ಮಾವು ಸಂರಕ್ಷಣಾ ಕ್ರಮ ಕೈಗೊಳ್ಳಲು ಸಲಹೆ


Team Udayavani, Jan 7, 2019, 7:54 AM IST

dvg-2.jpg

ದಾವಣಗೆರೆ: ಜನವರಿ ತಿಂಗಳು ಮಾವಿನ ಹೂ ಬಿಡುವ ಸಮಯವಾಗಿರುವುದರಿಂದ ಅಗತ್ಯ ಸಸ್ಯ ಸಂರಕ್ಷಣಾ ಕ್ರಮ ತೆಗೆದುಕೊಳ್ಳಲು ಸೂಕ್ತ ಕಾಲ ಎಂದು ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ| ಎಂ.ಜಿ. ಬಸವನಗೌಡ ತಿಳಿಸಿದ್ದಾರೆ. 

ದಾವಣಗೆರೆ ಜಿಲ್ಲೆಯಲ್ಲಿ 4,376 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಪ್ರಮುಖವಾಗಿ ಚನ್ನಗಿರಿ, ಹರಪನಹಳ್ಳಿ ಮತ್ತು ಜಗಳೂರು ತಾಲೂಕುಗಳ ಹೆಚ್ಚಿನ ಪ್ರದೇಶದಲ್ಲಿ ಮಾವು ಬೆಳೆಯ ಲಾಗುತ್ತದೆ. ವಾರ್ಷಿಕ 35,279 ಮೆಟ್ರಿಕ್‌ ಟನ್‌ಗಳಷ್ಟು ಮಾವು ಉತ್ಪಾದನೆ ಆಗಲಿದೆ. ಪ್ರತೀ ಹೆಕ್ಟೇರ್‌ ಗೆ ಇಳುವರಿ ಸರಾಸರಿ 8 ಟನ್‌ಗಳಿಷ್ಟಿದೆ ಎಂದು ತಿಳಿಸಿದ್ದಾರೆ.

ಕಳೆದ 8-10 ದಿನಗಳಿಂದ ಜಿಲ್ಲೆಯಾದ್ಯಂತ ಚಳಿ ಹೆಚ್ಚಾಗಿದೆ. ಸರಿ ಸಮಾರು 8 ರಿಂದ 14 ಡಿಗ್ರಿಯಷ್ಟಿದೆ. ಚಳಿ ಬಿದ್ದ ನಂತರ ಹೂವಿನ ಮೊಗ್ಗುಗಳು ಬಿಡುತ್ತವೆ. ಈ ಸಮಯದಲ್ಲಿ ಗಿಡಗಳಿಗೆ ನೀರು ಬಿಡುವ ಅಗತ್ಯ ಇರುವುದಿಲ್ಲ. ನೀರು ಬಿಟ್ಟರೆ ಇರುವ ಹೂವುಗಳು ಉದುರುವ ಸಂಭವವಿರುತ್ತದೆ. ಆದುದರಿಂದ ಹೂವು ಕಾಯಿಯಾಗಿ ಬಟಾಣಿ ಗಾತ್ರ ಬಂದ ನಂತರ ನೀರು ಕೊಟ್ಟರೆ ಉತ್ತಮ ಎಂದು ತಿಳಿಸಿದ್ದಾರೆ. 

ಯಾವುದಾದರೂ ತಾಕಿನಲ್ಲಿ ಹೂವು ಬಿಟ್ಟಿಲ್ಲವಾದರೆ ಅಂತಹ ತಾಕಿನಲ್ಲಿ ಕೃತಕವಾಗಿ ಮರದ ಕೆಳಗೆ ಹೊಗೆಯನ್ನು ಹಾಕುವುದು ಅಥವಾ ಪ್ರತಿ ಲೀಟರ್‌ ನೀರಿನಲ್ಲಿ ಅರ್ಧ ಮಿಲೀ ನೈಟ್ರೋಬೆಂಜಿನ್‌ ಬೆರೆಸಿ ಸಿಂಪಡಿಸಿದರೆ ಹೂವಿನ ಪ್ರಮಾಣವನ್ನು ಹೆಚ್ಚಿಸಬಹುದು ಎಂದು ತಿಳಿಸಿದ್ದಾರೆ.

ಉಷ್ಣಾಂಶ ಸಹ ಏರುತ್ತಿರುವ ಪರಿಣಾಮ ಮಾವಿಗೆ ಜಿಗಿಹುಳುಗಳ ಕಾಟ ಹೆಚ್ಚಾಗುವ ಸಂಭವವಿರುವುದರಿಂದ 0.5 ಮಿಲೀ ಇಮಿಡಾಕ್ಲೋಪ್ರಿಡ್‌ ಅಥವಾ 2 ಮಿಲೀ ಪಿಪ್ರೋನಿಲ್‌ನ್ನು ಪ್ರತೀ ಲೀಟರ್‌ ನೀರಿಗೆ ಬೆರಸಿ ಸಿಂಪಡಿಸಬೇಕು. ಜೊತೆಗೆ ಕಾಯಿಗಳ ಗಾತ್ರ ಮತ್ತು ಗುಣಮಟ್ಟ ಹೆಚ್ಚಿಸಲು ಮಾವು ಸ್ಪೆಷಲ್‌ 5 ಗ್ರಾಂ ಲಘು ಪೋಷಕಾಂಶವನ್ನು ಪ್ರತೀ ಲೀಟರ್‌ ನೀರಿನಲ್ಲಿ ಬೆರಸಿ ಸಿಂಪಡಿಸಿದರೆ ಉತ್ತಮ ಫಸಲನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.

ಮಾವಿನಲ್ಲಿ ಬೂದಿ ರೋಗದ ಸಂಭವವಿದ್ದರೆ 1 ಮಿಲೀ ಹೆಕ್ಸಾಕೊನೋಜೋಲ್‌ ಅಥವಾ 2 ಗ್ರಾಂ ಕಾರ್ಬಂಡೈಜಿಯಮ್‌ನ್ನು ಪ್ರತೀ ಲೀಟರ್‌ ನೀರಿನಲ್ಲಿ ಬೆರಸಿ ಸಿಂಪಡಿಸಿ. ಹೆಚ್ಚಿನ ಮಾಹಿತಿಗೆ ತೋಟಗಾರಿಕಾ ಇಲಾಖೆ ಅಥವಾ ತರಳಬಾಳು ಕೃಷಿ ವಿಜ್ಞಾನ ಕೇಂದ್ರವನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.