ದಾವಣಗೆರೆ ರಫ್ತು ಹಬ್‌ ಮಾಡಲು ಕ್ರಮ

ರಫ್ತುದಾರರ ಅಹವಾಲು ಆಲಿಸಿ ಅಗತ್ಯ ಕ್ರಮ

Team Udayavani, Nov 20, 2020, 3:42 PM IST

ದಾವಣಗೆರೆ ರಫ್ತು ಹಬ್‌ ಮಾಡಲು ಕ್ರಮ

ದಾವಣಗೆರೆ: ಜಿಲ್ಲೆಯನ್ನು ರಫ್ತು ಹಬ್‌ ಮಾಡಲು ಎಲ್ಲ ರೀತಿಯ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ತಿಳಿಸಿದರು.

ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ರಫ್ತು ಉದ್ದಿಮೆದಾರರ ಕುಂದು ಕೊರತೆಗಳ ನಿವಾರಿಸಿ, ರಫ್ತಿಗೆ ಉತ್ತೇಜನ ನೀಡಲು ರಚಿಸಲಾಗಿರುವ ಜಿಲ್ಲಾಮಟ್ಟದ ರಫ್ತು ಉತ್ತೇಜನ ಸಮಿತಿಯ ನಿಯಮಿತ ಸಭೆ ನಡೆಸಲಾಗುವುದು ಎಂದರು.

ಜಿಲ್ಲಾಮಟ್ಟದ ರಫ್ತು ಉತ್ತೇಜನ ಸಮಿತಿಯನಿಯಮಿತ ಸಭೆ ನಡೆಸುವ ಮೂಲಕ ರಫ್ತುದಾರರಅಹವಾಲುಗಳನ್ನು ಆಲಿಸಿ, ಸೂಕ್ತ ಕ್ರಮವಹಿಸಲಾಗುವುದು. ಜಿಲ್ಲೆಯನ್ನು ರಫ್ತು ಹಬ್‌ ಮಾಡಲುಎಲ್ಲ ರೀತಿಯ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ರಫ್ರುದಾರರಿಗೆ ಅವಶ್ಯಕವಾದ ಮಾಹಿತಿ ನೀಡಲುಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಪ್ರತ್ಯೇಕ ಕಚೇರಿ ತೆರೆಯಲುಕ್ರಮ ವಹಿಸಲಾಗುವುದು. ವಹಿವಾಟು ಕುರಿತುತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಡಿಷನಲ್‌ ಡೈರಕ್ಟರ್‌ ಜನರಲ್‌ ಆಫ್‌ ಫಾರಿನ್‌ ಟ್ರೇಡ್‌ ಜಿ.ವಿ.ಪಾಟಿಲ್‌ ಮಾತನಾಡಿ, ಜಿಲ್ಲೆಯಲ್ಲಿ ರಫ್ತು ಉತ್ತೇಜನಾ ಸಮಿತಿ ರಚಿಸಲಾಗಿದ್ದು, ಒಂದು ಜಿಲ್ಲೆ ಒಂದು ಉತ್ಪನ್ನ ಕಾರ್ಯಕ್ರಮ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಆರ್ಗ್ಯಾನಿಕ್‌ ಮಿಲೆಟ್ಸ್‌ (ನವಣೆ, ಸಜ್ಜೆ, ಸಾವೆ, ರಾಗಿ) ಹಾಗೂ ಮೆಕ್ಕೆಜೋಳ, ಉಪ ಉತ್ಪನ್ನಗಳನ್ನು ಗುರುತಿಸಲಾಗಿದೆ. ಅಡಕೆ, ಕಬ್ಬು, ಮಾರಿಗೋಲ್ಡ್‌ ಫ್ಲವರ್‌, ಫೌಂಡ್ರಿ ಇತರೆ ರಫ್ತು ವಸ್ತುಗಳಿಗೂ ಸಹ ಉತ್ತೇಜನ ನೀಡಲಾಗಿದೆ ಎಂದರು.

ಡಿಸ್ಟ್ರಿಕ್ಟ್ ಆಸ್‌ ಎ ಎಕ್ಸ್‌ಪೋರ್ಟ್‌ ಹಬ್‌ ಎಂಬ ಕಾರ್ಯಕ್ರಮ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಮೆಕ್ಕೆಜೋಳ, ಆರ್ಗ್ಯಾನಿಕ್‌(ಸಾವಯವ), ಮಿಲೆಟ್‌ ಸೇರಿದಂತೆ ಏಳು ಉತ್ಪನ್ನಗಳನ್ನು ಗುರುತಿಸಿದ್ದು, ಮಾರುಕಟ್ಟೆ ಸೌಲಭ್ಯ ಒದಗಿಸಲು ಹಾಗೂ ಉತ್ಪನ್ನಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಜಿಲ್ಲಾ ಕ್ರಿಯಾ ಯೋಜನೆ ತಯಾರಿಸಬೇಕು. ಜಿಲ್ಲೆಯಲ್ಲಿ ಎಷ್ಟು ರಫ್ತುದಾರರು ತಮ್ಮಉತ್ಪನ್ನಗಳನ್ನು ಯಾವ ದೇಶಗಳಿಗೆ ಎಷ್ಟು ಮೌಲ್ಯದ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತದೆ ಎಂಬ ಮಾಹಿತಿ ಸೇರಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಡಿಸೆಂಬರ್‌ ಒಳಗೆ ಸಲ್ಲಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಅಲ್ಲದೇ ಜಿಲ್ಲೆಯ ಉತ್ಪನ್ನಗಳಿಗೆ ಅವಶ್ಯಕವಾದ ಪರೀಕ್ಷಾ ಕೇಂದ್ರಗಳು, ಲಾಜಿಸ್ಟಿಕ್ಸ್‌ ಇತರೆ ವ್ಯವಸ್ಥೆಬಗ್ಗೆ ಸಹ ಉದ್ದಿಮೆದಾರರಿಂದ ಪ್ರಸ್ತಾವನೆ ಪಡೆದು ಸಲ್ಲಿಸುವಂತೆ ಸೂಚಿಸಿದರು. ಗ್ರೀನ್‌ ಅಗ್ರೋ ಪ್ಯಾಕ್‌ ಮಾಲೀಕ ಕರಿಬಸಪ್ಪ ಮಾತನಾಡಿ, ಯೂರೋಪ್‌ ಮತ್ತು ಇತರೆ ದೇಶಗಳಿಗೆ ಮಿಡಿಸೌತೆ ಮತ್ತು ಇತರೆ ತರಕಾರಿಗಳನ್ನು ರಫ್ತು ಮಾಡಲಾಗುತ್ತಿದೆ. ಕೋವಿಡ್‌ ಹಿನ್ನೆಲೆಯ ಕಾರಣ ಹೇಳಿ ಹಡಗಿನ ದರವನ್ನು ದುಪ್ಪಟ್ಟು ಹೆಚ್ಚಿಸಿರುವುದದರಿಂದರಫ್ತುದಾರರಿಗೆ ತುಂಬಾ ತೊಂದರೆಯಾಗುತ್ತಿದೆ. ದರ ಇಳಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಹಕರಿಸಬೇಕು ಮನವಿ ಮಾಡಿದರು.

ಇಂಡಸ್‌ ವೆಜ್‌ನ ಗಿರೀಶ್‌ ಮಾತನಾಡಿ, ತಾವು ಸಹ ಮಿಡಿ ಸೌತೆ ಮತ್ತು ತರಕಾರಿ ಹೊರದೇಶಗಳಿಗೆ ರಫ್ತು ಮಾಡುತ್ತೇವೆ. ತರಕಾರಿಗಳನ್ನು ಆಮದು ಮಾಡಿಕೊಂಡು ಇತರೆ ತರಕಾರಿಯನ್ನು ಸ್ಟಫ್‌ ಮಾಡಿಹೊರದೇಶಗಳಿಗೆ ರಫ್ತು ಕೂಡ ಮಾಡುತ್ತೇವೆ ಎಂದರು.ಮಿಲ್ಲೆಟ್‌ ಸಂಸ್ಕರಣಾ ಘಟಕದ ಕೃಪಾ ಮಾತನಾಡಿ, ತಾವು ಸಿರಿಧಾನ್ಯ (ಮಿಲೆಟ್‌)ಸಂಸ್ಕರಣಾ ಘಟಕವನ್ನು ನಡೆಸುತ್ತಿದ್ದೇವೆ ಎಂದರು. ಮೆಕ್ಕೆಜೊಳ ಉದ್ದಿಮೆದಾರ

ಬಸವರಾಜಪ್ಪ ತುರ್ಚಘಟ್ಟ ಮಾತನಾಡಿ, ಮೆಕ್ಕೆಜೋಳವನ್ನು ಇತರೆ ದೇಶಗಳಿಗೆ ರಫ್ತು ಮಾಡುವ ಮೂಲಕ ಉದ್ದಿಮೆದಾರನಾಗಿದ್ದೇನೆ. ನನ್ನಂತೆ ಅನೇಕ ಮೆಕ್ಕೆಜೋಳ ಬೆಳೆಯುವ ರೈತರು ರಫ್ತು ಉದ್ದಿಮೆಯಲ್ಲಿ ತೊಡಗಿದ್ದು, ಜಪಾನ್‌, ಸಿಂಗಾಪುರ್‌, ಮಲೇಶಿಯಾ ಇತರೆ ದೇಶಗಳಲ್ಲಿ ಮೆಕ್ಕೆಜೋಳದ ಬೇಡಿಕೆ ಹೆಚ್ಚಿದೆ. ಪ್ರಾಜೆಕ್ಟ್ ಪ್ರಕಾರ ಬ್ಯಾಂಕಿನಿಂದ ಸಾಲ ಸಿಗುತ್ತಿಲ್ಲ. ಸಕ್ರಿಯವಾಗಿರುವ ಘಟಕಗಳಿಗಾದರೂ ಶೀಘ್ರ ವರ್ಕಿಂಗ್‌ ಕ್ಯಾಪಿಟಲ್‌ ಬಿಡುಗಡೆ ಮಾಡಬೇಕು. ಮೆಕ್ಕೆಜೋಳದ ತೇವಾಂಶ ಪರೀಕ್ಷಾ ಕೇಂದ್ರ ತೆರೆದರೆ ಅನುಕೂಲವಾಗುತ್ತದೆ ಎಂದರು.

ಕೃಷಿ ಆಧಾರಿಕ ಉತ್ಪನ್ನಗಳಿಗೆ ವರ್ಕಿಂಗ್‌ ಕ್ಯಾಪಿಟಲ್‌ ಬಹಳ ಮುಖ್ಯವಾಗಿದ್ದು, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ರವರು ಸಾಲ ವಿಳಂಬ ಸೇರಿದಂತೆ ಇತರೆ ಸಮಸ್ಯೆ ಕುರಿತು ಕ್ರಮ ವಹಿಸಬೇಕು ಎಂದು ಡಿಸಿ ಸೂಚನೆ ನೀಡಿದರು.

ಪ್ರಾಜೆಕ್ಟ್ ವಿಳಂಬ ಪ್ರಕರಣಗಳಿವೆ. ವರ್ಕಿಂಗ್‌ ಕ್ಯಾಪಿಟಲ್‌ನ್ನು ಪ್ರಾದೇಶಿಕ ಕಚೇರಿಯವರು ನೀಡಬೇಕು. ಪ್ರಕರಣವಾರು ತಿಳಿದುಕೊಂಡು ಕ್ರಮ ವಹಿಸುವುದಾಗಿ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಸುಶ್ರುತ್‌ ಡಿ. ಶಾಸ್ತ್ರಿವ ತಿಳಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜಯಪ್ರಕಾಶ್‌ ನಾರಾಯಣ, ಉಪ ನಿರ್ದೇಶಕ ಮಂಜುನಾಥ, ಗ್ರಾಮಾಂತರ ಕೈಗಾರಿಕಾ ವಿಭಾಗದ ಪ್ರಭಾರ ಉಪನಿರ್ದೇಶಕ ಮನ್ಸೂರ್‌, ಪರಿಸರ ಅಧಿಕಾರಿ ಕೆ.ಬಿ.ಕೊಟ್ರೇಶ್‌, ಝಡ್‌.ಕೆ. ಗಾರ್ಮೆಂಟ್ಸ್‌ನ ಡಿ.ಶೇಷಾಚಲ, ಸಂದೀಪ್‌, ಮಹಾದೇವಯ್ಯ, ನಾಗರಾಜಪ್ಪ, ಪ್ರದೀಪ್‌ ಇದ್ದರು

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.