750 ಎಕರೆ ಪ್ರದೇಶಾಭಿವೃದ್ಧಿಗೆ ಕ್ರಮ: ಎಸ್ಸೆಸ್
Team Udayavani, Jun 26, 2017, 12:38 PM IST
ದಾವಣಗೆರೆ: ಕೇಂದ್ರ, ರಾಜ್ಯ ಸರ್ಕಾರದ ಸಹಯೋಗದಲ್ಲಿ ರೂಪಿತವಾಗಿರುವ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ 750 ಎಕರೆ ಪ್ರದೇಶ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು. ಭಾನುವಾರ ಮಂಡಿಪೇಟೆಯ ಲಕ್ಷ್ಮೀ ವೃತ್ತದಲ್ಲಿ ಸ್ಮಾರ್ಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಐದು ವರ್ಷದ ಈ ಸ್ಮಾರ್ಟ್ ಸಿಟಿ ಯೋಜನೆಯಡಿ ಅನೇಕ ಪ್ರದೇಶಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು. ಸ್ಮಾರ್ಟ್ ಸಿಟಿ ಮತ್ತು ಇತರೆ ಯೋಜನೆಗಳಡಿ ನಗರದ ಮಂಡಕ್ಕಿ ಭಟ್ಟಿಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ, ಅಭಿವೃದ್ಧಿ ಪಡಿಸಲು ನೀಲನಕ್ಷೆ ತಯಾರಿಸಲಾಗಿದೆ.
ಕಸ ವಿಲೇವಾರಿ 37 ಕೋಟಿ ರೂ. ಅನುದಾನದಲ್ಲಿ ಸೋಲಾರ್ ದೀಪ, ಪಾದಚಾರಿ ಮಾರ್ಗ, ಸೈಕಲ್ ಹಾದಿ ನಿರ್ಮಾಣಕ್ಕೆ45 ಕೋಟಿ ರೂ. ಸೇರಿದಂತೆ ಹಲವಾರು ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಪ್ರಮುಖವಾಗಿ ರಸ್ತೆ ಮರು ನಿರ್ಮಾಣ, ಒಳಚರಂಡಿ, ನೀರು ಸರಬರಾಜು ವ್ಯವಸ್ಥೆ ಭೂಗತ ವಿದ್ಯುತ್ ವ್ಯವಸ್ಥೆ ಸೇರಿದಂತೆ ಹಲವಾರು ಕಾಮಗಾರಿಗಳು ಯೋಜನೆಯಲ್ಲಿ ಸೇರಿವೆ ಎಂದು ತಿಳಿಸಿದರು.
ನಗರ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ಕಸದ ತೊಟ್ಟಿ ಇಡದೆ ಮನೆಯಿಂದ ನೇರವಾಗಿ ವಾಹನದ ಮೂಲಕವೇ ಕಸ ಸಂಗ್ರಹಿಸಿ, ಘನತ್ಯಾಜ್ಯ ವಸ್ತು ನಿರ್ವಹಣೆ ಸ್ಥಳಕ್ಕೆ ಸಾಗಿಸಲು ಕ್ರಮ ಕೈಗೊಳ್ಳುವ ಕಾಮಗಾರಿಗೆ 37.01 ಕೋಟಿ ರೂ. ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.
ನಗರದ ಹಳೆ ಪೂನಾ-ಬೆಂಗಳೂರು ರಸ್ತೆ,¤ ಜಗಳೂರು ರಸ್ತೆಯ ನಗರಪಾಲಿಕೆಯ ಬಸ್ ನಿಲ್ದಾಣ ಆಧುನೀಕರಣಗೊಳಿಸಲು 25 ಕೋಟಿ ರೂ. ಕಾಯ್ದಿರಿಸಲಾಗಿದೆ. ಸರ್ಕಾರಿ ಹಳೆ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಅಭಿವೃದ್ಧಿ, ಹಳೆ ತಾಲೂಕು ಕಚೇರಿಯನ್ನು ತೆರವುಗೊಳಿಸಿ, ಹೊಸ ಕಚೇರಿ ಕಟ್ಟಡ, ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಿಸುವುದರ ಜೊತೆಗೆ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ದುರ್ಗಾಂಬಿಕಾ ದೇವಸ್ಥಾನದ ಸುತ್ತಲೂ ಪರಂಪರೆ ವಾತಾವರಣ ಮತ್ತು ಪಾದಚಾರಿ ರಸ್ತೆ ನಿರ್ಮಾಣ ಅಭಿವೃದ್ಧಿ ಪಡಿಸುವುದರ ಜೊತೆಗೆ ವಾಹನ ಸಂಚಾರ ರಹಿತ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ 6.67 ಕೋಟಿ ರೂ. ಕಾಯ್ದಿರಿಸಲಾಗಿದೆ ಎಂದರು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹಾಲಿ 400 ಕೋಟಿ ರೂ. ಬಿಡುಗಡೆಯಾಗಿದೆ.
ಜೊತೆಗೆ ವಿವರವಾದ ಅಂದಾಜು ಪಟ್ಟಿ ತಯಾರಿಸಿ ಟೆಂಡರ್ ಕರೆಯುವುದರ ಬಗ್ಗೆ ಪಿಎಂಸಿಯಾಗಿ ಐಡೆಕ್ ಸಂಸ್ಥೆಯ ನೇಮಕವಾಗಿದ್ದು, ಪ್ರಥಮ ಹಂತವಾಗಿ 3 ರಸ್ತೆಗಳಿಗೆ ಅನುಮೋದನೆ ನೀಡಿದ್ದು, 2 ರಸ್ತೆಗಳ ಕಾಮಗಾರಿಗಳಿಗೆ ಈ ದಿನ ಚಾಲನೆ ನೀಡುತ್ತಿರುವುದು ಅತಿ ಸಂತೋಷದ ವಿಷಯವಾಗಿದೆ ಎಂದು ತಿಳಿಸಿದರು. ನಗರದಲ್ಲಿದ್ದ 150 ಪಾರ್ಕ್‌ಗಳ ಪೈಕಿ ಈಗಾಗಲೇ 50 ಪಾರ್ಕ್‌ಗಳನ್ನು ತೋಟಗಾರಿಕೆ ಇಲಾಖೆಯಿಂದ ಅಭಿವೃದ್ಧಿಪಡಿಸಲಾಗಿದೆ.
ಕುಂದವಾಡ ಕೆರೆಯಲ್ಲಿ ಕಾರಂಜಿ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ವಾಯು ವಿಹಾರಿಗಳಿಗೆ ಅನುಕೂಲವಾಗಲಿದೆ ಎಂದರು. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಟಾರ್, ಮೇಯರ್ ಅನಿತಾಬಾಯಿ ಮಾಲತೇಶ್, ಉಪ ಮೇಯರ್ ಮಂಜಮ್ಮ ಹನುಮಂತಪ್ಪ, ಪಾಲಿಕೆ ಸದ್ಯಸರಾದ ದಿನೇಶ್ ಕೆ.ಶೆಟ್ಟಿ, ಶಿವನಹಳ್ಳಿ ರಮೇಶ್, ಲಕ್ಷ್ಮೀದೇವಿ ವೀರಣ್ಣ, ಶ್ರೀನಿವಾಸ್, ಚಂದ್ರಪ್ಪ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಪ್ರಭಾರ ಆಯುಕ್ತ ರವೀಂದ್ರ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.