ಸಾಮರಸ್ಯ ಕಾಪಾಡಲು ಕ್ರಮ: ನರಸಿಂಹ ತಾಮ್ರಧ್ವಜ
Team Udayavani, Oct 24, 2020, 6:52 PM IST
ಜಗಳೂರು: ತಾಲೂಕಿನ ಸಂಚಾರ ಸಮಸ್ಯೆ ಸೇರಿದಂತೆ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು, ಅಗತ್ಯಮುಂಜಾಗ್ರತಾ ಕ್ರಮ ಕೈಗೊಂಡು ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲಾಗುವುದು ಎಂದು ಡಿವೈಎಸ್‌ಪಿ ನರಸಿಂಹ ತಾಮ್ರಧ್ವಜ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ನಡೆದಎಸ್‌ಸಿ-ಎಸ್ಟಿ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಸಂಚಾರ ಸಮಸ್ಯೆ, ಆಟೋಗಳಲ್ಲಿ ವಿದ್ಯಾರ್ಥಿಗಳನ್ನು ತುಂಬಿಕೊಂಡು ಬರುವುದು. ಕಾಲೇಜುಗಳಿಗೆ ಪೊಲೀಸ್ ಸಿಬ್ಬಂದಿ ಗಸ್ತು, ನಿಯಮ ಉಲ್ಲಂಘಿಸುತ್ತಿರುವ ಕೆಲ ಬಾರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಗ್ರಾಮಗಳಲ್ಲಿ ಅಹಿತಕರ ಘಟನೆಗಳು ಕಂಡುಬಂದಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಕೆಲ ದಿನಗಳ ಹಿಂದೆ ತಾಲೂಕಿನ ಮುಷ್ಠಿಗರಹಳ್ಳಿ ಗ್ರಾಮದಲ್ಲಿ ಕೋಮುಗಲಭೆಯಿಂದಾಗಿ ಗಲಾಟೆಯಾಗಿದ್ದ ಸಂದರ್ಭದಲ್ಲಿ ನಾವೇ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರನ್ನು ವಿಚಾರಿಸಿ ನಂತರ ಗ್ರಾಮಕ್ಕೆ ತೆರಳಿ ಎಲ್ಲಾ ಕೋಮಿನವರ ಸಮ್ಮುಖದಲ್ಲಿ ಸಾಮರಸ್ಯ ಸಭೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಕೆಲಸ ಮಾಡಲಾಗಿದೆ. ಕೆಲವು ಪ್ರಕರಣಗಳಲ್ಲಿ ಠಾಣೆಗೆ ಬರುವವರುಕೇಸ್ ದಾಖಲಿಸುವ ಮುನ್ನ ಬದ್ಧರಾಗಿರದೆ ಕೇವಲ ರಾಜಿ ಸಂಧಾನಕ್ಕೆ ಅಂಟಿಕೊಳ್ಳುವುದರಿಂದ ಪೊಲೀಸ್ ಇಲಾಖೆಗೆ ಗೊಂದಲವುಂಟಾಗುತ್ತಿದ್ದು, ಎಫ್‌ಐಆರ್ ದಾಖಲಿಸಿದರೆ ಅಗತ್ಯ ಕಾನೂನಿನಡಿಯಲ್ಲಿ ನ್ಯಾಯ ಪಡೆದುಕೊಳ್ಳಲು ಅನುಕೂಲವಾಗಲಿದೆ. ಮಾಸ್ಕ್ ಹಾಕದವರಿಗೆ ದಂಡ ಹಾಕುವ ಆದೇಶವನ್ನು ಸರ್ಕಾರ ಹೊರಡಿಸಿದ್ದು, ಇಲಾಖೆಯ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸಿ ಜತೆಗೆ ನಾವೇ ಖುದ್ದಾಗಿ ಮಾಸ್ಕ್ ವಿತರಿಸುತ್ತಿದ್ದೇವೆ. ಕೊರೊನಾ ನಿಯಂತ್ರಣಕ್ಕೆ ಎಸ್‌ಎಂಎಸ್ ಅಂದರೆ ಸ್ಯಾನಿಟೈಸರ್, ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಬಹುಮುಖ್ಯವಾಗಿದ್ದು, ಈ ನಿಟ್ಟಿಯಲ್ಲಿ ಪ್ರತಿಯೊಬ್ಬರೂ ಜಾಗೃತರಾಗಬೇಕಿದೆ ಎಂದರು.
ಸಿಪಿಐ ದುರುಗಪ್ಪ ಮಾತನಾಡಿ, ಕಳೆದ ಆರು ತಿಂಗಳಿಂದ ಕೋವಿಡ್ ಸಂಕಷ್ಟದಲ್ಲಿ ಇಲಾಖೆ ಸಿಬ್ಬಂದಿ ಹಗಲಿರುಳೆನ್ನದೆ ಜನರಿಗೆ ಜಾಗೃತಿ ಮೂಡಿಸಿದ್ದು, ಇಲಾಖೆಯ 21 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಅದರಲ್ಲಿ ಒಬ್ಬ ಸಿಬ್ಬಂದಿ ಸಾವನ್ನಪ್ಪಿರುವುದು ದುರಾದೃಷ್ಟಕರ ಸಂಗತಿ ಎಂದರು.
ಪಿಎಸ್‌ಐ ಉಮೇಶ್ ಬಾಬು, ಬಿಳಿಚೋಡು ಪಿಎಸ್‌ಐ ಶ್ರೀಧರ್,ಎಎಸ್‌ಐ ಚಂದ್ರಶೇಖರ್, ಮಹೇಶ್, ವೆಂಕಟೇಶ ರೆಡ್ಡಿ, ಎಸ್‌ಸಿ, ಎಸ್ಟಿ ಸಮಾಜದ ಮುಖಂಡರು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.