ತಾಲೂಕಿನಲ್ಲಿ ಶೇ. 108 (2019ಗುರಿ), ಜಗಳೂರು ತಾಲೂಕಿನಲ್ಲಿ ಶೇ. 99 (1443ಗುರಿ) ಗುರಿ ಸಾಧಿಸಲಾಗಿದೆ. ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಮಕ್ಕಳಿಗೆ ವಿವಿಧ 13 ಲಸಿಕೆಗಳನ್ನು ಹಾಕಿದ ಮಕ್ಕಳ ಸಂಖ್ಯೆ ಹಾಗೂ ಸಾಧನೆಯ ಶೇಕಡಾ ವಿವರ ಇಂತಿದೆ. ಟಿಟಿ ಎಎನ್‌ಸಿ-13,617 (ಶೇ.93), ಬಿಸಿಜಿ-9871 (ಶೇ. 75), ಪೆಂಟಾ 1-11,428 (ಶೇ. 87), ಓಪಿವಿ (ಬರ್ತ್‌ ಡೋಸ್‌)-9535 (ಶೇ. 72), ಒಪಿವಿ 1-9535 (ಶೇ. 72), ಹೆಪಟೈಟಿಸ್‌ ಬಿ (ಬರ್ತ್‌ ಡೋಸ್‌)-8671 (ಶೇ. 66), ಐಪಿವಿ 1-11256 (ಶೇ. 85), ಐಪಿವಿ 2-10616 (ಶೇ. 81) ಎಂಆರ್‌ 1-13322 (ಶೇ. 101), ಪೋಲಿಯೋ ಬೂಸ್ಟರ್‌-10,351 (ಶೇ. 79) ಡಿಟಿ 5 ಇಯರ್‌-11,370 (ಶೇ. 86), ಟಿಟಿ 10 ಇಯರ್‌-12,661 (ಶೇ. 96), ಟಿಟಿ 16 ಇಯರ್‌-10,075 (ಶೇ.76). ಒಟ್ಟಾರೆ ಕೊರೊನಾ ಲಾಕ್‌ಡೌನ್‌ಅವಧಿಯಲ್ಲಿಯೂ ಮನೆ ಮನೆಗೆ ಹೋಗಿ ಮಕ್ಕಳಿಗೆ ಅಗತ್ಯ ಲಸಿಕೆ ಹಾಕುವ ಮೂಲಕ ಜಿಲ್ಲಾ ಆರೋಗ್ಯ ಇಲಾಖೆ ತೋರಿದ ಕಾಳಜಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಕೋವಿಡ್‌-19 ಲಾಕ್‌ಡೌನ್‌ ಹಾಗೂ ಅನ್‌ಲಾಕ್‌ ಸಂದರ್ಭದಲ್ಲಿಯೂ ಮಕ್ಕಳಿಗೆ ಹಲವು ವಿಧದ ಲಸಿಕೆ ಹಾಕುವ ಮೂಲಕ ದಾವಣಗೆರೆ ಜಿಲ್ಲೆಯಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿಗೊಳಿಸಲಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ ರಾಜ್ಯದಲ್ಲಿ ಮುತುವರ್ಜಿ ವಹಿಸಿ ಮಕ್ಕಳಿಗೆ ಲಸಿಕೆ ಹಾಕಿರುವುದರಿಂದಸ್ಕೋಚ್‌ ಸಂಸ್ಥೆ ರಾಜ್ಯ ಆರೋಗ್ಯ ಇಲಾಖೆಗೆ ಬೆಳ್ಳಿ ಪ್ರಶಸ್ತಿ ನೀಡಿ ಪ್ರಶಂಸೆ ವ್ಯಕ್ತಪಡಿಸಿದೆ. -ಡಾ| ಮೀನಾಕ್ಷಿ , ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Gold worth Rs 12.95 crore stolen from Nyamathi SBI Bank

Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

abhimanyu kashinath next movie suri loves sandhya

Abhimanyu Kashinath; ಸೂರಿ ಲವ್‌ ಗೆ ಉಪ್ಪಿ ಮೆಚ್ಚುಗೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.