ಚರ್ಚೆ ಬಳಿಕ ಪ್ರತ್ಯೇಕ ಧರ್ಮ ಶಿಫಾರಸ್ಸು
Team Udayavani, Jun 17, 2017, 1:44 PM IST
ದಾವಣಗೆರೆ: ವೀರಶೈವ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ಕೊಡುವ ಬಗ್ಗೆ ಆ ಸಮಾಜದ ಮಠಾಧೀಶರು, ಮುಖಂಡರೊಂದಿಗೆ ಚರ್ಚಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಕ ಶಾಮನೂರು ಶಿವಶಂಕರಪ್ಪನವರ 87ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಶ್ರೀ ಡಾ| ಶಾಮನೂರು ಶಿವಶಂಕರಪ್ಪ ಅಭಿಮಾನಿಗಳ ಬಳಗ ಆಯೋಜಿಸಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.
ಮಹಾನ್ ಮಾನವತಾವಾದಿ ಬಸವಣ್ಣನವರು ವೀರಶೈವ ಲಿಂಗಾಯತ ಧರ್ಮ ಇಡೀ ಮನುಕುಲ ಒಳಗೊಂಡಿರುವ ಸ್ವತಂತ್ರ ಧರ್ಮವಾಗಬೇಕು ಎಂಬುದನ್ನು ಬಯಸಿದ್ದರು. ಅದರಂತೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡುವ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಲಿದೆ.
ಕೇಂದ್ರ ಸ್ವತಂತ್ರ ಧರ್ಮದ ಸ್ಥಾನಮಾನ ನೀಡಲಿ ಎಂದರು. ಬೆಂಗಳೂರಿನಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ವೀರಶೈವ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನದ ಬಗ್ಗೆ ಪ್ರಸ್ತಾಪಿಸಿದ್ದ ಸಂದರ್ಭದಲ್ಲಿ ತಾವು ಕೇಂದ್ರಕ್ಕೆ ಶಿಫಾರಸು ಮಾಡುವ ಭರವಸೆ ನೀಡಿದ್ದೆ.
ಆ ಸಮಾಜದ ಸ್ವಾಮೀಜಿಗಳು, ಮುಖಂಡರೊಂದಿಗೆ ಚರ್ಚಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದ ಅವರು, ಸಮಾಜದ ಸ್ವಾಮೀಜಿಗಳು, ಮುಖಂಡರ ಸಭೆ ಆಯೋಜನೆಗೆ ತೋಟಗಾರಿಕೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ಗೆ ಇದೇ ಸಂದರ್ಭದಲ್ಲಿ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.