ಶಾಂತಿಯುತ ರಂಜಾನ್ ಆಚರಣೆಗೆ ಕ್ರಮ
Team Udayavani, Jun 23, 2017, 1:15 PM IST
ದಾವಣಗೆರೆ: ರಂಜಾನ್ ಹಬ್ಬದ ಶಾಂತಿಯುತ ಆಚರಣೆಗೆ ಸಿಸಿ ಟಿವಿ ಅಳವಡಿಕೆ ಒಳಗೊಂಡಂತೆ ಎಲ್ಲ ರೀತಿಯ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಾಶಂಕರ್ ಎಸ್. ಗುಳೇದ್ ತಿಳಿಸಿದ್ದಾರೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ನಾಗರಿಕ ಸೌಹಾರ್ದ ಮತ್ತು ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ 8 ಭಾಗದಲ್ಲಿ ಸಿಸಿ ಟಿವಿ ಅಳವಡಿಸಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಸಿಸಿ ಟಿವಿ ಅಳವಡಿಕೆಗೆ ಇಲಾಖೆಗೆ ಅನುದಾನ ಬಿಡುಗಡೆಯಾಗಿದ್ದು, ಸವಿವರದ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು. ತಾವು ಅಧಿಕಾರ ವಹಿಸಿಕೊಂಡ ನಂತರದಿಂದ ದಾವಣಗೆರೆ ನಗರ ಮತ್ತು ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ.
ಇದನ್ನು ನೋಡಿದರೆ ಇಲ್ಲಿನ ಜನರಿಗೆ ಯಾವುದೇ ರೀತಿಯ ಗಲಾಟೆಯೇ ಬೇಕಿಲ್ಲ. ಎಲ್ಲರೂ ಶಾಂತಿಯುತವಾಗಿ ಹಬ್ಬ-ಹರಿದಿನ ಆಚರಿಸುವ ಮನೋಭಾವ ಹೊಂದಿರುವುದು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು. ಇಲಾಖೆ ಕೆಲವಾರು ಕಿಡಿಗೇಡಿಗಳ ಬಗ್ಗೆ ಸದಾ ಗಮನ ನೀಡುತ್ತಿದೆ. 2 ವರ್ಷದಲ್ಲಿ ಕೆಲವರ ವಿರುದ್ಧ ರೌಡಿಶೀಟ್ ಪ್ರಾರಂಭ, ಸಿಆರ್‌ಪಿಸಿ 107 ಅಡಿ ಮುಂಜಾಗ್ರತಾ ಕ್ರಮ ತೆಗೆದುಕೊಂಡು 5 ರಿಂದ 10 ಲಕ್ಷ ಬಾಂಡ್ ಆಧಾರದಲ್ಲಿ ಬಿಡುಗಡೆ ಮಾಡಿದೆ.
ಸಮಾಜದಲ್ಲಿ ಕೆಟ್ಟವರು ಯಾರಿಯೇ ಆಗಿರಲಿ ಅಂತಹವರ ವಿರುದ್ಧ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ. ಯಾವುದೇ ಕಾರಣಕ್ಕೂ ಕೆಟ್ಟವರನ್ನು ಸುಮ್ಮನೆ ಬಿಡುವುದೇ ಇಲ್ಲಎಂದು ಎಚ್ಚರಿಸಿದರು. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರಾರ್ಥನಾ ಸ್ಥಳಗಳಲ್ಲಿ ಸ್ವತ್ಛತೆ, ನೀರಿನ ಸೌಲಭ್ಯ ಒದಗಿಸುವ ಬಗ್ಗೆ ಸಂಬಂಧಿತ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ, ಸೂಕ್ತ ಸೂಚನೆ ನೀಡಲಾಗಿದೆ.
ಹರಿಹರದಲ್ಲಿ ಒಳ ಚರಂಡಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ತೆರಳಲು ಅನಾನುಕೂಲ ಆಗುತ್ತಿರುವ ಬಗ್ಗೆ ನಗರಸಭೆ ಪೌರಾಯುಕ್ತರೊಂದಿಗೆ ಚರ್ಚಿಸಲಾಗಿದೆ. ತಾತ್ಕಾಲಿಕವಾಗಿ ಸೂಕ್ತ ರೀತಿಯ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆಯ ಅರುಣ ಚಿತ್ರಮಂದಿರ ವೃತ್ತದಿಂದ ಕೋರ್ಟ್ ವೃತ್ತದವರೆಗೆ ರಸ್ತೆಯ ಒಂದು ಭಾಗದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಡಲಾಗುವುದು. ಪ್ರಾರ್ಥನೆ ಸಮಯದಲ್ಲಿ ವಾಹನ ಸಂಚಾರ ನಿಲ್ಲಿಸಲಾಗುವುದು ಎಂದಾಗ ತಂಜೀಮುಲ್ ಕಮಿಟಿ ಅಧ್ಯಕ್ಷ ಸಾಧಿಕ್ ಪೈಲ್ವಾನ್, ಯುವ ಮುಖಂಡ ಜೆ. ಅಮಾನುಲ್ಲಾಖಾನ್, ಎಂ. ಟಿಪ್ಪುಸುಲ್ತಾನ್ ಇತರರು ಹಿಂದಿನ ವರ್ಷದಂತೆಯೇ ರಸ್ತೆಯ ಎರಡೂ ಬದಿಯಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆಗೆ ರಸ್ತೆಯ ಎರಡೂ ಬದಿಯಲ್ಲಿ ಅವಕಾಶ ಇತರೆ ಸೌಲಭ್ಯಕ್ಕೆ ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಗುವುದು ತಂಜೀಮುಲ್ ಕಮಿಟಿ ಅಧ್ಯಕ್ಷ ಸಾಧಿಕ್ ಪೈಲ್ವಾನ್ ಎಂದು ತಿಳಿಸಿದಾಗ, ಅದರ ಆಧಾರದಲ್ಲಿ ಚರ್ಚಿಸಿ, ಎಲ್ಲರಿಗೂ ಅನುಕೂಲ ಆಗುವಂತೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್ಪಿ ಡಾ| ಭೀಮಾಶಂಕರ್ ಪ್ರತಿಕ್ರಿಯಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಾತನಾಡಿ, ದಾವಣಗೆರೆ ನಗರ ಮತ್ತು ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೂ, ನಾಗರಿಕ ಸೌಹಾರ್ದ ಮತ್ತು ಸಮನ್ವಯ ಸಮಿತಿ ಸಭೆಯಲ್ಲಿ ಎಲ್ಲರೂ ಒಂದುಗೂಡಿ ಮುಂದೆಯೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಚರ್ಚಿಸಿರುವುದು ಸಂತೋಷದ ವಿಚಾರ ಎಂದರು.
ಎಲ್ಲರೂ ಪೀತಿಯಿಂದ ಇರುವಾಗ ಸಣ್ಣ ಪುಟ್ಟ ವಿಚಾರಗಳನ್ನು ಮರೆತುಬಿಡಬೇಕು. ಗೌಣವಾಗಿಸಿಬಿಡಬೇಕು. ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಸಮಾಜ ಏಕಮುಖೀಯಾಗಿ ಸಹಕಾರ ಸಾಗುವಂತಾಗಬೇಕು ಎಂದು ತಿಳಿಸಿದರು. ತಮಗೆ ಗೊತ್ತಿರುವಂತೆ ರಂಜಾನ್ ಎಂದರೆ ನಮ್ಮಲ್ಲಿನ ಎಲ್ಲಾ ಕೆಟ್ಟ ಗುಣಗಳನ್ನು ಸುಡುವ ಬೆಂಕಿ ಎಂದರ್ಥ.
ರಂಜಾನ್ ವ್ರತದ ಮೂಲಕ ನಮ್ಮಲ್ಲಿನ ಕೆಟ್ಟ ಗುಣಗಳನ್ನು ಸುಟ್ಟು ಅವಿಚ್ಚಿನ್ನ ಆಗುತ್ತೇವೆ. ರಂಜಾನ್ ನಂತರವೂ ನಾವು ಅವಿಚ್ಚಿನ್ನರಾಗಿ, ಶಾಂತಿ, ಸಂತೋಷದಿಂದ ಇರುವಂತಾಗಬೇಕು ಎಂದು ಆಶಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಯಶೋಧಾ ಎಸ್. ವಂಟಿಗೋಡಿ, ಮಹಾನಗರ ಪಾಲಿಕೆ ಉಪ ಆಯುಕ್ತ ಜಿ.ಎಂ. ರವೀಂದ್ರ ಇದ್ದರು. ವೃತ್ತ ನಿರೀಕ್ಷಕ ಜಿ.ಬಿ. ಉಮೇಶ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.